< ನೆಹೆಮೀಯನು 11 >
1 ೧ ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.
Mwet kol elos oakwuki in Jerusalem, ac mwet saya elos susfa in sulela sie sou inmasrlon sou singoul nukewa in som ac wi muta in siti mutal Jerusalem. A sou lula nukewa elos muta in siti srisrik ac siti lulap saya.
2 ೨ ಮತ್ತು ಸ್ವಇಚ್ಛೆಯಿಂದ ಯೆರೂಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.
Mwet uh kaksakin pac kutena mwet saya ma sifacna lungse muta in Jerusalem.
3 ೩ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.
In siti srisrik ac siti lulap saya ah, mwet Israel, mwet tol, mwet Levi, mwet orekma lun Tempul, ac mwet in sou lun mwet kulansap lal Solomon, elos muta yen selos sifacna in siti selos sifacna. Pa inge inen mwet kol ke kais sie ipin acn lun Judah su muta in Jerusalem:
4 ೪ ಯೆರೂಸಲೇಮಿನಲ್ಲಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಲ್ಲಿ ಕೆಲವರು ವಾಸವಾಗಿದ್ದರು. ಯೆಹೂದ ಕುಲದವರಲ್ಲಿ: ಅತಾಯನು, ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ, ಇವನು ಪೆರೆಚ್ ಸಂತಾನದವನು.
[Mwet in sruf lun Judah]: Athaiah, wen natul Uzziah, wen natul Zechariah. Mwet matu saya in sou lal pa Amariah, Shephatiah, ac Mahalalel, su fwilin tulik natul Perez, wen natul Judah.
5 ೫ ಇನ್ನೊಬ್ಬನು ಮಾಸೇಯ, ಇವನು ಬಾರೂಕನ ಮಗ; ಇವನು ಕೊಲ್ಹೋಜೆಯ ಮಗ; ಇವನು ಹಜಾಯನ ಮಗ; ಇವನು ಅದಾಯನ ಮಗ; ಇವನು ಯೋಯಾರೀಬನ ಮಗ; ಇವನು ಜೆಕರ್ಯನ ಮಗ, ಇವನು ಶೇಲಹನ ಸಂತಾನದವನು.
Maaseiah, wen natul Baruch, wen natul Colhozeh. Mwet matu saya in sou lal pa Hazaiah, Adaiah, Joiarib, ac Zechariah, su fwilin tulik natul Shelah, wen natul Judah.
6 ೬ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಆರುವತ್ತೆಂಟು ಮಂದಿ.
Mwet pulaik angfoko onngoul oalkosr sin fwilin tulik natul Perez, elos muta in Jerusalem.
7 ೭ ಬೆನ್ಯಾಮೀನ್ ಕುಲದವರಲ್ಲಿ: ಸಲ್ಲು, ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.
[Mwet in sruf lun Benjamin]: Sallu, wen natul Meshullam, wen natul Joed. Mwet matu saya in sou lal pa Pedaiah, Kolaiah, Maaseiah, Ithiel, ac Jeshaiah.
8 ೮ ರಣವೀರರಾದ ಗಬ್ಬೈ ಮತ್ತು ಸಲ್ಲೈ ಹಾಗು ಒಂಭೈನೂರಿಪ್ಪತ್ತೆಂಟು ಮಂದಿ.
Gabbai ac Sallai, sou fototo nu sel Sallu. Pisen mwet Benjamin nukewa su muta in Jerusalem pa eufoko longoul oalkosr.
9 ೯ ಜಿಕ್ರಿಯನ ಮಗನಾದ ಯೋವೇಲನು ಇವರ ನಾಯಕನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಎರಡನೆಯ ಪುರಾಧಿಕಾರಿಯಾಗಿದ್ದನು.
Joel, wen natul Zichri, pa mwet kol lalos, ac Judah, wen natul Hassenuah, pa akluo yal in kol siti sac.
10 ೧೦ ಯಾಜಕರಲ್ಲಿ: ಯೋಯಾರೀಬನ ಮಗನಾದ ಯೆದಾಯ, ಮತ್ತು ಯಾಕೀನ್,
[Mwet Tol]: Jedaiah, wen natul Joiarib, ac Jachin.
11 ೧೧ ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ, ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ, ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು.
Seraiah, wen natul Hilkiah, wen natul Meshullam. Mwet matu saya in sou lal pa Zadok, Meraioth, ac Ahitub, su Mwet Tol Fulat.
