< ನೆಹೆಮೀಯನು 11 >

1 ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.
habitaverunt autem principes populi in Hierusalem reliqua vero plebs misit sortem ut tollerent unam partem de decem qui habitaturi essent in Hierusalem in civitate sancta novem vero partes in civitatibus
2 ಮತ್ತು ಸ್ವಇಚ್ಛೆಯಿಂದ ಯೆರೂಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.
benedixit autem populus omnibus viris qui se sponte obtulerunt ut habitarent in Hierusalem
3 ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.
hii sunt itaque principes provinciae qui habitaverunt in Hierusalem et in civitatibus Iuda habitavit unusquisque in possessione sua in urbibus suis Israhel sacerdotes Levitae Nathinnei et filii servorum Salomonis
4 ಯೆರೂಸಲೇಮಿನಲ್ಲಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಲ್ಲಿ ಕೆಲವರು ವಾಸವಾಗಿದ್ದರು. ಯೆಹೂದ ಕುಲದವರಲ್ಲಿ: ಅತಾಯನು, ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ, ಇವನು ಪೆರೆಚ್ ಸಂತಾನದವನು.
et in Hierusalem habitaverunt de filiis Iuda et de filiis Beniamin de filiis Iuda Athaias filius Aziam filii Zacchariae filii Amariae filii Saphatia filii Malelehel de filiis Phares
5 ಇನ್ನೊಬ್ಬನು ಮಾಸೇಯ, ಇವನು ಬಾರೂಕನ ಮಗ; ಇವನು ಕೊಲ್ಹೋಜೆಯ ಮಗ; ಇವನು ಹಜಾಯನ ಮಗ; ಇವನು ಅದಾಯನ ಮಗ; ಇವನು ಯೋಯಾರೀಬನ ಮಗ; ಇವನು ಜೆಕರ್ಯನ ಮಗ, ಇವನು ಶೇಲಹನ ಸಂತಾನದವನು.
Imaasia filius Baruch filius Coloza filius Azia filius Adaia filius Ioiarib filius Zacchariae filius Silonites
6 ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಆರುವತ್ತೆಂಟು ಮಂದಿ.
omnes filii Phares qui habitaverunt in Hierusalem quadringenti sexaginta octo viri fortes
7 ಬೆನ್ಯಾಮೀನ್ ಕುಲದವರಲ್ಲಿ: ಸಲ್ಲು, ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.
hii sunt autem filii Beniamin Sellum filius Mosollam filius Ioed filius Phadaia filius Colaia filius Masia filius Ethehel filius Isaia
8 ರಣವೀರರಾದ ಗಬ್ಬೈ ಮತ್ತು ಸಲ್ಲೈ ಹಾಗು ಒಂಭೈನೂರಿಪ್ಪತ್ತೆಂಟು ಮಂದಿ.
et post eum Gabbai Sellai nongenti viginti octo
9 ಜಿಕ್ರಿಯನ ಮಗನಾದ ಯೋವೇಲನು ಇವರ ನಾಯಕನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಎರಡನೆಯ ಪುರಾಧಿಕಾರಿಯಾಗಿದ್ದನು.
et Iohel filius Zechri praepositus eorum et Iuda filius Sennua super civitatem secundus
10 ೧೦ ಯಾಜಕರಲ್ಲಿ: ಯೋಯಾರೀಬನ ಮಗನಾದ ಯೆದಾಯ, ಮತ್ತು ಯಾಕೀನ್,
et de sacerdotibus Idaia filius Ioarib Iachin
11 ೧೧ ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ, ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ, ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು.
Saraia filius Elcia filius Mesollam filius Sadoc filius Meraioth filius Ahitub princeps domus Dei
12 ೧೨ ಮತ್ತು ದೇವಾಲಯದ ಸೇವೆ ನಡೆಸುತ್ತಿದ್ದ ಇವರ ಬಂಧುಗಳು ಒಟ್ಟು ಎಂಟುನೂರ ಇಪ್ಪತ್ತೆರಡು ಮಂದಿ. ಇವರಲ್ಲದೆ ಅದಾಯನೆಂಬುವನು ಇನ್ನೊಬ್ಬನು. ಇವನು ಯೆರೋಹಾಮನ ಮಗ; ಇವನು ಪೆಲಲ್ಯನ ಮಗ; ಇವನು ಅಮ್ಚೀಯನ ಮಗ; ಇವನು ಜೆಕರ್ಯನ ಮಗ; ಇವನು ಪಷ್ಹೂರನ ಮಗ; ಇವನು ಮಲ್ಕೀಯನ ಮಗ.
et fratres eorum facientes opera templi octingenti viginti duo et Adaia filius Ieroam filius Felelia filius Amsi filius Zacchariae filius Phessur filius Melchiae
13 ೧೩ ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯನ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ.
et fratres eius principes patrum ducenti quadraginta duo et Amassai filius Azrihel filius Aazi filius Mosollamoth filius Emmer
14 ೧೪ ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು.
et fratres eorum potentes nimis centum viginti octo et praepositus eorum Zabdihel filius potentium
15 ೧೫ ಲೇವಿಯರಲ್ಲಿ: ಹಷ್ಷೂಬನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಬುನ್ನೀ ವಂಶದವನೂ ಆದ ಶೆಮಾಯನು.
