< ನಹೂಮನು 1 >
1 ೧ ನಿನವೆ ಪಟ್ಟಣದ ಬಗ್ಗೆ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಎಂಬ ಪ್ರವಾದಿಗೆ ಆದ ದೈವದರ್ಶನದ ಗ್ರಂಥ.
關於尼尼微的神諭,厄耳科士人納鴻的神視錄:
2 ೨ ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.
上主是嫉惡和復仇的天主;上主要復仇,且憤恕填胸;上主汐必對敵人復仉,必向仇人洩怒。
3 ೩ ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.
上主雖緩於發怒,但能力偉大,衪決不全然免罰;衪的行為是在狂風暴雨中,雲彩是衪腳下的塵埃。
4 ೪ ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.
衪一呵叱海洋,海洋即枯竭,眾河流也為之乾涸,巴商與加爾默耳於是枯槁,黎巴嫩的花卉也隨之凋謝。
5 ೫ ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.
山岳在衪面前震盪,丘陵動搖;大地寰宇及其中所有的居民,在衪面前莫不戰慄。
6 ೬ ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
誰能抵得住衪的怒氣﹖誰能忍受得住衪的烈怒﹖衪的憤怒如火冒出,連磐石也要在衪面前破碎。
7 ೭ ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.
上主原是良善的,是患難之日的避難所,衪必照顧依賴衪的人;
8 ೮ ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.
在洪流氾濫時,衪必拯救他們;但對衪的敵人,衪必予以毀滅,將衪的仇人驅入黑暗。
9 ೯ ನೀವು ಯೆಹೋವನಿಗೆ ವಿರುದ್ಧವಾಗಿ ಯಾವರೀತಿಯ ಕುಯುಕ್ತಿಯನ್ನು ಕಲ್ಪಿಸುತ್ತೀರಿ? ಆತನು ಸಂಪೂರ್ಣವಾಗಿ ಹಾಳುಮಾಡುವನು; ಎರಡನೆಯ ಸಾರಿ ಅಪಾಯವು ತಲೆ ಎತ್ತದಂತೆ ಪೂರ್ಣವಾಗಿ ನಿಮ್ಮನ್ನು ನಾಶಮಾಡುವನು.
尼尼微,你們對上主有什麼圖謀﹖衪必完全予以毀滅,不必二次降災。
10 ೧೦ ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.
他們像纏結的荊棘[又像大醉的豪飲者,]必如乾楷全被燒盡。
11 ೧೧ ನಿನವೆಯೇ, ಯೆಹೋವನಿಗೆ ವಿರುದ್ಧವಾಗಿ ದುಷ್ಟ ಆಲೋಚನೆ ಮಾಡಿ ಕೇಡನ್ನು ಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.
是由你們中間出現了那妄想反抗上主,圖謀惡計的人。
12 ೧೨ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.
上主這樣說:「雖然他們裝備齊全而且眾多,但仍要被剷除,歸於烏有。雖然磨難了你,我必不再磨難你。
13 ೧೩ ಅವನು ಹೇರಿದ ನೊಗವನ್ನು ಈಗ ನಿನ್ನ ಮೇಲಿನಿಂದ ಮುರಿದು ಕಟ್ಟಿದ್ದ ಕಣ್ಣಿಗಳನ್ನು ಕಿತ್ತುಹಾಕುವೆನು.”
現在我必由你身上打斷他的軛,打碎你的鎖鏈。
14 ೧೪ ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.
尼尼微,上主已對你下了命令:你的名字不再傳於後世;我要把彫像鑄像由你神廟內除去,並使你的墳墓成為辱罵的對象。」
15 ೧೫ ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.
看,那傳報福音,宣侑和平者的腳已站在山上! 猶大,你的慶節,償還你的誓願吧! 因為那惡者不會再由你中間經過,他已全然消滅。