< ನೆಹೆಮೀಯನು 13 >
1 ೧ ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.
Ngalolosuku babala egwalweni lukaMozisi endlebeni zabantu; kwasekutholwa kubhaliwe kulo ukuthi umAmoni lomMowabi kabasoze bangene ebandleni likaNkulunkulu phakade;
2 ೨ ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.
ngoba bengahlangabezanga abantwana bakoIsrayeli ngesinkwa langamanzi, kodwa baqhatsha bemelene labo uBalami, ukubaqalekisa; kodwa uNkulunkulu wethu waphendula isiqalekiso saba yisibusiso.
3 ೩ ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.
Kwasekusithi sebewuzwile umlayo behlukanisa koIsrayeli yonke ingxube yezizwe.
4 ೪ ಇದಕ್ಕಿಂತ ಮೊದಲು ಯಾಜಕನಾದ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟಿದ್ದನು. ಇವನು ಟೋಬೀಯನ ಸಂಬಂಧಿಕನಾಗಿದ್ದನು.
Ngaphambi kwalokho-ke uEliyashibi umpristi owayemiswe phezu kwekamelo likaNkulunkulu wethu, wayeyisihlobo sikaTobiya.
5 ೫ ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.
Wayemlungisele ikamelo elikhulu lapho ababekade befaka khona umnikelo wokudla, impepha, lezitsha, lokwetshumi kwamabele, iwayini elitsha, lamafutha, okwakulayelwe amaLevi labahlabeleli labalindimasango, lomnikelo wabapristi.
6 ೬ ಬಾಬಿಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆನು. ಇದೆಲ್ಲಾ ನಡೆಯುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಕಾಲಾಂತರದಲ್ಲಿ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು,
Kodwa kukho konke lokhu ngangingekho eJerusalema, ngoba ngomnyaka wamatshumi amathathu lambili kaAthakisekisi inkosi yeBhabhiloni ngeza enkosini; lekupheleni kwezinsuku ngacela imvumo enkosini,
7 ೭ ಹಿಂತಿರುಗಿ ಯೆರೂಸಲೇಮಿಗೆ ಬಂದೆನು. ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವಾಲಯದ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿ,
ngeza eJerusalema, ngaqedisisa ngokubi uEliyashibi ayekwenzele uTobiya ngokumlungisela ikamelo emagumeni endlu kaNkulunkulu.
8 ೮ ಈ ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ನೊಂದುಕೊಂಡು, ಟೋಬೀಯನ ಮನೆಯ ಸಾಮಾನುಗಳನ್ನು ಆ ಕೊಠಡಿಯಿಂದ ಹೊರಗೆ ಹಾಕಿಸಿದೆನು.
Kwasekusiba kubi kakhulu kimi; ngakho ngaphosela phandle zonke impahla zendlu kaTobiya phandle kwekamelo.
9 ೯ ಕೊಠಡಿಯನ್ನು ಶುದ್ಧಮಾಡುವುದಕ್ಕಾಗಿ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಆ ಕೊಠಡಿಯಲ್ಲಿ ಇಡಿಸಿದೆನು.
Ngasengilaya, bahlambulula amakamelo; ngabuyisela khona izitsha zendlu kaNkulunkulu lomnikelo wokudla lempepha.
10 ೧೦ ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.
Ngasengisazi ukuthi izabelo zamaLevi zazinganikwanga, lokuthi amaLevi labahlabeleli ababesenza umsebenzi babalekela ngulowo ensimini yakhe.
11 ೧೧ ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗದರಿಸಿ, “ದೇವಾಲಯವನ್ನು ಅಲಕ್ಷ್ಯ ಮಾಡಿದ್ದೇಕೆ?” ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.
Ngasengiphikisana lababusi ngathi: Kungani indlu kaNkulunkulu itshiyiwe? Ngababuthanisa, ngabamisa endaweni yabo.
12 ೧೨ ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.
Khona wonke uJuda waletha okwetshumi kwamabele lewayini elitsha lamafutha eziphaleni.
13 ೧೩ ನಂತರ ಉಗ್ರಾಣಗಳ ಮೇಲ್ವಿಚಾರಣೆಗಾಗಿ ನೋಡುವುದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಯ ಕುಲದವನಾದ ಪೆದಾಯ ಇವರನ್ನೂ, ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ, ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆನು. ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರಾಗಿದ್ದರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.
