< ನೆಹೆಮೀಯನು 5 >

1 ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.
וַתְּהִי צַעֲקַת הָעָם וּנְשֵׁיהֶם גְּדוֹלָה אֶל־אֲחֵיהֶם הַיְּהוּדִֽים׃
2 ಅವರಲ್ಲಿ ಕೆಲವರು, “ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ” ಎಂದು ಹೇಳಿದರು.
וְיֵשׁ אֲשֶׁר אֹמְרִים בָּנֵינוּ וּבְנֹתֵינוּ אֲנַחְנוּ רַבִּים וְנִקְחָה דָגָן וְנֹאכְלָה וְנִחְיֶֽה׃
3 ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು.
וְיֵשׁ אֲשֶׁר אֹמְרִים שְׂדֹתֵינוּ וּכְרָמֵינוּ וּבָתֵּינוּ אֲנַחְנוּ עֹרְבִים וְנִקְחָה דָגָן בָּרָעָֽב׃
4 ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.
וְיֵשׁ אֲשֶׁר אֹמְרִים לָוִינוּ כֶסֶף לְמִדַּת הַמֶּלֶךְ שְׂדֹתֵינוּ וּכְרָמֵֽינוּ׃
5 ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.
וְעַתָּה כִּבְשַׂר אַחֵינוּ בְּשָׂרֵנוּ כִּבְנֵיהֶם בָּנֵינוּ וְהִנֵּה אֲנַחְנוּ כֹבְשִׁים אֶת־בָּנֵינוּ וְאֶת־בְּנֹתֵינוּ לַעֲבָדִים וְיֵשׁ מִבְּנֹתֵינוּ נִכְבָּשׁוֹת וְאֵין לְאֵל יָדֵנוּ וּשְׂדֹתֵינוּ וּכְרָמֵינוּ לַאֲחֵרִֽים׃
6 ಅವರ ಬೊಬ್ಬೆಯನ್ನೂ, ಮಾತುಗಳನ್ನೂ ಕೇಳಿದಾಗ ನಾನು ಬಹಳ ಸಿಟ್ಟುಗೊಂಡೆನು.
וַיִּחַר לִי מְאֹד כַּאֲשֶׁר שָׁמַעְתִּי אֶת־זַֽעֲקָתָם וְאֵת הַדְּבָרִים הָאֵֽלֶּה׃
7 ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ
וַיִּמָּלֵךְ לִבִּי עָלַי וָאָרִיבָה אֶת־הַחֹרִים וְאֶת־הַסְּגָנִים וָאֹמְרָה לָהֶם מַשָּׁא אִישׁ־בְּאָחִיו אַתֶּם (נשאים) [נֹשִׁים] וָאֶתֵּן עֲלֵיהֶם קְהִלָּה גְדוֹלָֽה׃
8 ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.
וָאֹמְרָה לָהֶם אֲנַחְנוּ קָנִינוּ אֶת־אַחֵינוּ הַיְּהוּדִים הַנִּמְכָּרִים לַגּוֹיִם כְּדֵי בָנוּ וְגַם־אַתֶּם תִּמְכְּרוּ אֶת־אֲחֵיכֶם וְנִמְכְּרוּ־לָנוּ וַֽיַּחֲרִישׁוּ וְלֹא מָצְאוּ דָּבָֽר׃
9 ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.
(ויאמר) [וָאוֹמַר] לֹא־טוֹב הַדָּבָר אֲשֶׁר־אַתֶּם עֹשִׂים הֲלוֹא בְּיִרְאַת אֱלֹהֵינוּ תֵּלֵכוּ מֵחֶרְפַּת הַגּוֹיִם אוֹיְבֵֽינוּ׃
10 ೧೦ ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ.
וְגַם־אֲנִי אַחַי וּנְעָרַי נֹשִׁים בָּהֶם כֶּסֶף וְדָגָן נַֽעַזְבָה־נָּא אֶת־הַמַּשָּׁא הַזֶּֽה׃
11 ೧೧ ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.
הָשִׁיבוּ נָא לָהֶם כְּהַיּוֹם שְׂדֹתֵיהֶם כַּרְמֵיהֶם זֵיתֵיהֶם וּבָתֵּיהֶם וּמְאַת הַכֶּסֶף וְהַדָּגָן הַתִּירוֹשׁ וְהַיִּצְהָר אֲשֶׁר אַתֶּם נֹשִׁים בָּהֶֽם׃
12 ೧೨ ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.
