< ನೆಹೆಮೀಯನು 10 >

1 ಲೇಖನ ರೂಪವಾದ ಪ್ರತಿಜ್ಞೆಗೆ ಸಹಿಮಾಡಿದವರು ಯಾರಾರೆಂದರೆ: ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿ ಹಾಗೂ ಯಾಜಕನಾದ ಚಿದ್ಕೀಯ,
그 인친 자는 하가랴의 아들 방백 느헤미야와 시드기야,
2 ಸೆರಾಯ, ಅಜರ್ಯ, ಯೆರೆಮೀಯ,
스라야, 아사랴, 예레미야,
3 ಪಷ್ಹೂರ್, ಅಮರ್ಯ, ಮಲ್ಕೀಯ,
바스훌, 아마랴, 말기야,
4 ಹಟ್ಟೂಷ್, ಶೆಬನ್ಯ, ಮಲ್ಲೂಕ್,
핫두스, 스바냐, 말룩,
5 ಹಾರಿಮ್, ಮೆರೇಮೋತ್, ಓಬದ್ಯ,
하림, 므레못, 오바댜,
6 ದಾನೀಯೇಲ್, ಗಿನ್ನೆತೋನ್, ಬಾರೂಕ್,
다니엘, 긴느돈, 바룩,
7 ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,
므술람, 아비야, 미야민,
8 ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು.
마아시야, 빌개, 스마야니 이는 다 제사장이요
9 ಲೇವಿಯರಲ್ಲಿ: ಅಜನ್ಯನ ಮಗನಾದ ಯೇಷೂವ, ಹೇನಾದಾದ್, ಬಿನ್ನೂಯ್, ಕದ್ಮೀಯೇಲ್ ಎಂಬುವರು.
또 레위 사람 곧 아사냐의 아들 예수아, 헤나닷의 자손 중 빈누이, 갓미엘과
10 ೧೦ ಇವರ ಬಂಧುಗಳಾದ ಶೆಬನ್ಯ, ಹೋದೀಯ. ಕೆಲೀಟ, ಪೆಲಾಯ, ಹಾನಾನ್,
그 형제 스바냐, 호디야, 그리다, 블라야, 하난,
11 ೧೧ ಮೀಕ, ರೆಹೋಬ್, ಹಷಬ್ಯ,
미가, 르홉, 하사뱌,
12 ೧೨ ಜಕ್ಕೂರ್, ‍ ಶೇರೇಬ್ಯ, ಶೆಬನ್ಯ,
삭굴, 세레뱌, 스바냐,
13 ೧೩ ಹೋದೀಯ, ಬಾನೀ, ಬೆನೀನೂ ಎಂಬುವರು.
호디야, 바니, 브니누요
14 ೧೪ ಜನಪ್ರಧಾನರಲ್ಲಿ ಪರೋಷ್, ಪಹತ್ ಮೋವಾಬ್, ಏಲಾಮ್, ಜತ್ತೂ, ಬಾನೀ,
또 백성의 두목들 곧 바로스, 바핫모압, 엘람, 삿두, 바니,
15 ೧೫ ಬುನ್ನೀ, ಅಜ್ಗಾದ್, ಬೇಬೈ
분니, 아스갓, 베배,
16 ೧೬ ಅದೋನೀಯ, ಬಿಗ್ವೈ, ಆದೀನ್,
아도니야, 비그왜, 아딘,
17 ೧೭ ಆಟೇರ್, ಹಿಜ್ಕೀಯ, ಅಜ್ಜೂರ್,
아델, 히스기야, 앗술,
18 ೧೮ ಹೋದೀಯ, ಹಾಷುಮ್, ಬೇಚೈ,
호디야, 하숨, 베새,
19 ೧೯ ಹಾರೀಫ್, ಅನಾತೋತ್, ನೇಬೈ,
하립, 아나돗, 노배,
20 ೨೦ ಮಗ್ಪೀಯಾಷ್, ಮೆಷುಲ್ಲಾಮ್, ಹೇಜೀರ್,
막비아스, 므술람, 헤실,
21 ೨೧ ಮೆಷೇಜಬೇಲ್, ಚಾದೋಕ್, ಯದ್ದೂವ,
므세사벨, 사독, 얏두아,
22 ೨೨ ಪೆಲಟ್ಯ, ಹಾನಾನ್, ಆನಾಯ,
블라댜, 하난, 아나야,
23 ೨೩ ಹೋಷೇಯ, ಹನನ್ಯ, ಹಷ್ಷೂಬ್,
호세아, 하나냐, 핫숩,
24 ೨೪ ಹಲೋಹೇಷ್, ಪಿಲ್ಹ, ಶೋಬೇಕ್,
할르헤스, 빌하, 소벡,
25 ೨೫ ರೆಹೂಮ್, ಹಷಬ್ನ, ಮಾಸೇಯ,
르훔, 하삼나, 마아세야,
26 ೨೬ ಅಹೀಯ, ಹಾನಾನ್, ಆನಾನ್,
아히야, 하난, 아난,
27 ೨೭ ಮಲ್ಲೂಕ್, ಹಾರಿಮ್, ಬಾನ ಎಂಬುವರು.
