< ಮೀಕನು 3 >

1 ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?
וָאֹמַ֗ר שִׁמְעוּ־נָא֙ רָאשֵׁ֣י יַעֲקֹ֔ב וּקְצִינֵ֖י בֵּ֣ית יִשְׂרָאֵ֑ל הֲל֣וֹא לָכֶ֔ם לָדַ֖עַת אֶת־הַמִּשְׁפָּֽט ׃
2 ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ. ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ.
שֹׂ֥נְאֵי ט֖וֹב וְאֹ֣הֲבֵי רעה גֹּזְלֵ֤י עוֹרָם֙ מֵֽעֲלֵיהֶ֔ם וּשְׁאֵרָ֖ם מֵעַ֥ל עַצְמוֹתָֽם׃
3 ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.
וַאֲשֶׁ֣ר אָכְלוּ֮ שְׁאֵ֣ר עַמִּי֒ וְעוֹרָם֙ מֵעֲלֵיהֶ֣ם הִפְשִׁ֔יטוּ וְאֶת־עַצְמֹֽתֵיהֶ֖ם פִּצֵּ֑חוּ וּפָרְשׂוּ֙ כַּאֲשֶׁ֣ר בַּסִּ֔יר וּכְבָשָׂ֖ר בְּת֥וֹךְ קַלָּֽחַת׃
4 ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”
אָ֚ז יִזְעֲק֣וּ אֶל־יְהוָ֔ה וְלֹ֥א יַעֲנֶ֖ה אוֹתָ֑ם וְיַסְתֵּ֨ר פָּנָ֤יו מֵהֶם֙ בָּעֵ֣ת הַהִ֔יא כַּאֲשֶׁ֥ר הֵרֵ֖עוּ מַעַלְלֵיהֶֽם׃ פ
5 ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,
כֹּ֚ה אָמַ֣ר יְהוָ֔ה עַל־הַנְּבִיאִ֖ים הַמַּתְעִ֣ים אֶת־עַמִּ֑י הַנֹּשְׁכִ֤ים בְּשִׁנֵּיהֶם֙ וְקָרְא֣וּ שָׁל֔וֹם וַאֲשֶׁר֙ לֹא־יִתֵּ֣ן עַל־פִּיהֶ֔ם וְקִדְּשׁ֥וּ עָלָ֖יו מִלְחָמָֽה׃
6 “ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.
לָכֵ֞ן לַ֤יְלָה לָכֶם֙ מֵֽחָז֔וֹן וְחָשְׁכָ֥ה לָכֶ֖ם מִקְּסֹ֑ם וּבָ֤אָה הַשֶּׁ֙מֶשׁ֙ עַל־הַנְּבִיאִ֔ים וְקָדַ֥ר עֲלֵיהֶ֖ם הַיּֽוֹם׃
7 ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ.
וּבֹ֣שׁוּ הַחֹזִ֗ים וְחָֽפְרוּ֙ הַקֹּ֣סְמִ֔ים וְעָט֥וּ עַל־שָׂפָ֖ם כֻּלָּ֑ם כִּ֛י אֵ֥ין מַעֲנֵ֖ה אֱלֹהִֽים׃
8 ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.
וְאוּלָ֗ם אָנֹכִ֞י מָלֵ֤אתִי כֹ֙חַ֙ אֶת־ר֣וּחַ יְהוָ֔ה וּמִשְׁפָּ֖ט וּגְבוּרָ֑ה לְהַגִּ֤יד לְיַֽעֲקֹב֙ פִּשְׁע֔וֹ וּלְיִשְׂרָאֵ֖ל חַטָּאתֽוֹ׃ ס
9 ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ,
שִׁמְעוּ־נָ֣א זֹ֗את רָאשֵׁי֙ בֵּ֣ית יַעֲקֹ֔ב וּקְצִינֵ֖י בֵּ֣ית יִשְׂרָאֵ֑ל הַֽמֲתַעֲבִ֣ים מִשְׁפָּ֔ט וְאֵ֥ת כָּל־הַיְשָׁרָ֖ה יְעַקֵּֽשׁוּ׃
10 ೧೦ ಚೀಯೋನನ್ನು ನರಹತ್ಯದಿಂದಲೂ, ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕಿವಿಗೊಟ್ಟು ಕೇಳಿರಿ, ಕೇಳಿರಿ.
בֹּנֶ֥ה צִיּ֖וֹן בְּדָמִ֑ים וִירוּשָׁלִַ֖ם בְּעַוְלָֽה׃
11 ೧೧ ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.
רָאשֶׁ֣יהָ ׀ בְּשֹׁ֣חַד יִשְׁפֹּ֗טוּ וְכֹהֲנֶ֙יהָ֙ בִּמְחִ֣יר יוֹר֔וּ וּנְבִיאֶ֖יהָ בְּכֶ֣סֶף יִקְסֹ֑מוּ וְעַל־יְהוָה֙ יִשָּׁעֵ֣נוּ לֵאמֹ֔ר הֲל֤וֹא יְהוָה֙ בְּקִרְבֵּ֔נוּ לֹֽא־תָב֥וֹא עָלֵ֖ינוּ רָעָֽה׃
12 ೧೨ ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.
לָכֵן֙ בִּגְלַלְכֶ֔ם צִיּ֖וֹן שָׂדֶ֣ה תֵֽחָרֵ֑שׁ וִירוּשָׁלִַ֙ם֙ עִיִּ֣ין תִּֽהְיֶ֔ה וְהַ֥ר הַבַּ֖יִת לְבָמ֥וֹת יָֽעַר׃ פ

< ಮೀಕನು 3 >