< ಮೀಕನು 4 >

1 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.
Nna a edi akyi no mu no, Awurade asɔredan bepɔw no betim sɛ mmepɔw no nyinaa ti; ebegye din aboro nkoko nyinaa, na nnipa ahorow bɛbɔ yuu akɔ hɔ.
2 ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.
Aman bebree bɛba abɛka se, “Mommra mma yɛnkɔ Awurade bepɔw no so, nkɔ Yakob Nyankopɔn fi. Ɔbɛkyerɛkyerɛ yɛn nʼakwan sɛnea ɛbɛyɛ a yɛbɛnantew nʼatempɔn so.” Mmara no befi Sion aba, na Awurade asɛm afi Yerusalem.
3 ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
Obebu amanaman ntam atɛn na obesiesie nnipa bebree ntam asɛm. Wɔde wɔn afoa bɛbobɔ nsɔw na wɔde wɔn mpeaw ayɛ asosɔw. Ɔman bi rentwe ɔman foforo so afoa, na wɔrenyɛ ahoboa biara mma ɔko bio.
4 ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.
Obiara bɛtena ne bobe anaa ne borɔdɔma nnua ase, na obiara remmehunahuna wɔn, efisɛ, Asafo Awurade akasa.
5 ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.
Amanaman no nyinaa betumi anantew wɔn anyame din mu, na yɛn de, yɛbɛnantew Awurade, yɛn Nyankopɔn Din mu daa daa.
6 ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು.
“Saa da no,” sɛnea Awurade se ni, “Mɛboaboa mmubuafo, atukɔfo ɛne wɔn a mede awerɛhow aba wɔn so ano.
7 ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.
Mɛma mmubuafo ayɛ me nkurɔfo wɔ asase no so, atukɔfo no bɛyɛ ɔman kɛse. Awurade bedi wɔn so hene wɔ Sion bepɔw so afi da no akosi daa.
8 ಕುರಿಮಂದೆಗೆ ರಕ್ಷಣೆ ಕೊಡುವ ಗೋಪುರವೇ, ಚೀಯೋನ್ ಯುವತಿಯ ಸುಭದ್ರ ಕೋಟೆಯೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವುದು. ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವುದು.
Na wo, nguankuw no abantenten, Ɔbabea Sion, abandennen, wɔde wo tete tumidi no bɛsan abrɛ wo; Ɔbabea Yerusalem nsa bɛsan aka nʼahenni.”
9 ನೀನೀಗ ರೋದಿಸುತ್ತಿರುವುದೇಕೆ? ಪ್ರಸವವೇದನೆಯಷ್ಟು ಕಠಿಣವಾದ ಯಾತನೆಯು ನಿನ್ನನ್ನು ಬಾಧಿಸುತ್ತಿರುವುದಕ್ಕೆ ಕಾರಣವೇನು? ನಿನ್ನಲ್ಲಿ ರಾಜನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶವಾದನೋ?
Adɛn nti na afei woresu dennen, wunni ɔhene ana? Wo futufo ayera, na enti ɔyaw aka wo sɛ ɔbea a ɔwɔ awoko mu?
10 ೧೦ ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.
Bukabukaw wo mu wɔ yawdi mu, Ɔbabea Sion, te sɛ ɔbea a awo aka no, mprempren ɛsɛ sɛ wufi kuropɔn no mu kɔtena sare so. Wobɛkɔ Babilonia; na hɔ na wobegye wo. Ɛhɔ na Awurade begye wo afi wʼatamfo nsam.
11 ೧೧ ‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.
Mprempren de, aman bebree aka abɔ mu atia wo. Wɔka se, “Wongu Sion ho fi, na yɛmfa yɛn ani nhwɛ no!”
12 ೧೨ ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಲಿಲ್ಲ, ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.
Nanso wonnim Awurade adwene. Wɔnte nʼagyinatu ase. Wonnim sɛ ɔno na ɔboaboa wɔn ano te sɛ afiafi de kɔ awiporowbea.
13 ೧೩ ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.
“Sɔre, na porow, Ɔbabea Sion, mɛma wo dade mmɛn; mɛma wo kɔbere tɔte na wubebubu aman bebree mu nketenkete.” Wode wɔn mfaso a wɔampɛ no ɔkwan pa so bɛbrɛ Awurade, wode wɔn ahonyade bɛbrɛ asase nyinaa so wura.

< ಮೀಕನು 4 >