12 ೧೨ ಮತ್ತು ದೇವಾಲಯದ ಸೇವೆ ನಡೆಸುತ್ತಿದ್ದ ಇವರ ಬಂಧುಗಳು ಒಟ್ಟು ಎಂಟುನೂರ ಇಪ್ಪತ್ತೆರಡು ಮಂದಿ. ಇವರಲ್ಲದೆ ಅದಾಯನೆಂಬುವನು ಇನ್ನೊಬ್ಬನು. ಇವನು ಯೆರೋಹಾಮನ ಮಗ; ಇವನು ಪೆಲಲ್ಯನ ಮಗ; ಇವನು ಅಮ್ಚೀಯನ ಮಗ; ಇವನು ಜೆಕರ್ಯನ ಮಗ; ಇವನು ಪಷ್ಹೂರನ ಮಗ; ಇವನು ಮಲ್ಕೀಯನ ಮಗ.
Inmasrlon sou se inge, mwet oalfoko longoul luo pa kulansap in Tempul. Adaiah, wen natul Jeroham, wen natul Pelaliah. Mwet matu saya in sou lal pa Amzi, Zechariah, Pashhur, ac Malchijah.
13 ೧೩ ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯನ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ.
Mwet luofoko angngaul luo in sou lulap se inge elos sifen sou. Amashsai, wen natul Azarel, wen natul Ahzai. Mwet matu saya in sou lal pa Meshillemoth ac Immer.
14 ೧೪ ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು.
Mwet siofok longoul oalkosr in sou se inge elos mwet mweun pulaik. Mwet kol lalos pa Zabdiel, wen nutin sie sou pwengpeng.
15 ೧೫ ಲೇವಿಯರಲ್ಲಿ: ಹಷ್ಷೂಬನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಬುನ್ನೀ ವಂಶದವನೂ ಆದ ಶೆಮಾಯನು.
[Mwet Levi]: Shemaiah, wen natul Hasshub, wen natul Azrikam. Mwet matu saya in sou lal pa Hashabiah ac Bunni.
16 ೧೬ ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ಬೆತೈ, ಯೋಜಾಬಾದ್ ಎಂಬುವವರು,
Shabbethai ac Jozabad, mwet Levi eteyuk ac elos pa liaung orekma likin Tempul.
17 ೧೭ ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,
Mattaniah, wen natul Mica, wen natul Zabdi, sie mwet in fita lal Asaph. El kol mwet on lun Tempul ke elos alullul ke pre in sang kulo. Bakbukiah, su mwet kasru lal Mattaniah. Abda, wen natul Shammua, wen natul Galal, sie mwet in fwilin tulik natul Jeduthun.
18 ೧೮ ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಒಟ್ಟು ಇನ್ನೂರ ಎಂಭತ್ತನಾಲ್ಕು ಮಂದಿ.
Pisen mwet Levi nukewa su muta in siti mutal Jerusalem pa luofoko oalngoul akosr.
19 ೧೯ ದ್ವಾರಪಾಲಕರಲ್ಲಿ; ಅಕ್ಕೂಬ್, ಟಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ.
[Mwet topang ke mutunoa lun Tempul]: Akkub, Talmon, ac mwet wialos, elos mwet siofok itngoul luo nufon.
20 ೨೦ ಉಳಿದ ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಮಾಡುತ್ತಿದ್ದರು.
Mwet lula sin mwet Israel, ac mwet lula sin mwet tol ac mwet Levi, elos muta yen selos sifacna in siti srisrik ac siti lulap saya in Judah.
21 ೨೧ ದೇವಾಲಯದ ಸೇವಕರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಪ ಎಂಬುವವರು ಇವರ ನಾಯಕರಾಗಿದ್ದರು.
Mwet orekma lun Tempul elos muta ke ipin acn se Jerusalem pangpang Ophel, ac orekma ye kolyuk lal Ziha ac Gishpa.
22 ೨೨ ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯನ ಮಗನೂ, ಹಷಬ್ಯನ ಮೊಮ್ಮಗನೂ, ಮತ್ತನ್ಯನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು.
Mwet se ma liyaung mwet Levi su muta in Jerusalem pa Uzzi, wen natul Bani, wen natul Hashabiah. Mwet matu saya in sou lal pa Mattaniah ac Mica, ac el ma in sou lulap lun Asaph. Sou se inge pa fosrngakin on ke pacl in alu ke Tempul.
23 ೨೩ ಗಾಯಕರ ಅನುದಿನದ ಖರ್ಚಿಗಾಗಿ ಒಂದು ನಿಯಮ ಇತ್ತು.
