< ಮೀಕನು 1 >
1 ೧ ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.
১যিহূদাৰ ৰজা যোথম, আহজ, আৰু হিষ্কিয়াৰ ৰাজত্বৰ সময়ত চমৰিয়া আৰু যিৰূচালেমৰ বিষয়ে দৰ্শনত পোৱা, মোৰেষ্টিয়া মীখালৈ অহা যিহোৱাৰ বাক্য।
2 ೨ ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.
২হে লোকসকল, সকলোৱে শুনক। হে পৃথিৱী আৰু তাত থকা সকলোৱে শুনক। প্ৰভু যিহোৱা নিজৰ পবিত্ৰ মন্দিৰৰ পৰা আপোনালোকৰ বিৰুদ্ধে সাক্ষী হওক;
3 ೩ ಇಗೋ ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ. ಭೂಮಿಯ ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ.
৩চাওক, যিহোৱা নিজৰ স্থানৰ পৰা ওলাই আহিছে; তেওঁ নামি আহিব আৰু পৃথিবীত থকা মুৰ্ত্তি পূজা কৰা মন্দিৰবোৰ ধ্বংস কৰিব।
4 ೪ ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.
৪জুইৰ তাপত মম গলাৰ দৰে পৰ্ব্বতবোৰ তেওঁৰ আগত পমি যাব, এঢলীয়া ঠাইৰ পৰা যেনেকৈ পানী ঢালিলে তললৈ বৈ আহে তেনেকৈ তেওঁৰ আগত উপত্যকাবোৰ ভাঙি ছিন্ন ভিন্ন হৈ যাব।
5 ೫ ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!
৫যাকোবৰ বিদ্ৰোহ, আৰু ইস্ৰায়েল-বংশৰ পাপৰ কাৰণেই এই সকলো হ’ব; যাকোবৰ বিদ্রোহৰ কাৰণ কি আছিল? চমৰিয়া নহয়নে নে? যিহূদাৰ মন্দিৰবোৰৰ কাৰণ কি? যিৰূচালেম নহয় নে?
6 ೬ ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು.
৬মই পথাৰত চমৰিয়াক দ্ৰাক্ষাবাৰীত গছ ৰোৱা ঠাইৰ দৰে, ধ্বংস স্তূপ কৰিম। মই তেওঁৰ গৃহৰ শিলবোৰ উপত্যকালৈ বগৰাই পেলাম, মই তেওঁৰ ভিত্তিমূল অনাবৃত কৰিম।
7 ೭ ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು.
৭তেওঁৰ সকলো কটা-মূৰ্ত্তিবোৰ ভাঙি ডোখৰ ডোখৰ কৰা হ’ব, আৰু তেওঁৰ সকলো উপহাৰ জুইৰে পোৰা যাব। তেওঁৰ সকলো প্ৰতিমাবোৰ মই উচ্ছন্ন কৰিম; কাৰণ তেওঁ বেশ্যাবৃত্তিৰ পৰা সেই সকলো উপহাৰৰ গোটাইছিল, আৰু বেশ্যাই পৰিশোধ কৰাৰ দৰে, তেওঁলোকে ঘূৰাই দিব।”
8 ೮ ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು.
৮এই কাৰণে মই বিলাপ আৰু ক্রন্দন কৰি চিঞৰিম; মই খালি ভৰি আৰু বিবস্ত্র হৈ যাম; মই শিয়ালৰ দৰে চিঞৰিম, আৰু ফেঁচাৰ দৰে শোক প্রকাশ কৰিম।
9 ೯ ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.
৯তেওঁৰ ঘাঁবোৰ সুস্থ হ’ব নোৱাৰাৰ কাৰণে; সেইবোৰ যিহূদালৈকে আহিল। সেই ঘাঁবোৰ যিৰূচালেমলৈ মোৰ লোকসকলৰ দুৱাৰলৈ আহি পালে।
10 ೧೦ ಇದನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ, ಅಳಲೇಬೇಡಿರಿ, ಬೇತ್ಲೆಯಪ್ರದಲ್ಲಿ ಧೂಳಿನೊಳಗೆ ಹೊರಳಾಡಿರಿ.