וַיֹּאמְרוּ נָשִׁיב וּמֵהֶם לֹא נְבַקֵּשׁ כֵּן נַעֲשֶׂה כַּאֲשֶׁר אַתָּה אוֹמֵר וָאֶקְרָא אֶת־הַכֹּהֲנִים וָֽאַשְׁבִּיעֵם לַעֲשׂוֹת כַּדָּבָר הַזֶּֽה׃
13 ೧೩ ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.
גַּם־חׇצְנִי נָעַרְתִּי וָֽאֹמְרָה כָּכָה יְנַעֵר הָֽאֱלֹהִים אֶת־כׇּל־הָאִישׁ אֲשֶׁר לֹֽא־יָקִים אֶת־הַדָּבָר הַזֶּה מִבֵּיתוֹ וּמִיגִיעוֹ וְכָכָה יִהְיֶה נָעוּר וָרֵק וַיֹּאמְרוּ כׇֽל־הַקָּהָל אָמֵן וַֽיְהַלְלוּ אֶת־יְהֹוָה וַיַּעַשׂ הָעָם כַּדָּבָר הַזֶּֽה׃
14 ೧೪ ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.
גַּם מִיּוֹם ׀ אֲשֶׁר־צִוָּה אוֹתִי לִהְיוֹת פֶּחָם בְּאֶרֶץ יְהוּדָה מִשְּׁנַת עֶשְׂרִים וְעַד שְׁנַת שְׁלֹשִׁים וּשְׁתַּיִם לְאַרְתַּחְשַׁסְתְּא הַמֶּלֶךְ שָׁנִים שְׁתֵּים עֶשְׂרֵה אֲנִי וְאַחַי לֶחֶם הַפֶּחָה לֹא אָכַֽלְתִּי׃
15 ೧೫ ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.
וְהַפַּחוֹת הָרִאשֹׁנִים אֲשֶׁר־לְפָנַי הִכְבִּידוּ עַל־הָעָם וַיִּקְחוּ מֵהֶם בְּלֶחֶם וָיַיִן אַחַר כֶּֽסֶף־שְׁקָלִים אַרְבָּעִים גַּם נַעֲרֵיהֶם שָׁלְטוּ עַל־הָעָם וַאֲנִי לֹא־עָשִׂיתִי כֵן מִפְּנֵי יִרְאַת אֱלֹהִֽים׃
16 ೧೬ ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.
וְגַם בִּמְלֶאכֶת הַחוֹמָה הַזֹּאת הֶחֱזַקְתִּי וְשָׂדֶה לֹא קָנִינוּ וְכׇל־נְעָרַי קְבוּצִים שָׁם עַל־הַמְּלָאכָֽה׃
17 ೧೭ ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.
וְהַיְּהוּדִים וְהַסְּגָנִים מֵאָה וַחֲמִשִּׁים אִישׁ וְהַבָּאִים אֵלֵינוּ מִן־הַגּוֹיִם אֲשֶׁר־סְבִיבֹתֵינוּ עַל־שֻׁלְחָנִֽי׃
18 ೧೮ ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕುರಿ, ಕೆಲವು ಪಕ್ಷಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲಾ ಬಗೆಯ ದ್ರಾಕ್ಷಾರಸವನ್ನು ಬೇಕಾದಷ್ಟು ಒದಗಿಸಲು ವ್ಯವಸ್ಥೆಮಾಡಿದೆ. ಇಷ್ಟೆಲ್ಲಾ ಇದ್ದರೂ ಆ ಜನರು ಮಾಡುತ್ತಿದ್ದ ಕೆಲಸವು ಬಹು ಕಠಿಣವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಭತ್ಯವನ್ನು ಕೇಳಲೇ ಇಲ್ಲ.
וַאֲשֶׁר הָיָה נַעֲשֶׂה לְיוֹם אֶחָד שׁוֹר אֶחָד צֹאן שֵׁשׁ־בְּרֻרוֹת וְצִפֳּרִים נַֽעֲשׂוּ־לִי וּבֵין עֲשֶׂרֶת יָמִים בְּכׇל־יַיִן לְהַרְבֵּה וְעִם־זֶה לֶחֶם הַפֶּחָה לֹא בִקַּשְׁתִּי כִּֽי־כָֽבְדָה הָעֲבֹדָה עַל־הָעָם הַזֶּֽה׃
19 ೧೯ ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.
זׇכְרָה־לִּי אֱלֹהַי לְטוֹבָה כֹּל אֲשֶׁר־עָשִׂיתִי עַל־הָעָם הַזֶּֽה׃

< ನೆಹೆಮೀಯನು 5 >