< ಮೀಕನು 3 >
1 ೧ ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?
И рекох: Слушайте сега, първенци Яковови, И началници на Израилевия дом: Не трябва ли вие да знаете правосъдието,
2 ೨ ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ. ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ.
Вие, които мразите доброто и обичате злото, Които одирате кожата от хората. И месото от костите им,
3 ೩ ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.
Които изяждате месото на людете Ми, И дерете кожата от тях, - Които трошите костите им, И ги насичате като за котел, И като месо за в гърнето?
4 ೪ ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”
Тогава ще извикат към Господа, но няма да ги послуша, Дори ще скрие лицето Си от тях в онова време, Както и те се обходиха зле в делата си.
5 ೫ ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,
Така казва Господ За пророците, които заблуждават людете Ми, - Които, докато хапят със зъбите си, викат - Мир! Но, ако не тури някой нещо в устата им, Обявяват война против него;
6 ೬ “ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.
Затова, ще ви бъде нощ, та да нямате видение, И ще ви бъде тъмно, та да не прокобявате, Слънцето ще залезе за пророците. И денят ще се смрачи над тях.
7 ೭ ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ.
Тогава гледачите ще се засрамят, И чародеите ще се смутят; Да! те всички ще се покрият до горната си устна, Защото няма отговор от Бога.
8 ೮ ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.
Но аз наистина съм пълен със сила, Със съдба, и с мощ чрез Духа Господен, За да изява на Якова престъплението му, И на Израиля греха му.
9 ೯ ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ,
Слушайте прочее това, първенци на Якововия дом, И началници на Израилевия дом, Които се гнусите от правосъдие, И извращате всяка правота,
10 ೧೦ ಚೀಯೋನನ್ನು ನರಹತ್ಯದಿಂದಲೂ, ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕಿವಿಗೊಟ್ಟು ಕೇಳಿರಿ, ಕೇಳಿರಿ.
Които градите Сион с кръв, И Ерусалим с беззаконие,
11 ೧೧ ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.
На които първенците съдят за подкупи, Свещениците му учат за заплата, И пророците му чародействуват за пари, И пак се облягат на Господа, и казва: Не е ли Господ всред нас? Никакво зло няма да ни сполети;
12 ೧೨ ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.
Затова, поради вас Сион ще се изоре като нива, Ерусалим ще стане грамади развалини, И хълмът на дома Господен като високите места на лес.