< ಮತ್ತಾಯನು 7 >
1 ೧ “ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.
১তোমরা বিচার করো না, যেন বিচারিত না হও।
2 ೨ ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.
২কারণ যেরকম বিচারে তোমরা বিচার কর, সেই রকম বিচারে তোমরাও বিচারিত হবে; এবং তোমরা যে পরিমাণে পরিমাপ কর, সেই পরিমাণে তোমাদের জন্য পরিমাপ করা যাবে।
3 ೩ “ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?
৩আর তোমার ভাইয়ের চোখে যে কুটো আছে, তাই কেন দেখছ, কিন্তু তোমার নিজের চোখে যে কড়িকাঠ আছে, তা কেন ভেবে দেখছ না?
4 ೪ ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.
৪অথবা তুমি কেমন করে নিজের ভাইকে বলবে, এস, আমি তোমার চোখ থেকে কুটোটা বের করে দিই? আর দেখ, তোমার নিজের চোখে কড়িকাঠ রয়েছে।
5 ೫ ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.
৫হে ভণ্ড, আগে নিজের চোখ থেকে কড়িকাঠ বের করে ফেল, আর তখন তোমার ভাইয়ের চোখ থেকে কুটোটা বের করবার জন্য স্পষ্ট দেখতে পাবে।
6 ೬ “ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.
৬পবিত্র জিনিস কুকুরদেরকে দিও না এবং তোমাদের মুক্তা শূকরদের সামনে ফেলো না; যদি তারা পা দিয়ে তা দলায় এবং ফিরে তোমাদের টুকরো টুকরো করে ছিঁড়ে ফেলে।
7 ೭ “ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;
৭চাও, তোমাদের দেওয়া হবে, খোঁজ কর, তোমরা পাবে; দরজায় আঘাত কর, তোমাদের জন্য খুলে দেওয়া হবে।
8 ೮ ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.
৮কারণ যে কেউ চায়, সে গ্রহণ করে এবং যে খোঁজ করে, সে পায়; আর যে আঘাত করে, তার জন্য খুলে দেওয়া হবে।
9 ೯ “ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?
৯তোমাদের মধ্যে এমন লোক কে যে, যার ছেলে রুটি চাইলে তাকে পাথর দেবে,
10 ೧೦ ಮೀನು ಕೇಳಿದರೆ ಹಾವನ್ನು ಕೊಡುವನೋ?
১০কিংবা মাছ চাইলে তাকে সাপ দেবে?
11 ೧೧ ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
১১অতএব তোমরা মন্দ হয়েও যদি তোমাদের সন্তানদের ভালো ভালো জিনিস দিতে জান, তবে কত না বেশি তোমাদের স্বর্গের পিতা দেবেন, যারা তাঁর কাছে চায়, তাদের ভালো ভালো জিনিস দেবেন।
12 ೧೨ ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
১২অতএব সব বিষয়ে তোমরা যা যা ইচ্ছা কর যে, লোকে তোমাদের প্রতি করে, তোমরাও তাদের প্রতি সেই রকম কর; কারণ এটাই আইনের ও ভাববাদী গ্রন্থের মূল বিষয়।
13 ೧೩ “ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.
১৩সরু দরজা দিয়ে প্রবেশ কর; কারণ বিনাশে যাবার দরজা চওড়া ও পথ চওড়া এবং অনেকেই তা দিয়ে প্রবেশ করে;
14 ೧೪ ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
১৪কারণ জীবনে যাবার দরজা সরু ও পথ কঠিন এবং অল্প লোকেই তা পায়।
15 ೧೫ “ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.
১৫নকল ভাববাদীদের থেকে সাবধান; তারা মেষের বেশে তোমাদের কাছে আসে, কিন্তু ভিতরে গ্রাসকারী নেকড়ে বাঘ।
16 ೧೬ ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?
১৬তোমরা তাদের ফলের মাধ্যমে তাদের চিনতে পারবে। লোকে কি কাঁটাগাছ থেকে দ্রাক্ষাফল, কিংবা শিয়ালকাঁটা থেকে ডুমুরফল জোগাড় করে?
17 ೧೭ ಹಾಗೆಯೇಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;
১৭সেই প্রকারে প্রত্যেক ভাল গাছে ভাল ফল ধরে, খারাপ গাছে খারাপ ফল ধরে।
18 ೧೮ ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು.
১৮ভাল গাছে খারাপ ফল ধরতে পারে না এবং খারাপ গাছে ভাল ফল ধরতে পারে না।
19 ೧೯ ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.
১৯যে কোন গাছে ভাল ফল ধরে না, তা কেটে আগুনে ফেলে দেওয়া যায়।
20 ೨೦ ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.
২০অতএব তোমরা ওদের ফলের মাধ্যমে ওদেরকে চিনতে পারবে।
21 ೨೧ “ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
২১যারা আমাকে হে প্রভু, হে প্রভু বলে, তারা সবাই যে স্বর্গরাজ্যে প্রবেশ করতে পারবে, এমন নয়, কিন্তু যে ব্যক্তি আমার স্বর্গস্থ পিতার ইচ্ছা পালন করে, সেই পারবে।
22 ೨೨ ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.
২২সেই দিন অনেকে আমাকে বলবে, হে প্রভু, হে প্রভু, আপনার নামেই আমরা কি ভাববাণী বলিনি? আপনার নামেই কি ভূত ছাড়াই নি? আপনার নামেই কি অনেক আশ্চর্য্য কাজ করিনি?
23 ೨೩ ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.
২৩তখন আমি তাদের স্পষ্টই বলব, আমি কখনও তোমাদের জানি না; হে অধর্মাচারীরা, আমার কাছ থেকে দূর হও।
24 ೨೪ “ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.
২৪অতএব যে কেউ আমার এই সব কথা শুনে পালন করে, তাকে এমন একজন বুদ্ধিমান লোক বলা যাবে, যে পাথরের উপরে নিজের ঘর তৈরী করল।
25 ೨೫ ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.
২৫পরে বৃষ্টি নামল, বন্যা এলো, বাতাস বয়ে গেল এবং সেই ঘরে লাগল, তা সত্বেও তা পড়ল না, কারণ পাথরের উপরে তার ভিত্তিমূল স্থাপিত হয়েছিল।
26 ೨೬ ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.
২৬আর যে কেউ আমার এই সব কথা শুনে পালন না করে, সে এমন একজন বোকা লোকের মত, যে বালির উপরে নিজের ঘর তৈরী করল।
27 ೨೭ ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.
২৭পরে বৃষ্টি নামল, বন্যা এলো, বাতাস বয়ে গেল এবং সেই ঘরে আঘাত করল, তাতে তা পড়ে গেল ও তার পতন ঘোরতর হল।
28 ೨೮ “ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.
২৮যীশু যখন এই সব কথা শেষ করলেন, লোকরা তাঁর শিক্ষায় চমৎকৃত হল;
29 ೨೯ ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
২৯কারণ তিনি ক্ষমতাপন্ন ব্যক্তির মত তাদের শিক্ষা দিতেন, তাদের ব্যবস্থার শিক্ষকদের মত নয়।