< ನಹೂಮನು 1 >

1 ನಿನವೆ ಪಟ್ಟಣದ ಬಗ್ಗೆ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಎಂಬ ಪ್ರವಾದಿಗೆ ಆದ ದೈವದರ್ಶನದ ಗ್ರಂಥ.
[I am] Nahum, from Elkosh [village]. [This is] a message about Nineveh [city, the capital of Assyria that was given] to me in a vision [by Yahweh].
2 ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.
Yahweh our God (is jealous/does not want people to worship any other god). He is very angry [with those who worship other gods], and he gets revenge [DOU] [on all] those who oppose him [DOU].
3 ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.
Yahweh does not quickly become angry; but he is very powerful, and he will certainly punish [LIT] those who have done evil things [MTY]. He shows his power by sending whirlwinds and storms, and clouds are [like] [MET] the dust [stirred up by] his feet.
4 ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.
When he commands oceans and rivers to become dry, they dry up. [He causes the grass in the fields in] the Bashan [region] and [on the slopes of] Carmel [Mountain] to wither, [and causes] the flowers in Lebanon to fade.
5 ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.
When he appears, [it is as though] the mountains shake and the hills melt; the earth quakes and [the people on] the earth tremble.
6 ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
There is no one [RHQ] who can resist him when he becomes extremely angry; there is no one [RHQ] who can survive when his anger is very hot. When he is very angry, [it is as though] his anger is like [SIM] a blazing fire, and [it is as though] mountains are shattered into pieces.
7 ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.
But he is good; he protects [us his people] when we experience troubles. He takes care of those who trust in him.
8 ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.
But he will get rid of his enemies; he will be to them [like] [MET] a flood that destroys everything. He will chase his enemies into the darkness [of the place where the dead are].
9 ನೀವು ಯೆಹೋವನಿಗೆ ವಿರುದ್ಧವಾಗಿ ಯಾವರೀತಿಯ ಕುಯುಕ್ತಿಯನ್ನು ಕಲ್ಪಿಸುತ್ತೀರಿ? ಆತನು ಸಂಪೂರ್ಣವಾಗಿ ಹಾಳುಮಾಡುವನು; ಎರಡನೆಯ ಸಾರಿ ಅಪಾಯವು ತಲೆ ಎತ್ತದಂತೆ ಪೂರ್ಣವಾಗಿ ನಿಮ್ಮನ್ನು ನಾಶಮಾಡುವನು.
[So], it is useless [RHQ] for you [people of Nineveh] to plot against Yahweh. He will not [need to] strike you two times to destroy you; he will destroy you [by striking you only once].
10 ೧೦ ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.
[It will be as though his enemies] are tangled in thorns, and they will stagger like people who have drunk a lot of wine. They will be burned up like [SIM] a fire completely burns up stubble/straw.
11 ೧೧ ನಿನವೆಯೇ, ಯೆಹೋವನಿಗೆ ವಿರುದ್ಧವಾಗಿ ದುಷ್ಟ ಆಲೋಚನೆ ಮಾಡಿ ಕೇಡನ್ನು ಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.
In Nineveh [city] there was a man who advised people to do very wicked things to Yahweh.
12 ೧೨ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.
But this is what Yahweh says [about you Israeli people]: “Although the people of Assyria have very many people and their army is very powerful, they will be destroyed and will disappear. [I say to my people in Judah, ] ‘have [already] punished you, but I will not punish you again.
13 ೧೩ ಅವನು ಹೇರಿದ ನೊಗವನ್ನು ಈಗ ನಿನ್ನ ಮೇಲಿನಿಂದ ಮುರಿದು ಕಟ್ಟಿದ್ದ ಕಣ್ಣಿಗಳನ್ನು ಕಿತ್ತುಹಾಕುವೆನು.”
Now I will cause the [people of Assyria] to no longer control/oppress you [MET]; [it will be as though] I will tear off the shackles/chains on your [hands and feet].”
14 ೧೪ ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.
[And this is what] Yahweh also declares about you people of Nineveh: “You will not have any descendants who will continue to have your family names. And I will destroy all the statues of your gods that were carved or formed in molds. I will cause you [to be killed and] sent to your graves, because you are vile/despicable!”
15 ೧೫ ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.
[You people of Judah, ] look! A messenger will be coming across the mountains, and he [SYN] will be bringing good news [to you]. He will be declaring [that you will now have] peace [because Assyria will have been conquered]. [So, ] celebrate your festivals, and do what you solemnly promised to do [when your enemies were threatening to attack you], because your wicked [enemies] will not invade your country again, [because] they will be completely destroyed.

< ನಹೂಮನು 1 >