< ನೆಹೆಮೀಯನು 3 >
1 ೧ ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು.
那时,大祭司以利亚实和他的弟兄众祭司起来建立羊门,分别为圣,安立门扇,又筑城墙到哈米亚楼,直到哈楠业楼,分别为圣。
2 ೨ ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು; ನಂತರ ಇಮ್ರಿಯನ ಮಗನಾದ ಜಕ್ಕೂರನು.
其次是耶利哥人建造。其次是音利的儿子撒刻建造。
3 ೩ ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು ತಿರುಗುಣಿ ಅಗುಳಿಗಳನ್ನು ಇರಿಸಿದರು.
哈西拿的子孙建立鱼门,架横梁、安门扇,和闩锁。
4 ೪ ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿ ಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್. ಆ ಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ನಂತರ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು.
其次是哈哥斯的孙子、乌利亚的儿子米利末修造。其次是米示萨别的孙子、比利迦的儿子米书兰修造。其次是巴拿的儿子撒督修造。
5 ೫ ತೆಕೋವದವರಲ್ಲಿ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.
其次是提哥亚人修造;但是他们的贵胄不用肩担他们主的工作。
6 ೬ ಹಳೆಯದಾಗಿದ್ದ ಬಾಗಿಲುಗಳ ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಯನ ಮಗನಾದ ಮೆಷುಲ್ಲಾಮನೂ. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಇರಿಸಿದರು.
巴西亚的儿子耶何耶大与比所玳的儿子米书兰修造古门,架横梁,安门扇和闩锁。
7 ೭ ಅಲ್ಲಿಂದ ನದಿಯಾಚೆಯ ದೇಶಾಧಿಪತಿಯ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್. ಇವರೂ, ಗಿಬ್ಯೋನ್ ಮತ್ತು ಮಿಚ್ಪ ಊರುಗಳವರೂ ಜೀರ್ಣೋದ್ಧಾರ ಮಾಡಿದ್ದರು.
其次是基遍人米拉提,米伦人雅顿与基遍人,并属河西总督所管的米斯巴人修造。
8 ೮ ಇದಾದ ನಂತರ ಹರ್ಹಯನ ಮಗನಾದ ಅಕ್ಕಸಾಲಿಗನಾದ ಉಜ್ಜೀಯೇಲ್; ಆ ಮೇಲೆ ಗಾಣಿಗನಾದ ಹನನ್ಯ; ಇವರು ಅಗಲವಾದ ಗೋಡೆಯವರೆಗೂ ಯೆರೂಸಲೇಮನ್ನು ಕಟ್ಟಿ ಭದ್ರಪಡಿಸಿದರು.
其次是银匠哈海雅的儿子乌薛修造。其次是做香的哈拿尼雅修造。这些人修坚耶路撒冷,直到宽墙。
9 ೯ ನಂತರ ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹೂರನ ಮಗನೂ ಆದ ರೆಫಾಯನು ಅದರ ಕುಂದುಕೊರತೆಗಳನ್ನು ಸರಿಪಡಿಸಿದನು.
其次是管理耶路撒冷一半、户珥的儿子利法雅修造。
10 ೧೦ ಇವರ ನಂತರ ಹರೂಮಫನ ಮಗನಾದ ಯೆದಾಯನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಹಷಬ್ನೆಯನ ಮಗನಾದ ಹಟ್ಟೂಷ್.
其次是哈路抹的儿子耶大雅对着自己的房屋修造。其次是哈沙尼的儿子哈突修造。
11 ೧೧ ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನ ಮಗನಾದ ಹಷ್ಷೂಬನು.
哈琳的儿子玛基雅和巴哈·摩押的儿子哈述修造一段,并修造炉楼。
12 ೧೨ ಅದರ ಆಚೆಗೆ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹಲ್ಲೊಹೇಷನ ಮಗನೂ ಆದ ಶಲ್ಲೂಮ ಮತ್ತು ಅವನ ಪುತ್ರಿಯರು.
其次是管理耶路撒冷那一半、哈罗黑的儿子沙龙和他的女儿们修造。
13 ೧೩ ತಗ್ಗಿನ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಹಾನೂನನೂ, ಜಾನೋಹ ಊರಿನವರು. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ಅಲ್ಲಿಂದ ತಿಪ್ಪೆ ಬಾಗಿಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು.
哈嫩和撒挪亚的居民修造谷门,立门,安门扇和闩锁,又建筑城墙一千肘,直到粪厂门。
14 ೧೪ ತಿಪ್ಪೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಬೇತ್ ಹಕ್ಕೆರೆಮಿನ ಅರ್ಧ ಪಟ್ಟಣಗಳ ಒಡೆಯನೂ, ರೇಕಾಬನ ಮಗನೂ ಆದ ಮಲ್ಕೀಯ. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿದನು.
管理伯·哈基琳、利甲的儿子玛基雅修造粪厂门,立门,安门扇和闩锁。
15 ೧೫ ಬುಗ್ಗೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ಒಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ದಾವೀದ ನಗರದಿಂದ ಇಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.
管理米斯巴、各荷西的儿子沙 修造泉门,立门,盖门顶,安门扇和闩锁,又修造靠近王园西罗亚池的墙垣,直到那从大卫城下来的台阶。
16 ೧೬ ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.