Ngasengibeka abagciniziphala phezu kweziphala, oShelemiya umpristi, loZadoki umbhali, loPhedaya kumaLevi, leceleni kwabo uHanani indodana kaZakuri indodana kaMathaniya, ngoba kwathiwa bathembekile; njalo kwakuphezu kwabo ukwabela abafowabo.
14 ೧೪ ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.
Ngikhumbule, Nkulunkulu wami, mayelana lalokho, ungayicitshi imisebenzi yami yomusa engiyenzele indlu kaNkulunkulu wami lezinkonzo zayo.
15 ೧೫ ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.
Ngalezonsuku ngabona koJuda abanyathela izikhamelo zewayini ngesabatha, labangenisa izithungo, abathwalisa obabhemi, lewayini futhi, izithelo zesivini, lemikhiwa, lawo wonke umthwalo, abakungenisa eJerusalema ngosuku lwesabatha. Ngafakaza mhla bethengisa ukudla.
16 ೧೬ ಇದಲ್ಲದೆ ದೇಶದಲ್ಲಿ ವಾಸಿಸುತ್ತಿದ್ದ ತೂರ್ಯರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್ ದಿನದಲ್ಲಿ ಯೆರೂಸಲೇಮಿನಲ್ಲೇ ಮಾರುತ್ತಿದ್ದರು.
LabeTire bahlala kuyo, beletha inhlanzi lempahla yonke ethengiswayo, bakuthengisa ngesabatha kubantwana bakoJuda laseJerusalema.
17 ೧೭ ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.
Khona ngaphikisana lezikhulu zakoJuda, ngathi kuzo: Iyini le into embi eliyenzayo lingcolisa usuku lwesabatha?
18 ೧೮ ನಿಮ್ಮ ಪೂರ್ವಿಕರು ಹೀಗೆ ಮಾಡಿದರೋ? ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ, ನಮ್ಮ ಪಟ್ಟಣದ ಮೇಲೆಯೂ ಬರಮಾಡಿದ್ದನಲ್ಲವೇ? ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲರ ಮೇಲೆ ದೈವಕೋಪವನ್ನು ಹೆಚ್ಚಿಸುತ್ತೀರಿ” ಎಂದು ಹೇಳಿ ಅವರನ್ನು ಗದರಿಸಿದೆನು.
Kabenzanga njalo yini oyihlo, loNkulunkulu wethu wehlisela phezu kwethu bonke lobububi laphezu kwalumuzi? Kanti lina landisa ulaka phezu kukaIsrayeli ngokungcolisa isabatha.
19 ೧೯ ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು.
Kwasekusithi lapho amasango eJerusalema eseqala ukuba mnyama mandulo kwesabatha, ngalaya ukuthi iminyango kayivalwe, njalo ngalaya ukuthi bangayivuli kuze kube ngemva kwesabatha. Ngabeka ezinye zenceku zami emasangweni ukuze kungangeni mthwalo ngosuku lwesabatha.
20 ೨೦ ಇದರಿಂದ ವರ್ತಕರೂ, ಎಲ್ಲಾ ತರದ ದಿನನಿತ್ಯ ಬಳಕೆಯ ವಸ್ತುಗಳನ್ನು ಮಾರುವುದಕ್ಕೆ ಬಂದವರೂ, ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ಇಳಿದುಕೊಂಡರು.
Ngakho abathengi labathengisi bempahla yonke balala ngaphandle kweJerusalema kanye loba kabili.
21 ೨೧ ಕೊನೆಗೆ ನಾನು ಅವರಿಗೆ, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಪುನಃ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು” ಎಂದು ಗದರಿಸಲು, ಅವರು ಅಂದಿನಿಂದ ಸಬ್ಬತ್ ದಿನದಲ್ಲಿ ಪುನಃ ಬರಲೇ ಇಲ್ಲ.
Khona ngafakaza ngimelene labo ngathi kibo: Lilalelani maqondana lomduli? Uba likwenza futhi, ngizalidumela ngesandla. Kusukela kulesosikhathi kababuyanga ngesabatha.
22 ೨೨ ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.
Ngasengitshela amaLevi ukuthi azihlambulule, eze alinde amasango, ukungcwelisa usuku lwesabatha. Langalokho ungikhumbule, Nkulunkulu wami, ungihawukele ngokobunengi bomusa wakho.