Oasr oakwuk fulat orekla tuh kais sie sou in kol on ke Tempul ke kais sie len.
24 ೨೪ ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು.
Pethahiah, wen natul Meshezabel, in sou lal Zerah ac sruf lun Judah, el mwet aolyen mwet Jew nu sin tokosra Persia.
25 ೨೫ ಭೂಸ್ವಾಸ್ಥ್ಯವಿದ್ದವರು ವಾಸಿಸುತ್ತಿದ್ದ ಊರುಗಳು: ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್ ಇವುಗಳೂ ಮತ್ತು ಇವುಗಳ ಗ್ರಾಮಗಳು,
Pus mwet muta ke acn apkuran nu ke ima lalos. Elos su ma in sruf lal Judah muta Kiriath Arba, Dibon, ac Jekabzeel, ac ke inkul ma oan apkuran nu ke acn inge.
26 ೨೬ ಯೇಷೂವ, ಮೋಲಾದ, ಬೇತ್ಪೆಲೆಟ್ ಇವುಗಳೂ ಮತ್ತು ಇವುಗಳ ಗ್ರಾಮಗಳು,
Elos oayapa muta in siti lun Jeshua, Moladah, Bethpelet,
27 ೨೭ ಹಚರ್ ಷೂವಾಲ್ ಹಾಗು ಬೇರ್ಷೆಬ ಇವುಗಳೂ ಮತ್ತು ಇವುಗಳ ಗ್ರಾಮಗಳು,
ac Hazarshual, ac in Beersheba ac inkul ma rauneak acn we.
28 ೨೮ ಚಿಕ್ಲಗ್, ಮೆಕೋನವೂ ಇವುಗಳೂ ಮತ್ತು ಇವುಗಳ ಗ್ರಾಮಗಳು,
Elos muta in siti Ziklag, ac in Meconah ac inkul ma apkuran nu Meconah,
29 ೨೯ ಏನ್ರಿಮ್ಮೋನ್, ಚೊರ್ರ, ಯರ್ಮೂತ್ ಇವುಗಳೂ ಮತ್ತು ಇವುಗಳ ಗ್ರಾಮಗಳು,
in Enrimmon, Zorah, Jarmuth,
30 ೩೦ ಜನೋಹ, ಅದುಲ್ಲಾಮ್ ಇವುಗಳ ಮತ್ತು ಇವುಗಳ ಗ್ರಾಮಗಳು ಮತ್ತು ಲಾಕೀಷ್ ಇದರ ಪ್ರಾಂತ್ಯಗಳು, ಅಜೇಕವೂ ಅದರ ಗ್ರಾಮಗಳು ಯೆಹೂದ ಕುಲದವರ ನಿವಾಸ ಸ್ಥಾನಗಳಾಗಿದ್ದವು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಮಾಡುತ್ತಿದ್ದರು.
Zanoah, Adullam, ac inkul ma apkuran nu ke acn inge. Elos muta in Lachish ac ke ima ma apkuran nu we, ac in Azekah ac inkul ma rauneak. Kalmac pa mwet Judah elos muta ke acn inmasrlon Beersheba layen eir nwe ke Infahlfal Hinnom layen epang.
31 ೩೧ ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು.
Mwet in sruf lun Benjamin elos muta in Geba, Michmash, Ai, Bethel, ac inkul ma apkuran nu we,
32 ೩೨ ಅನಾತೋತ್, ನೋಬ್, ಅನನ್ಯ,
Anathoth, Nob, Anaiah,
33 ೩೩ ಹಾಚೋರ್, ರಾಮಾ, ಗಿತ್ತಯಿಮ್,
Hazor, Ramah, Gittaim,
34 ೩೪ ಹಾದೀದ್, ಚೆಬೋಯಿಮ್, ನೆಬಲ್ಲಾಟ್,
Hadid, Zeboim, Neballat,
35 ೩೫ ಲೋದ್, ಓನೋ, ಗೇಹರಾಷೀಮ್ ಎಂಬ ಗ್ರಾಮಗಳೂ ಬೆನ್ಯಾಮೀನ್ ಕುಲದವರ ನಿವಾಸ ಸ್ಥಾನಗಳಾಗಿದ್ದವು.
Lod, ac Ono, ac ke Infahlfal lun Mwet Tufahl.
36 ೩೬ ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು.
Kutu u lun mwet Levi su tuh muta in acn lun Judah mokleyukla elos in muta yurin mwet Benjamin.