< ಮೀಕನು 4 >
1 ೧ ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.
Lakini katika siku za mwisho itakuja kuhusu kwamba mlima wa nyumba ya Yahwe utawekwa imare juu ya milima mingine. Utainuliwa juu ya milima, na watu watautakabisha.
2 ೨ ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.
Mataifa mengi yataenda na kusema, “Njoni, twendeni juu kwenye mlima wa Yahwe, kwenye nyumba ya Mungu wa Yakobo. Atatufundisha njia zake, na tutembea katika njia zake.” Kwa kuwa kutoka Sayuni sheria itatoka, na neno la Yahwe kutoka Yerusalemu.
3 ೩ ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
Atahukumu miongoni mwa watu na kuamua kuhusiana na mataifa mengi ya mbali. Watapoga mapanga yao kuwa plau na mikuki yao kuwa miuundu ya kupogolea. Taifa halitainua upanga dhidi ya taifa, wala kutawala kwa vita tena.
4 ೪ ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.
Badala yake, wataketi kila mtu chini ya mzabibu wake na chini ya mtini wake. Hakuna mtu atakayewafanya waogope, kwa kuwa mdomo wa Yahwe wa majeshi umesema.
5 ೫ ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.
Kwa kuwa watu wote wataenenda, kila mmoja, katika jina la mungu wake. Lakini sisi tutaenenda katika jina la Yahwe Mungu wetu milele na milele.
6 ೬ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು.
“Katika siku hiyo,” aseme Yahwe, “Nitamkusanya achechemeaye na kumkusanya aliyefukuzwa, wale ambao nimewatesa.
7 ೭ ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.
Nitamrudisha aliyechechemea kwenye mabaki, na yeye aliyetupwa kwenye taifa imara, na mimi, Yahwe, nitatawala juu yao katika Milima Sayuni, sasa na milele.
8 ೮ ಕುರಿಮಂದೆಗೆ ರಕ್ಷಣೆ ಕೊಡುವ ಗೋಪುರವೇ, ಚೀಯೋನ್ ಯುವತಿಯ ಸುಭದ್ರ ಕೋಟೆಯೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವುದು. ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವುದು.
Kama kwako, mnara wa saa kwa ajili ya kundi, mlima wa binti wa Sayuni-utakuja kwenu, utawala wenu wa zamani utarudishwa, ufalme ambao unaomilikiwa na binti wa Yerusalemu.
9 ೯ ನೀನೀಗ ರೋದಿಸುತ್ತಿರುವುದೇಕೆ? ಪ್ರಸವವೇದನೆಯಷ್ಟು ಕಠಿಣವಾದ ಯಾತನೆಯು ನಿನ್ನನ್ನು ಬಾಧಿಸುತ್ತಿರುವುದಕ್ಕೆ ಕಾರಣವೇನು? ನಿನ್ನಲ್ಲಿ ರಾಜನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶವಾದನೋ?
Sasa, kwa nini unapiga kelele kwa sauti kuu? Je hakuna mfalme miongoni mwenu? Je mshauri wako amekufa? Kwa nini uchungu umekushika kama yule mwanamke akiwa anazaa?
10 ೧೦ ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.
Kuwa katika uchungu wa kuzaa ili uzae, binti Sayuni, kama mwanamke mwenye uchungu. Kwa sasa utatoka nje ya mji, kuishi kwenye shamba, na kwenda Babeli. Huko utaokolewa. Huko Yahwe atakuokoa kutoka kwenye mikono ya maadui.
11 ೧೧ ‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.
Sasa mataifa mengi yamekusanyika juu yako; wakisema; 'Atiwe unajisi; macho yenu yaangalie Sayuni.”'
12 ೧೨ ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಲಿಲ್ಲ, ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.
Nabii asema, “Hawayajui mawazo ya Yahwe, wala hawaelewi mpango wake, kwa kuwa wamewakusanaya kama miganda kupura sakafuni.”
13 ೧೩ ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.
Yahwe asema, “siamama na upure, binti Sayuni, kwa kuwa nitaifanya pembe yako kuwa chuma, na nitazifanya kwato zako kuwa shaba. Utaponda watu wengi. Nitaweka wakfu udhalimu wao kwangu mwenyewe, Yahwe, miliki zao kwangu, Bwana wa dunia nzima.”