et de Levitis Sebenia filius Asob filius Azaricam filius Asabia filius Boni
16 ೧೬ ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ಬೆತೈ, ಯೋಜಾಬಾದ್ ಎಂಬುವವರು,
et Sabathai et Iozabed super opera quae erant forinsecus in domo Dei a principibus Levitarum
17 ೧೭ ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,
et Mathania filius Micha filius Zebdaei filius Asaph princeps ad laudandum et confitendum in oratione et Becbecia secundus de fratribus eius et Abda filius Sammua filius Galal filius Idithun
18 ೧೮ ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಒಟ್ಟು ಇನ್ನೂರ ಎಂಭತ್ತನಾಲ್ಕು ಮಂದಿ.
omnes Levitae in civitate sancta ducenti octoginta quattuor
19 ೧೯ ದ್ವಾರಪಾಲಕರಲ್ಲಿ; ಅಕ್ಕೂಬ್, ಟಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ.
et ianitores Accob Telmon et fratres eorum qui custodiebant ostia centum septuaginta duo
20 ೨೦ ಉಳಿದ ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಮಾಡುತ್ತಿದ್ದರು.
et reliqui ex Israhel sacerdotes et Levitae in universis civitatibus Iuda unusquisque in possessione sua
21 ೨೧ ದೇವಾಲಯದ ಸೇವಕರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಪ ಎಂಬುವವರು ಇವರ ನಾಯಕರಾಗಿದ್ದರು.
et Nathinnei qui habitabant in Ofel et Siaha et Gaspha de Nathinneis
22 ೨೨ ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯನ ಮಗನೂ, ಹಷಬ್ಯನ ಮೊಮ್ಮಗನೂ, ಮತ್ತನ್ಯನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು.
et episcopus Levitarum in Hierusalem Azzi filius Bani filius Asabiae filius Matthaniae filius Michae de filiis Asaph cantores in ministerio domus Dei
23 ೨೩ ಗಾಯಕರ ಅನುದಿನದ ಖರ್ಚಿಗಾಗಿ ಒಂದು ನಿಯಮ ಇತ್ತು.
praeceptum quippe regis super eos erat et ordo in cantoribus per dies singulos
24 ೨೪ ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು.
et Fataia filius Mesezebel de filiis Zera filii Iuda in manu regis iuxta omne verbum populi
25 ೨೫ ಭೂಸ್ವಾಸ್ಥ್ಯವಿದ್ದವರು ವಾಸಿಸುತ್ತಿದ್ದ ಊರುಗಳು: ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್ ಇವುಗಳೂ ಮತ್ತು ಇವುಗಳ ಗ್ರಾಮಗಳು,
et in domibus per omnes regiones eorum de filiis Iuda habitaverunt in Cariatharbe et in filiabus eius et in Dibon et in filiabus eius et in Capsel et in viculis eius
26 ೨೬ ಯೇಷೂವ, ಮೋಲಾದ, ಬೇತ್ಪೆಲೆಟ್ ಇವುಗಳೂ ಮತ್ತು ಇವುಗಳ ಗ್ರಾಮಗಳು,
et in Iesue et in Molada et in Bethfaleth
27 ೨೭ ಹಚರ್‌ ಷೂವಾಲ್ ಹಾಗು ಬೇರ್ಷೆಬ ಇವುಗಳೂ ಮತ್ತು ಇವುಗಳ ಗ್ರಾಮಗಳು,
et in Asersual et in Bersabee et in filiabus eius
28 ೨೮ ಚಿಕ್ಲಗ್, ಮೆಕೋನವೂ ಇವುಗಳೂ ಮತ್ತು ಇವುಗಳ ಗ್ರಾಮಗಳು,
et in Siceleg et in Mochona et in filiabus eius
29 ೨೯ ಏನ್ರಿಮ್ಮೋನ್, ಚೊರ್ರ, ಯರ್ಮೂತ್ ಇವುಗಳೂ ಮತ್ತು ಇವುಗಳ ಗ್ರಾಮಗಳು,
et in Ainremmon et in Sara et in Irimuth
30 ೩೦ ಜನೋಹ, ಅದುಲ್ಲಾಮ್ ಇವುಗಳ ಮತ್ತು ಇವುಗಳ ಗ್ರಾಮಗಳು ಮತ್ತು ಲಾಕೀಷ್ ಇದರ ಪ್ರಾಂತ್ಯಗಳು, ಅಜೇಕವೂ ಅದರ ಗ್ರಾಮಗಳು ಯೆಹೂದ ಕುಲದವರ ನಿವಾಸ ಸ್ಥಾನಗಳಾಗಿದ್ದವು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಮಾಡುತ್ತಿದ್ದರು.
Zanoa Odollam et villis earum Lachis et regionibus eius Azeca et filiabus eius et manserunt in Bersabee usque ad vallem Ennom
31 ೩೧ ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು.
filii autem Beniamin a Geba Mechmas et Aia et Bethel et filiabus eius
32 ೩೨ ಅನಾತೋತ್, ನೋಬ್, ಅನನ್ಯ,
Anathoth Nob Anania
33 ೩೩ ಹಾಚೋರ್, ರಾಮಾ, ಗಿತ್ತಯಿಮ್,
Asor Rama Getthaim
34 ೩೪ ಹಾದೀದ್, ಚೆಬೋಯಿಮ್, ನೆಬಲ್ಲಾಟ್,
Adid Seboim Neballa Loth
35 ೩೫ ಲೋದ್, ಓನೋ, ಗೇಹರಾಷೀಮ್ ಎಂಬ ಗ್ರಾಮಗಳೂ ಬೆನ್ಯಾಮೀನ್ ಕುಲದವರ ನಿವಾಸ ಸ್ಥಾನಗಳಾಗಿದ್ದವು.
et Ono valle Artificum
36 ೩೬ ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು.
et de Levitis partitiones Iuda et Beniamin

< ನೆಹೆಮೀಯನು 11 >