其次是管理伯·夙一半、押卜的儿子尼希米修造,直到大卫坟地的对面,又到挖成的池子,并勇士的房屋。
17 ೧೭ ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್ ಸಮೀಪದಲ್ಲೇ ತನ್ನ ಪಟ್ಟಣದವರೊಡನೆ ಕಟ್ಟುತ್ತಿದ್ದ ಕೆಯೀಲದ ಅರ್ಧ ಪಟ್ಟಣಗಳ ಒಡೆಯನಾದ ಹಷಬ್ಯ ಇವರು.
其次是利未人巴尼的儿子利宏修造。其次是管理基伊拉一半、哈沙比雅为他所管的本境修造。
18 ೧೮ ಇವರ ನಂತರ ಇವರ ಬಂಧುಗಳಲ್ಲಿ ಕೆಯೀಲದ ಅರ್ಧ ಪಟ್ಟಣಗಳ ಒಡೆಯನೂ, ಹೇನಾದಾದನ ಮಗನೂ ಆದ ಬವ್ವೈ.
其次是利未人弟兄中管理基伊拉那一半、希拿达的儿子巴瓦伊修造。
19 ೧೯ ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಿಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗ ಏಜೆರನು ಜೀರ್ಣೋದ್ಧಾರ ಮಾಡಿದನು.
其次是管理米斯巴、耶书亚的儿子以谢修造一段,对着武库的上坡、城墙转弯之处。
20 ೨೦ ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಆಸಕ್ತಿಯಿಂದ ಅದನ್ನು ಭದ್ರಪಡಿಸಿದನು.
其次是萨拜的儿子巴录竭力修造一段,从城墙转弯,直到大祭司以利亚实的府门。
21 ೨೧ ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು.
其次是哈哥斯的孙子、乌利亚的儿子米利末修造一段,从以利亚实的府门,直到以利亚实府的尽头。
22 ೨೨ ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಯೊರ್ದನ್ ಹೊಳೆಯ ತಗ್ಗಿನಲ್ಲಿ ವಾಸಿಸುತ್ತಿದ್ದ ಯಾಜಕರು.
其次是住平原的祭司修造。
23 ೨೩ ಇವರ ನಂತರ ಬೆನ್ಯಾಮೀನ್ ಮತ್ತು ಹಷ್ಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ನಂತರ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ. ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು.
其次是便雅悯与哈述对着自己的房屋修造。其次是亚难尼的孙子、玛西雅的儿子亚撒利雅在靠近自己的房屋修造。
24 ೨೪ ಇವನ ನಂತರ ಅಜರ್ಯನ ಮನೆಯಿಂದ ಮೂಲೆಯವರೆಗೆ ಇರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.
其次是希拿达的儿子宾内修造一段,从亚撒利雅的房屋直到城墙转弯,又到城角。
25 ೨೫ ಸೆರೆಮನೆಯ ಅಂಗಳದ ಹತ್ತಿರವಿದ್ದ ಅರಸನ ಅರಮನೆಯ ಮೇಲಿನ ಗೋಡೆಯನ್ನು ಮೀರಿನಿಂತಿರುವ ಮೂಲೆ ಗೋಪುರದ ಎದುರಿನ ಭಾಗವನ್ನು ಊಜೈಯನ ಮಗನಾದ ಪಾಲಾಲನೂ. ಇವನ ನಂತರ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.
乌赛的儿子巴拉修造对着城墙的转弯和王上宫凸出来的城楼,靠近护卫院的那一段。其次是巴录的儿子毗大雅修造。(
26 ೨೬ ಈಗ ಮೂಲೆ ಗೋಪುರ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ವಾಸಸ್ಥಾನವಾಗಿತ್ತು.
尼提宁住在俄斐勒,直到朝东水门的对面和凸出来的城楼。)
27 ೨೭ ಆ ದೊಡ್ಡ ಮೂಲೆ ಗೋಪುರದ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು.
其次是提哥亚人又修一段,对着那凸出来的大楼,直到俄斐勒的墙。
28 ೨೮ ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು.
从马门往上,众祭司各对自己的房屋修造。
29 ೨೯ ಇವರ ನಂತರ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.
其次是音麦的儿子撒督对着自己的房屋修造。其次是守东门、示迦尼的儿子示玛雅修造。
30 ೩೦ ಇವನ ನಂತರ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್. ಇವನ ನಂತರ ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡನು.
其次是示利米雅的儿子哈拿尼雅和萨拉的第六子哈嫩又修一段。其次是比利迦的儿子米书兰对着自己的房屋修造。
31 ೩೧ ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ. ಇವನು ಸೈನ್ಯದವರು ಸೇರಿಬರುವ ಬಾಗಿಲಿನೆದುರಿನಲ್ಲಿರುವ ದೇವಾಲಯದ ಸೇವಕರ ಮತ್ತು ವರ್ತಕರ ಕೇರಿಯ ವರೆಗೂ ಮತ್ತು ಮೂಲೆಯುಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು.
其次是银匠玛基雅修造到尼提宁和商人的房屋,对着哈米弗甲门,直到城的角楼。
32 ೩೨ ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಅಕ್ಕಸಾಲಿಗರು ಮತ್ತು ವರ್ತಕರು.
银匠与商人在城的角楼和羊门中间修造。