말룩, 하림, 바아나이었느니라
28 ೨೮ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು.
그 남은 백성과 제사장들과 레위 사람들과 문지기들과 노래하는 자들과 느디님 사람들과 및 이방 사람과 절교하고 하나님의 율법을 준행하는 모든 자와 그 아내와 그 자녀들 무릇 지식과 총명이 있는 자가
29 ೨೯ ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:
다 그 형제 귀인들을 좇아 저주로 맹세하기를 우리가 하나님의 종 모세로 주신 하나님의 율법을 좇아 우리 주 여호와의 모든 계명과 규례와 율례를 지켜
30 ೩೦ ಈ ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ ಮತ್ತು ನಮ್ಮ ಗಂಡು ಮಕ್ಕಳಿಗೋಸ್ಕರ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುವುದಿಲ್ಲ.
우리 딸은 이 땅 백성에게 주지 아니하고 우리 아들을 위하여 저희 딸을 데려오지 아니하며
31 ೩೧ ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.
혹시 이 땅 백성이 안식일에 물화나 식물을 가져다가 팔려 할지라도 우리가 안식일이나 성일에는 사지 않겠고 제칠년마다 땅을 쉬게 하고 모든 빚을 탕감하리라 하였고
32 ೩೨ ವರ್ಷಕ್ಕೆ ಒಂದು ಶೆಕೆಲಿನ ಮೂರನೆಯ ಒಂದು ಭಾಗವನ್ನು ದೇವಾಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.
우리가 또 스스로 규례를 정하기를 해마다 각기 세겔의 삼분 일을 수납하여 하나님의 전을 위하여 쓰게 하되
33 ೩೩ ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.
곧 진설병과 항상 드리는 소제와 항상 드리는 번제와 안식일과 초하루와 정한 절기에 쓸 것과 성물과 이스라엘을 위하는 속죄제와 우리 하나님의 전의 모든 일을 위하여 쓰게 하였고
34 ೩೪ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ.
또 우리 제사장들과 레위 사람들과 백성들이 제비 뽑아 각기 종족대로 해마다 정한 기한에 나무를 우리 하나님의 전에 드려서 율법에 기록한 대로 우리 하나님 여호와의 단에 사르게 하였고
35 ೩೫ ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು.
해마다 우리 토지 소산의 맏물과 각종 과목의 첫 열매를 여호와의 전에 드리기로 하였고
36 ೩೬ ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.
또 우리의 맏아들들과 생축의 처음 난 것과 우양의 처음 난 것을 율법에 기록된 대로 우리 하나님의 전으로 가져다가 우리 하나님의 전에서 섬기는 제사장들에게 주고
37 ೩೭ ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.
또 처음 익은 밀의 가루와 거제물과 각종 과목의 열매와 새 포도주와 기름을 제사장들에게로 가져다가 우리 하나님의 전 골방에 두고 또 우리 물산의 십일조를 레위 사람들에게 주리라 하였나니 이 레위 사람들은 우리의 모든 성읍에서 물산의 십일조를 받는 자임이며
38 ೩೮ ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.
레위 사람들이 십일조를 받을 때에는 아론의 자손 제사장 하나가 함께 있을 것이요 레위 사람들은 그 십일조의 십분 일을 가져다가 우리 하나님의 전 골방 곧 곳간에 두되
39 ೩೯ ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.
곧 이스라엘 자손과 레위 자손이 거제로 드린바 곡식과 새 포도주와 기름을 가져다가 성소의 기명을 두는 골방 곧 섬기는 제사장들과 및 문지기들과 노래하는 자들이 있는 골방에 둘 것이라 그리하여 우리가 우리 하나님의 전을 버리지 아니하리라

< ನೆಹೆಮೀಯನು 10 >