১০গাত নগৰত এই বিষয়ে নকবা, আৰু একেবাৰে নাকান্দিবা, বৈৎলি-অফ্ৰাত মই নিজকে ধূলিত বাগৰাম।
11 ೧೧ ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ. ಚಾನಾನಿನವರು ಹೊರಡರು. ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು.
১১বিবস্ত্ৰ আৰু লজ্জিত হৈ চাফীৰৰ নিবাসী সকলৰ মাজেৰে যোৱা। চাননৰ নিবাসী সকল বাহিৰলৈ ওলাই নাহিল। তেওঁলোকৰ ৰক্ষণাবেক্ষণ বঞ্চিত কৰাৰ বাবে বৈৎ-এচেলে বিলাপ কৰিলে।
12 ೧೨ ಕೇಡು ಯೆಹೋವನಿಂದ ಹೊರಟು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ತಮಗೆ ಮೇಲುಂಟಾಗುವುದಿಲ್ಲವೋ ಎಂದು ವೇದನೆಪಡುತ್ತಾರೆ.
১২কাৰণ মাৰোৎ নিবাসী সকলে শুভ সম্বাদৰ বাবে আগ্রহেৰে অপেক্ষা কৰি আছিল, কিন্তু যিৰূচালেমৰ দুৱাৰলৈ, যিহোৱাৰ পৰা দুৰ্যোগ নামি আহিল।
13 ೧೩ ಲಾಕೀಷಿನವರೇ ಅಶ್ವಗಳನ್ನು ರಥಕ್ಕೆ ಕಟ್ಟಿರಿ. ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ, ಹೌದು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು.
১৩লাখীচ নিবাসী সকলৰ ঘোঁৰাৰ দলত ৰথ লগোৱা; চিয়োন জীয়াৰী বাবে লাখীচেই পাপৰ আৰম্ভণ; কিয়নো ইস্ৰায়েলৰ অধৰ্ম কাৰ্যবোৰ তোমাৰ মাজত পোৱা গল।
14 ೧೪ ಆದಕಾರಣ ನೀವು ಮೋರೆಷತ್ ಗತ್ ಊರಿಗೆ ಬಳುವಳಿ ಕೊಡಬೇಕಾಗುವುದು. ಅಕ್ಜೀಬಿನ ಮನೆಗಳಿಂದ ಇಸ್ರಾಯೇಲಿನ ಅರಸರಿಗೆ ಮೋಸವಾಗುವುದು.
১৪সেয়ে আপুনি মোৰেচৎ-গতক বিদায় উপহাৰ দিব; ইস্ৰায়েলৰ ৰজাসকলক অকজীবৰ নগৰে নিৰাশ কৰিব।
15 ೧೫ ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು. ಇಸ್ರಾಯೇಲಿನ ನಾಯಕರು ಅದುಲ್ಲಾಮ್ ಪಟ್ಟಣಕ್ಕೆ ಸೇರುವುದು.
১৫মাৰেচা-নিবাসী সকলক মই আপোনাৰ ওচৰলৈ আনিম, তাৰে এজনে আপোনাৰ অধিকাৰ ল’ব; ইস্ৰায়েলৰ মূখ্য লোকসকল অদুল্লমৰ গুহালৈকে যাব।
16 ೧೬ ಯೆಹೂದವೇ, ನಿನ್ನಿಂದ ಸೆರೆಹೋಗಿರುವ ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ ಮತ್ತು ತಲೆಬೋಳಿಸಿಕೋ. ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ.
১৬চুলি কাটক, আৰু মূৰ খুৰাওক। যি সন্তান সকলৰ কাৰণে আপুনি আনন্দ কৰে; ঈগল চৰাইৰ দৰে নিজকে টপা কৰক; কাৰণ আপোনাৰ সন্তান সকল আপোনাৰ পৰা বহিষ্কৃত হ’ব।