< ಮೀಕನು 2 >
1 ೧ ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.
उन पर अफ़सोस, जो बदकिरदारी के मंसूबे बाँधते और बिस्तर पर पड़े — पड़े शरारत की तदबीरें ईजाद करते हैं, और सुबह होते ही उनको 'अमल में लाते हैं; क्यूँकि उनको इसका इख़्तियार है।
2 ೨ ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.
वह लालच से खेतों को ज़ब्त करते, और घरों को छीन लेते हैं; और यूँ आदमी और उसके घर पर, हाँ, मर्द और उसकी मीरास पर ज़ुल्म करते हैं।
3 ೩ ಆದಕಾರಣ ಯೆಹೋವನು ಇಂತೆನ್ನುತ್ತಾನೆ, “ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ, ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವುದಕ್ಕಾಗದು. ಅದು ಕೆಟ್ಟ ಕಾಲವೇ ಸರಿ.
इसलिए ख़ुदावन्द यूँ फ़रमाता है कि देख, मैं इस घराने पर आफ़त लाने की तदबीर करता हूँ जिससे तुम अपनी गर्दन न बचा सकोगे, और गर्दनकशी से न चलोगे; क्यूँकि ये बुरा वक़्त होगा।
4 ೪ ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಅಪಹಾಸ್ಯ ಮಾಡಿ ಲಾವಣಿಕಟ್ಟಿ ಹಾಡುವರು. ‘ಅಯ್ಯೋ, ನಾವು ತೀರಾ ಸೂರೆಹೋದೆವಲ್ಲಾ ಯೆಹೋವನು ನಮ್ಮವರ ಸ್ವತ್ತನ್ನು ಪರಾಧೀನಮಾಡುತ್ತಿದ್ದಾನೆ. ಅಯ್ಯೋ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ, ನಮ್ಮ ಭೂಮಿಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ’” ಎಂದು ಶೋಕಗೀತವಾಗಿ ಹಾಡುವರು.
उस वक़्त कोई तुम पर ये मसल लाएगा और पुरदर्द नौहे से मातम करेगा, और कहेगा, “हम बिल्कुल ग़ारत हुए; उसने मेरे लोगों का हिस्सा बदल डाला; उसने कैसे उसको मुझ से जुदा कर दिया! उसने हमारे खेत बाग़ियों को बाँट दिए।”
5 ೫ ಹೀಗಿರಲು ಯೆಹೋವನ ಸಭೆಯವರ ಭೂಮಿಯ ಮೇಲೆ ಚೀಟು ಹಾಕಿ ನೂಲೆಳೆಯಲಿಕ್ಕೆ ನಿಮ್ಮಲ್ಲಿ ಯಾರೂ ಇರುವುದಿಲ್ಲ.
इसलिए तुम में से कोई न बचेगा, जो ख़ुदावन्द की जमा'अत में पैमाइश की रस्सी डाले।
6 ೬ ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.
बकवासी कहते हैं, “बकवास न करो! इन बातों के बारे में बकवास न करो। ऐसे लोगों से रुस्वाई जुदा न होगी।”
7 ೭ ಯಾಕೋಬ ವಂಶವೇ, “ಯೆಹೋವನ ಆತ್ಮವು ತಾಳ್ಮೆಯಿಲ್ಲದ್ದೋ? ಇಂಥ ಕೃತ್ಯಗಳು ಆತನವೋ” ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೆ ಹಿತಕರವಷ್ಟೇ.
ऐ बनी या'क़ूब, क्या ये कहा जाएगा कि ख़ुदावन्द की रूह क़ासिर हो गई? क्या उसके यही काम हैं? क्या मेरी बातें रास्तरौ के लिए फ़ायदेमन्द नहीं।
8 ೮ ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ. ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿ ಬರುವವರ ಮೇಲಂಗಿಯನ್ನು ಕಿತ್ತುಕೊಳ್ಳುತ್ತೀರಿ.
अभी कल की बात है कि मेरे लोग दुश्मन की तरह उठे; तुम सुलह पसंद — ओ — बेफ़िक्र राहगीरों की चादर उतार लेते हो।
9 ೯ ನನ್ನ ಜನರ ಸ್ತ್ರೀಯರನ್ನು, ಅವರ ಪ್ರಿಯವಾದ ಮನೆಗಳಿಂದ ತಳ್ಳಿಹಾಕುತ್ತೀರಿ. ಅವರ ಸಣ್ಣ ಮಕ್ಕಳಿಗೆ ನನ್ನ ಆಶೀರ್ವಾದದ ಹಕ್ಕನ್ನು ಇನ್ನೆಂದಿಗೂ ಸಿಕ್ಕದಂತೆ ತಪ್ಪಿಸುತ್ತೀರಿ.
तुम मेरे लोगों की 'औरतों को उनके मरग़ूब घरों से निकाल देते हो, और तुमने मेरे जलाल को उनके बच्चों पर से हमेशा के लिए दूर कर दिया।
10 ೧೦ ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು. ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.
उठो, और चले जाओ, क्यूँकि ला'इलाज — ओ — मोहलिक नापाकी की वजह से ये तुम्हारी आरामगाह नहीं है।
11 ೧೧ ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.
अगर कोई झूट और बतालत का पैरो कहे कि मैं शराब — ओ — नशा की बातें करूँगा, तो वही इन लोगों का नबी होगा।
12 ೧೨ ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.
ऐ या'क़ूब, मैं यक़ीनन तेरे सब लोगों को इकठ्ठा करूँगा, मैं यक़ीनन इस्राईल के बक़िये को जमा' करूँगा मैं उनको बुसराह की भेड़ों और चरागाह के गल्ले की तरह इकठ्ठा करूँगा और आदमियों का बड़ा शोर होगा।
13 ೧೩ ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.
तोड़ने वाला उनके आगे — आगे गया है; वह तोड़ते हुए फाटक तक चले गए, और उसमें से गुज़र गए; और उनका बादशाह उनके आगे — आगे गया, या'नी ख़ुदावन्द उनका पेशवा।