< ನಹೂಮನು 3 >
1 ೧ ಅಯ್ಯೋ, ರಕ್ತಮಯ ಪಟ್ಟಣವೆ ನಿನ್ನ ಗತಿಯನ್ನು ಏನೆಂದು ಹೇಳಲಿ! ಅದು ಸುಳ್ಳಿನಿಂದಲೂ, ಸುಲಿಗೆಯಿಂದಲೂ ತುಂಬಿದೆ; ಕೊಳ್ಳೆಹೊಡೆಯುವುದನ್ನು ಬಿಡುವುದೇ ಇಲ್ಲ.
禍哉! 血債的城,滿城欺詐,處處劫掠,搶奪不息。
2 ೨ ಆಹಾ! ಚಾಟಿಯ ಚಟಚಟ ಶಬ್ದ, ಚಕ್ರಗಳ ಚೀತ್ಕಾರ, ಕುದುರೆಗಳ ಭರಧೌಡು, ರಥಗಳ ಹಾರಾಟ,
聽皮鞭颼颼,車輪隆隆,戰馬奔馳,戰車疾駛,
3 ೩ ರಾಹುತರ ರಭಸ, ಥಳಥಳಿಸುವ ಕತ್ತಿ, ಮಿಂಚುವ ಈಟಿ, ಅಸಂಖ್ಯಾತವಾಗಿ ಹತರಾದ ಸೈನಿಕರ ಶವಗಳ ಮಹಾರಾಶಿ, ಸತ್ತವರು ಲೆಕ್ಕವೇ ಇಲ್ಲ, ನುಗ್ಗುವವರು ಅವರ ಹೆಣಗಳನ್ನು ಎಡವುತ್ತಾರೆ.
騎士躍馬,刀劍晃亮,槍矛閃輝,被殺者眾,死者成堆,屍體無邊,人人為屍體絆倒:
4 ೪ ಅತಿಸುಂದರಿಯೂ, ಮಂತ್ರತಂತ್ರ ನಿಪುಣಳೂ ಜನಾಂಗಗಳನ್ನು ತನ್ನ ವೇಶ್ಯಾವಾಟಿಕೆಯಿಂದ ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ನಿಮಿತ್ತ ಇದೆಲ್ಲಾ ಆಗುವುದು.
這都是因那嬌艷妖冶的淫婦,行妖術的女巫的許多淫行所致。她以淫蕩欺騙了列邦,用妖術迷惑了萬民。
5 ೫ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಇಗೋ ನಾನು ನಿನಗೆ ವಿರುದ್ಧವಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ತೋರುವಂತೆ ಮಾಡುವೆನು.
看,我必攻擊你,──萬軍上主的斷語──我必將妳的衣裙掀到妳的臉上,使萬民見到妳的裸體,使列邦看到妳的恥辱:
6 ೬ ನಿನ್ನ ಮೇಲೆ ಹೊಲಸನ್ನು ಹಾಕಿ ಮಾನಕಳೆದು ನಿನ್ನನ್ನು ಎಲ್ಲರೂ ಪರಿಹಾಸ್ಯ ಮಾಡುವಂತೆ ಮಾಡುವೆನು.
我必要將糞溺拋在妳身上侮辱妳,使妳成為鑑戒。
7 ೭ ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ, ‘ನಿನವೆಯೂ ಹಾಳಾಯಿತಲ್ಲಾ, ಅದಕ್ಕಾಗಿ ಯಾರು ಗೋಳಾಡುವರು?’ ನಿನ್ನನ್ನು ಸಂತೈಸುವವರು ನನಗೆ ಎಲ್ಲಿ ಸಿಕ್ಕಾರು?” ಅಂದುಕೊಳ್ಳುವನು.
凡看見妳的,必逃避妳說:「尼尼微終於毀滅了! 」誰會向妳表同情﹖我從哪裏能找到安慰妳人﹖
8 ೮ ನೀನು ನೋ ಆಮೋನ್ ಪಟ್ಟಣಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.
妳哪裏能勝過那位於尼羅上,四面環水的諾阿孟。妳有海洋為屏障,有水為垣牆;
9 ೯ ಕೂಷ್ ಮತ್ತು ಐಗುಪ್ತವು ಅದರ ಅಪಾರ ಬಲ, ಪೂಟರೂ, ಲೂಬ್ಯರೂ ಅದಕ್ಕೆ ಸಹಾಯಕರು.
