< ಮತ್ತಾಯನು 9 >

1 ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.
Då steg han i skeppet, och for utöfver igen, och kom uti sin stad.
2 ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
Och si, de hade in för honom en borttagnan, som låg uti ene säng. När nu Jesus såg deras tro, sade han till den borttagna: Var vid ett godt mod, min son, dina synder förlåtas dig.
3 ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Och si, somlige utaf de Skriftlärda sade vid sig sjelfva: Denne häder Gud.
4 ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?
Men när Jesus såg deras tankar, sade han: Hvi tänken I ondt i edor hjerta?
5 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಅನ್ನುವುದೋ?
Hvilket är lättare säga: Dina synder förlåtas dig; eller säga: Statt upp, och gack?
6 ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.
Men på det I skolen veta, att menniskones Son hafver magt på jordene till att förlåta synder, sade han till den borttagna: Statt upp, tag dina säng, och gack i ditt hus.
7 ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
Och han stod upp, och gick hem.
8 ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.
När folket det såg, förundrade de sig, och prisade Gud, som sådana magt hade gifvit menniskom.
9 ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
Och när Jesus gick dädan, såg han en man sittandes vid tullen, som het Mattheus; och han sade till honom: Följ mig. Då stod han upp, och följde honom.
10 ೧೦ ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು.
Och det begaf sig att, när han satt vid bord i hans hus, si, der kommo månge Publicaner och syndare, och såto till bords med Jesu och hans Lärjungar.
11 ೧೧ ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
När de Phariseer det sågo, sade de till hans Lärjungar: Hvi äter edar mästare med Publicaner och syndare?
12 ೧೨ ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.
När Jesus det hörde, sade han till dem: De helbregda behöfva icke läkare, utan de kranke;
13 ೧೩ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
Men går, och lärer hvad det är: Jag hafver lust till barmhertighet, och icke till offer; jag är icke kommen till att kalla de rättfärdiga, utan syndare till bättring.
14 ೧೪ ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,
Då kommo till honom Johannis Lärjungar, och sade: Hvi faste vi och Phariseerna så mycket, och dine Lärjungar fasta intet?
15 ೧೫ “ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ
Då sade Jesus till dem: Huru kan bröllopsfolket sörja, så länge brudgummen är när dem? Men de dagar skola komma, att brudgummen skall tagas ifrå dem, och då skola de fasta.
16 ೧೬ ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.
Ingen lappar ett gammalt kläde med en ny klut; ty han rifver likväl kluten af klädena igen, och hålet blifver värre.
17 ೧೭ ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು.
Ej heller låter man nytt vin i gamla flaskor; annars gå flaskorna sönder, och vinet spilles ut, och flaskorna förderfvas; utan man låter nytt vin i nya flaskor, så blifver både förvarad.
18 ೧೮ ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.
Vid han detta talade till dem, si, då kom en öfverste, och tillbad honom, och sade: Herre, min dotter är nu straxt blifven död; men kom, och lägg dina hand på henne, så blifver hon lefvandes.
19 ೧೯ ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು.
Jesus stod upp, och följde honom, och hans Lärjungar.
20 ೨೦ ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,
Och si, en qvinna, som hade lidit blodgång i tolf år, gick bakefter honom, och kom vid hans klädafåll;
21 ೨೧ “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
Ty hon sade vid sig sjelf: Måtte jag allenast komma vid hans kläder, så blefve jag helbregda.
22 ೨೨ ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.
Då vände Jesus sig om, och som han såg henne, sade han: Var vid goda tröst, dotter, din tro hafver hulpit dig. Och qvinnan vardt helbregda i samma stund.
23 ೨೩ ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,
Och när Jesus kom i öfverstans hus, och såg piparena, och folket sorlande,
24 ೨೪ “ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.
Sade han till dem: Går edra färde; pigan är icke död, men hon sofver. Och de gjorde spe af honom.
25 ೨೫ ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು.
När nu folket var utdrifvet, gick han in, och tog henne i handen; och pigan stod upp.
26 ೨೬ ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.
Och detta ryktet gick öfver det hela landet.
27 ೨೭ ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.
Och när Jesus gick dädan, följde honom två blinde; de ropade, och sade: O Davids Son, förbarma dig öfver oss.
28 ೨೮ ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.
Och när han kom i huset, stego de blinde fram till honom; och Jesus sade till dem: Tron I, att jag kan detta göra eder? Då sade de till honom: Ja, Herre.
29 ೨೯ ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ” ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು.
Då tog han på deras ögon, och sade: Ske eder efter edra tro.
30 ೩೦ ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.
Och deras ögon vordo öppnade; och Jesus hotade dem, sägandes: Ser till, att ingen får detta veta.
31 ೩೧ ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.
Men de gingo ut, och beryktade honom i det hela landet.
32 ೩೨ ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು.
När desse voro utgångne, si, då hade de ena mennisko fram för honom, som var en dumbe och besatt.
33 ೩೩ ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.
Och när djefvulen var utdrifven, talade dumben. Och folket förundrade sig, och sade: Sådant hafver aldrig varit sedt i Israel.
34 ೩೪ ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು.
Men de Phariseer sade: Med den öfversta djefvulen drifver han djeflar ut.
35 ೩೫ ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
Och Jesus gick omkring i alla städer och byar, lärde i deras Synagogor, och predikade Evangelium om riket, och helade allahanda sjuko, och allahanda krankhet ibland folket.
36 ೩೬ ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.
Och när han såg folket, ömkade han sig öfver dem, att de voro förlåtne och förskingrade, som de får som ingen herdan hade.
37 ೩೭ ಆತನು ತನ್ನ ಶಿಷ್ಯರಿಗೆ, “ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ.
Då sade han till sina Lärjungar: Säden är mycken, och arbetarena äro få.
38 ೩೮ ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು.
Beder fördenskull sädenes Herra, att han sänder arbetare i sina säd.

< ಮತ್ತಾಯನು 9 >