< ನೆಹೆಮೀಯನು 5 >
1 ೧ ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.
१तब लोग और उनकी स्त्रियों की ओर से उनके भाई यहूदियों के विरुद्ध बड़ी चिल्लाहट मची।
2 ೨ ಅವರಲ್ಲಿ ಕೆಲವರು, “ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ” ಎಂದು ಹೇಳಿದರು.
२कुछ तो कहते थे, “हम अपने बेटे-बेटियों समेत बहुत प्राणी हैं, इसलिए हमें अन्न मिलना चाहिये कि उसे खाकर जीवित रहें।”
3 ೩ ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು.
३कुछ कहते थे, “हम अपने-अपने खेतों, दाख की बारियों और घरों को अकाल के कारण गिरवी रखते हैं, कि हमें अन्न मिले।”
4 ೪ ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.
४फिर कुछ यह कहते थे, “हमने राजा के कर के लिये अपने-अपने खेतों और दाख की बारियों पर रुपया उधार लिया।
5 ೫ ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.
५परन्तु हमारा और हमारे भाइयों का शरीर और हमारे और उनके बच्चे एक ही समान हैं, तो भी हम अपने बेटे-बेटियों को दास बनाते हैं; वरन् हमारी कोई-कोई बेटी दासी भी हो चुकी हैं; और हमारा कुछ बस नहीं चलता, क्योंकि हमारे खेत और दाख की बारियाँ औरों के हाथ पड़ी हैं।”
6 ೬ ಅವರ ಬೊಬ್ಬೆಯನ್ನೂ, ಮಾತುಗಳನ್ನೂ ಕೇಳಿದಾಗ ನಾನು ಬಹಳ ಸಿಟ್ಟುಗೊಂಡೆನು.
६यह चिल्लाहट और ये बातें सुनकर मैं बहुत क्रोधित हुआ।
7 ೭ ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ
७तब अपने मन में सोच विचार करके मैंने रईसों और हाकिमों को घुड़ककर कहा, “तुम अपने-अपने भाई से ब्याज लेते हो।” तब मैंने उनके विरुद्ध एक बड़ी सभा की।
8 ೮ ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.
८और मैंने उनसे कहा, “हम लोगों ने तो अपनी शक्ति भर अपने यहूदी भाइयों को जो अन्यजातियों के हाथ बिक गए थे, दाम देकर छुड़ाया है, फिर क्या तुम अपने भाइयों को बेचोगे? क्या वे हमारे हाथ बिकेंगे?” तब वे चुप रहे और कुछ न कह सके।
9 ೯ ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.
९फिर मैं कहता गया, “जो काम तुम करते हो वह अच्छा नहीं है; क्या तुम को इस कारण हमारे परमेश्वर का भय मानकर चलना न चाहिये कि हमारे शत्रु जो अन्यजाति हैं, वे हमारी नामधराई न करें?
10 ೧೦ ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ.
१०मैं भी और मेरे भाई और सेवक उनको रुपया और अनाज उधार देते हैं, परन्तु हम इसका ब्याज छोड़ दें।
11 ೧೧ ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.
११आज ही उनको उनके खेत, और दाख, और जैतून की बारियाँ, और घर फेर दो; और जो रुपया, अन्न, नया दाखमधु, और टटका तेल तुम उनसे ले लेते हो, उसका सौवाँ भाग फेर दो?”
12 ೧೨ ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.
१२उन्होंने कहा, “हम उन्हें फेर देंगे, और उनसे कुछ न लेंगे; जैसा तू कहता है, वैसा ही हम करेंगे।” तब मैंने याजकों को बुलाकर उन लोगों को यह शपथ खिलाई, कि वे इसी वचन के अनुसार करेंगे।
13 ೧೩ ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.
१३फिर मैंने अपने कपड़े की छोर झाड़कर कहा, “इसी रीति से जो कोई इस वचन को पूरा न करे, उसको परमेश्वर झाड़कर, उसका घर और कमाई उससे छुड़ाए, और इसी रीति से वह झाड़ा जाए, और कंगाल हो जाए।” तब सारी सभा ने कहा, “आमीन!” और यहोवा की स्तुति की। और लोगों ने इस वचन के अनुसार काम किया।
14 ೧೪ ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.
१४फिर जब से मैं यहूदा देश में उनका अधिपति ठहराया गया, अर्थात् राजा अर्तक्षत्र के राज्य के बीसवें वर्ष से लेकर उसके बत्तीसवें वर्ष तक, अर्थात् बारह वर्ष तक मैं और मेरे भाइयों ने अधिपतियों के हक़ का भोजन नहीं खाया।
15 ೧೫ ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.
१५परन्तु पहले अधिपति जो मुझसे पहले थे, वे प्रजा पर भार डालते थे, और उनसे रोटी, और दाखमधु, और इसके साथ चालीस शेकेल चाँदी लेते थे, वरन् उनके सेवक भी प्रजा के ऊपर अधिकार जताते थे; परन्तु मैं ऐसा नहीं करता था, क्योंकि मैं यहोवा का भय मानता था।
16 ೧೬ ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.
१६फिर मैं शहरपनाह के काम में लिपटा रहा, और हम लोगों ने कुछ भूमि मोल न ली; और मेरे सब सेवक काम करने के लिये वहाँ इकट्ठे रहते थे।
17 ೧೭ ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.
१७फिर मेरी मेज पर खानेवाले एक सौ पचास यहूदी और हाकिम और वे भी थे, जो चारों ओर की अन्यजातियों में से हमारे पास आए थे।
18 ೧೮ ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕುರಿ, ಕೆಲವು ಪಕ್ಷಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲಾ ಬಗೆಯ ದ್ರಾಕ್ಷಾರಸವನ್ನು ಬೇಕಾದಷ್ಟು ಒದಗಿಸಲು ವ್ಯವಸ್ಥೆಮಾಡಿದೆ. ಇಷ್ಟೆಲ್ಲಾ ಇದ್ದರೂ ಆ ಜನರು ಮಾಡುತ್ತಿದ್ದ ಕೆಲಸವು ಬಹು ಕಠಿಣವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಭತ್ಯವನ್ನು ಕೇಳಲೇ ಇಲ್ಲ.
१८जो प्रतिदिन के लिये तैयार किया जाता था वह एक बैल, छः अच्छी-अच्छी भेड़ें व बकरियाँ थीं, और मेरे लिये चिड़ियें भी तैयार की जाती थीं; दस-दस दिन के बाद भाँति-भाँति का बहुत दाखमधु भी तैयार किया जाता था; परन्तु तो भी मैंने अधिपति के हक़ का भोज नहीं लिया,
19 ೧೯ ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.
१९क्योंकि काम का भार प्रजा पर भारी था। हे मेरे परमेश्वर! जो कुछ मैंने इस प्रजा के लिये किया है, उसे तू मेरे हित के लिये स्मरण रख।