< ನೆಹೆಮೀಯನು 2 >
1 ೧ ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.
Waggaa digdammaffaa bara Arxeksis Mootichaatti jiʼa Niisaan keessa yeroo daadhiin wayinii isaaf dhiʼeeffametti ani daadhii wayinii sana fuudhee mootichaaf nan kenne. Ani fuula isaa duratti gaddee hin beeku;
2 ೨ ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.
kanaafuu mootichi, “Ati utuu hin dhukkubsatin fuulli kee maaliif waan gadde fakkaata? Kun gadda garaa keessaati malee waan biraa miti” naan jedhe. Anis akka maleen sodaadhe;
3 ೩ ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.
mootichaanis, “Yaa mootii bara baraan jiraadhu! Utuu magaalaan abbootiin koo keessatti awwaalaman barbadooftee jirtuu, utuu karrawwan ishees ibiddaan barbadeeffamanii jiranuu fuulli koo maaliif hin gaddu?” nan jedhe.
4 ೪ ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,
Mootichis, “Akka ani maal siif godhu barbaadda?” naan jedhe. Kanaafuu ani Waaqa samii kadhadheen
5 ೫ ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.
akkana jedhee mootichaaf nan deebise; “Yoo wanni kun mooticha gammachiisee garbichi kee fuula kee duratti surraa argate, akka ani magaalattii deebisee ijaaruuf gara Yihuudaa, gara magaalaa abbootiin koo itti awwaalamanitti na ergi.”
6 ೬ ರಾಣಿಯು ಅರಸನ ಹತ್ತಿರದಲ್ಲೇ ಕುಳಿತುಕೊಂಡಿದ್ದಳು. ಅರಸನು ನನಗೆ, “ಪ್ರಯಾಣಕ್ಕೆ ನಿನಗೆಷ್ಟು ಕಾಲ ಬೇಕು? ಯಾವಾಗ ಹಿಂದಿರುಗುವಿ” ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅರಸನು ಒಪ್ಪಿಕೊಂಡು ಅಪ್ಪಣೆಕೊಟ್ಟನು.
Kana irratti mootichi utuma mootittiin isa bira teessuu, “Karaan kee yeroo hammamii fudhata? Atis yoomi deebita?” jedhee na gaafate. Na erguun fedhii mootichaa taʼe; anis yeroo nan murteeffadhe.
7 ೭ ತರುವಾಯ ನಾನು ಅರಸನಿಗೆ, “ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ
Ammas ani akkanan isaan jedhe; “Yoo wanni kun mooticha gammachiise, akka isaan hamma ani Yihuudaa gaʼutti nagaadhaan na dabarsaniif bulchitoota Laga Efraaxiis Gamaatiif xalayaan anaaf haa kennamu.
8 ೮ ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.
Akkasumas akka inni laaxaa ani ittiin dareeraa karra daʼannoo mana qulqullummaa, dallaa magaalaa sanaa fi kan mana ani itti galuuf jiruu tolfadhu naaf kennuuf Aasaaf eegduu bosona mootichaaf xalayaan naaf haa barreeffamu.” Sababii harki Waaqa koo tolaan sun narra tureef mootichi waan ani kadhadhe naa kenne.
9 ೯ ಅರಸನು ನನ್ನನ್ನು ಕಳುಹಿಸುವಾಗ ಸೇನಾಧಿಪತಿಗಳನ್ನೂ, ರಾಹುತರನ್ನೂ ನನ್ನೊಡನೆ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು.
Kanaafuu ani gara bulchitoota Gama Laga Efraaxiis dhaqee xalayoota mootichaa isaanitti nan kenne. Mootichi ajajjoota waraanaa fi abbootii fardeenii na wajjin ergee ture.
10 ೧೦ ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.
Sanbalaax Hooroonichii fi Xoobbiyaan qondaaltichi Amoon sun yeroo waan kana dhagaʼanitti sababii namni Israaʼeliif waan tolaa yaadu tokko dhufeef akka malee ni raafaman.
11 ೧೧ ಅನಂತರ ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿನಗಳವರೆಗೂ ಇದ್ದೆನು.
Ani ergan Yerusaalem dhaqee bultii sadii achi bubbulee booddee
12 ೧೨ ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.
halkaniin kaʼee namoota muraasa wajjin nan baʼe. Ani waan Waaqni koo akka ani Yerusaalemiif godhu garaa koo keessa kaaʼe nama tokkotti iyyuu hin himne. Horii tokkicha ani yaabbadhe sana malee horiin tokko illee na bira hin turre.
13 ೧೩ ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.
Ani halkaniin Karra Sululaatiin gad baʼee gara Boolla Bishaan Jawweetii fi gara Karra Dikee dhaqee dallaa Yerusaalem kan diigamee fi karrawwan ishee kanneen ibiddaan barbadeeffaman sana irra naannaʼeen ilaale.
14 ೧೪ ಅಲ್ಲಿಂದ ಬುಗ್ಗೆ ಬಾಗಿಲನ್ನು ಹಾದು ಅರಸನ ಕೊಳಕ್ಕೆ ಬಂದೆನು. ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿರಲಿಲ್ಲ.
Ergasiis ani ittuma fufee gara Karra Burqaa fi gara Haroo mootichaa nan dhaqe; garuu karaan horii ani yaabbadhe dabarsu tokko illee hin turre;
15 ೧೫ ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.
kanaafuu ani halkaniin karaa sululaatiin ol baʼee dallaa sana nan ilaale. Dhuma irrattis dugda duubatti deebiʼee Karra Sululaatiin ol nan seene.
16 ೧೬ ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.
Sababii ani hamma gaafasitti Yihuudootatti yookaan lubootatti yookaan namoota bebeekamootti yookaan qondaaltotatti yookaan namoota hojii sana hojjechuuf jiran biraa kamitti iyyuu homaa hin himiniif qondaaltonni sun gara ani dhaqe yookaan waan ani hojjechaa ture hin beekne.
17 ೧೭ ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು.
Anis akkana isaaniin nan jedhe; “Isin rakkoo nu keessa jirru ni argitu; Yerusaalem diigamteerti; karrawwan ishees ibiddaan gubamaniiru. Kottaa nu akka siʼachi nama kolfaa hin taaneef dallaa Yerusaalem deebifnee ni ijaarraa.”
18 ೧೮ ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.
Ani waaʼee harka Waaqa koo kan narra jiru tolaa sanaa fi waan mootichi naan jedhe illee isaanitti nan hime. Isaanis, “Kottaa kaanee deebisnee haa ijaarru” jedhanii deebisan. Kanaafuu isaan hojii gaarii kana jalqaban.
19 ೧೯ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.
Garuu Sanbalaaxi Hooroonichi, Xoobbiyaan qondaaltichi Amoonii fi Gesheem namni Arabaa sun waan kana dhageenyaan nutti qoosanii nutti kolfan. Isaanis, “Wanni isin hojjettan kun maali? Isin mootichatti fincilaa jirtu moo?” jedhanii gaafatan.
20 ೨೦ ನಾನು ಅವರಿಗೆ, “ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ, ಹೆಸರೂ, ಸ್ಮಾರಕವೂ ಇರುವುದಿಲ್ಲ” ಎಂದು ಉತ್ತರಕೊಟ್ಟೆನು.
Ani immoo akkana jedheen deebii kenneef; “Waaqni samii fiixaan nuuf baasa. Nu garboonni isaa immoo kaanee ni ijaarra; isin garuu Yerusaalem keessaa qooda yookaan mirga yookaan yaadannoo tokko illee hin qabdan.”