23 ೨೩ ಅದೇ ಕಾಲದಲ್ಲಿ ನಾನು ಅಷ್ಡೋದ್, ಅಮ್ಮೋನಿಯ, ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಣೆ ಮಾಡಿದೆನು.
Futhi, ngalezonsuku ngabona amaJuda ayethethe abafazi, abangamaAshidodikazi, amaAmoni, amaMowabi.
24 ೨೪ ಅವರ ಮಕ್ಕಳಲ್ಲಿ ಅರ್ಧ ಮಂದಿ ಯೂದಾಯ ಭಾಷೆಯಲ್ಲಿ ಮಾತನಾಡದೆ, ಅಷ್ಡೋದ್ಯ ಭಾಷೆಯನ್ನಾಡುತ್ತಾರೆಂದು ತಿಳಿದು ನಾನು ಕೋಪಗೊಂಡೆನು.
Labantwana babo, ingxenye babekhuluma isiAshidodi njalo bengelakukhuluma isiJuda, kodwa ngokolimi lwezizwe ngezizwe.
25 ೨೫ ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು,
Ngasengiphikisana lawo, ngawaqalekisa, ngatshaya amanye awo, ngawangcothula inwele; ngawafungisa ngoNkulunkulu: Kaliyikunika amadodakazi enu kumadodana abo, njalo kaliyikuthathela amadodana enu emadodakazini abo, kumbe lina ngokwenu.
26 ೨೬ ಇಂತಹ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್ ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ. ಅವನು ತನ್ನ ದೇವರಿಗೆ ಪ್ರಿಯನಾಗಿದ್ದನು. ಆದ್ದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದನು. ಆದರೂ ಅನ್ಯದೇಶದ ಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿಬಿಟ್ಟರು.
USolomoni inkosi yakoIsrayeli konanga yini ngalezozinto? Kube kanti phakathi kwezizwe ezinengi kwakungelankosi enjengaye, owayethandeka kuNkulunkulu wakhe, loNkulunkulu wamenza inkosi phezu kukaIsrayeli wonke; laye abafazi bezizweni bamenza ukuthi one.
27 ೨೭ ಹೀಗಿರಲಾಗಿ ನೀವೂ ಅನ್ಯಸ್ತ್ರೀಯರನ್ನು ಮದುವೆಮಾಡಿಕೊಂಡು ಅದೇ ಘೋರವಾದ ದುಷ್ಟತ್ವವನ್ನು ಮಾಡಿ ದೇವರಿಗೆ ದ್ರೋಹಿಗಳಾಗುವುದನ್ನು ನಾವು ಒಪ್ಪಿಕೊಳ್ಳಬೇಕೋ? ಎಂದು ಅವರನ್ನು ಗದರಿಸಿ “ಅವರ ಮಕ್ಕಳಿಗೆ ಹೆಣ್ಣನ್ನು ಕೊಡಬಾರದು, ನಿಮಗಾಗಲಿ ನಿಮ್ಮ ಮಕ್ಕಳಿಗಾಗಲಿ ಅವರಿಂದ ತರಲೂಬಾರದು” ಎಂಬ ಧರ್ಮವಿಧಿಯನ್ನು ಕೈಕೊಳ್ಳುವುದಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿದೆನು.
Pho, sizalilalela yini ukwenza bonke lobobubi obukhulu, ngokona kuNkulunkulu wethu ngokuthatha abafazi bezizweni?
28 ೨೮ ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.
Lenye yamadodana kaJehoyada indodana kaEliyashibi umpristi omkhulu, yayingumkhwenyana kaSanibhalathi umHoroni; ngakho ngayixotsha yasuka kimi.
29 ೨೯ ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.
Bakhumbule, Nkulunkulu wami, ngoba bangcolisile ubupristi lesivumelwano sobupristi lesamaLevi.
30 ೩೦ ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗೆಯಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ, ಯಾಜಕರಲ್ಲಿಯೂ, ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು.
Ngokunjalo ngabahlambulula kubo bonke abezizweni, ngamisa imfanelo kubapristi lakumaLevi, ngulowo lalowo emsebenzini wakhe,
31 ೩೧ ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.
leyomnikelo wenkuni ngezikhathi ezimisiweyo, leyezithelo zokuqala. Ngikhumbule, Nkulunkulu wami, ngokuhle.