雇士和埃及是好的力量,力大無窮;普特和利比亞是好的助1 ;
10 ೧೦ ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.
但是好也被擄去,充當俘虜,好的嬰兒也在各街頭被摔死,人抽籤分配好的貴族,用鐵鏈縛住她的縉紳。
11 ೧೧ ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿಮಿತ್ತ ಆಶ್ರಯವನ್ನು ಹುಡುಕುವಿ.
妳也要這樣被攻破而消失,妳也要一個安全處為逃避仇敵。
12 ೧೨ ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು.
好的一切堡壘好像早熟的無花果樹,人一搖動,就落在姇食者的口裏。
13 ೧೩ ಆಹಾ! ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ.
看哪! 在妳中間的百姓都是婦女,妳境內的門已為妳的敵人敞開,火已燒毀了妳的門閂。
14 ೧೪ ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಕೋಟೆಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಮಣ್ಣನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ.
妳應吸水防備圍困,應鞏固妳的堡壘,踏黏土,踩膠泥,緊握磚型。
15 ೧೫ ಇದ್ದಲ್ಲಿಯೇ ಬೆಂಕಿಯು ನಿನ್ನನ್ನು ನುಂಗುವುದು. ಕತ್ತಿಯು ನಿನ್ನನ್ನು ಕಡಿದುಬಿಡುವುದು, ಮಿಡತೆಗಳೋಪಾದಿಯಲ್ಲಿ ನುಂಗಲ್ಪಡುವಿ; ನಿನ್ನ ಜನಸಂಖ್ಯೆಯು ಮಿಡತೆಗಳಷ್ಟು ಅಸಂಖ್ಯಾತವಾಗಲಿ, ಗುಂಪುಮಿಡತೆಗಳಷ್ಟು ಅಪರಿಮಿತವಾಗಲಿ,
火要在那裏燒滅妳,刀劍要殲滅妳, [把妳吞食有如蚱蜢。] 妳盡可增多妳的人數有如蚱蜢,多如飛蝗;
16 ೧೬ ನಿನ್ನ ವರ್ತಕರ ಸಂಖ್ಯೆಯನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿಸಿದ್ದೀ; ಆದರೆ, ಮಿಡತೆಯು ರೆಕ್ಕೆಗಳ ಪರೆಯನ್ನು ಹರಿದುಕೊಂಡು ಹಾರಿಹೋಗಿ ಬಿಡುವುದಷ್ಟೇ.
增加妳的商賈,多過天上的星辰! ──蚱蜢一脫殼就飛去了。
17 ೧೭ ನಿನ್ನ ಪ್ರಭುಗಳು ಮಿಡತೆಯಂತಿದ್ದಾರೆ, ಮಿಡತೆಯ ದಂಡು ಚಳಿಗಾಲದಲ್ಲಿ ಬೇಲಿಗಳೊಳಗೆ ಇಳಿದಿದ್ದು, ಹೊತ್ತು ಹುಟ್ಟಿದಾಗ ಓಡಿಹೋಗಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ಅಡಗುವ ಪ್ರಕಾರ ನಿನ್ನ ಸೇನಾಪತಿಗಳು ಮಾಯವಾಗುತ್ತಾರೆ.
妳的守衛正如蝗蟲,妳的官吏正像一群蚱蜢;冷天蟄伏在牆上,但太陽一昇起,就飛去了,沒有人知道牠們究在何處。
18 ೧೮ ಅಶ್ಶೂರದ ಅರಸನೇ, ನಿನ್ನ ದೇಶಪಾಲಕರು ದೀರ್ಘ ನಿದ್ರೆ ಮಾಡುತ್ತಿದ್ದಾರೆ; ನಿನ್ನ ಮಹನೀಯರು ದೀರ್ಘನಿದ್ದೆಯಲ್ಲಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸುವವರು ಯಾರೂ ಇಲ್ಲ.
亞述王! 你的牧者已酣睡,你的貴族已永眠,你的人民已散在各山上,無人再能聚集。
19 ೧೯ ನಿನ್ನ ಗಾಯವು ಗುಣಹೊಂದದು, ನಿನ್ನ ಗಾಯವು ತೀವ್ರವೇ. ನಿನ್ನ ವಿನಾಶದ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆ ಹಾಕಿ ನಗುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರೂ ಇಲ್ಲ.
你的瘡痍無法治療,你的創傷是致命傷。凡聽到你這消息的,都朝你鼓掌,因為有誰沒有時常受你虐待﹖