< ನೆಹೆಮೀಯನು 6 >
1 ೧ ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.
Divarı bərpa etdiyimi və orada uçuq-söküyün qalmadığını Sanballata, Toviyaya, Ərəb Geşemə və başqa düşmənlərimizə xəbər verdilər. Lakin mən o vaxta qədər darvazaların qapı taylarını yerinə vurmamışdım.
2 ೨ ಅವರಲ್ಲಿ ಸನ್ಬಲ್ಲಟ್, ಗೆಷೆಮರು ನನಗೆ, “ಓನೋ ಸಮಭೂಮಿಯ ಒಂದು ಗ್ರಾಮದಲ್ಲಿ ಒಂದು ಸಭೆ ಸೇರೋಣ ಬಾ” ಎಂದು ಹೇಳಿ ಕಳುಹಿಸಿದರು. ಇದು ಅವರು ನನಗೆ ಕೇಡು ಬಗೆಯುವುದಕ್ಕಾಗಿಯೇ ಎಂದು ತಿಳಿಯಿತು.
Sanballat və Geşem yanıma adam göndərib dedi: «Gəl Ono düzənliyindəki kəndlərin birində görüşək». Amma onlar mənə pislik etmək niyyətində idi.
3 ೩ ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದೆನು.
Mən onların yanına qasid göndərib dedim: «Böyük bir iş görürəm və oraya enə bilmərəm. Bu işi qoyub yanınıza endiyim müddət ərzində iş nə üçün dayansın?»
4 ೪ ಅವರು ನಾಲ್ಕು ಬಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರವನ್ನು ಕೊಟ್ಟೆನು.
Düşmənlər yanıma dörd dəfə bu xəbəri göndərdi və mən onlara eyni cavab verdim.
5 ೫ ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು.
Sanballat beşinci dəfə nökərini eyni xəbərlə mənim yanıma yolladı və onun əlində möhürlənməmiş namə var idi.
6 ೬ ಅದರಲ್ಲಿ “ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ.
Məktubda belə yazılmışdı: «Başqa millətlər arasında söz yayılıb və Geşem deyir ki, sən və Yəhudilər üsyan etmək niyyətindəsiniz. Divarı da buna görə tikirsən. Şayiələrə görə sən onların padşahı olmaq istəyirsən.
7 ೭ ಇದಲ್ಲದೆ, ‘ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆ’ ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಈ ಸುದ್ದಿ ರಾಜನಿಗೂ ತಲುಪಿದೆ; ಆದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ” ಎಂದು ಅದರಲ್ಲಿ ಬರೆದಿತ್ತು.
“Yəhudada padşah var” deyə özün haqqında car çəkmək üçün Yerusəlimdə peyğəmbərlər də təyin etmisən. İndi isə bu sözlər padşaha çatacaq. Buna görə də gəl bu barədə birlikdə məsləhətləşək».
8 ೮ ಅದಕ್ಕೆ ನಾನು, “ನೀನು ಬರೆದಿರುವಂಥ ವಿಚಾರಗಳು ಯಾವುದು ಇಲ್ಲಿ ನಡೆದಿರುವುದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ” ಎಂದು ಹೇಳಿ ಕಳುಹಿಸಿದೆನು.
O vaxt Sanballatın yanına adam göndərib dedim: «Dediyin şeylərin heç biri olmayıb, sən onları özündən uydurmusan».
9 ೯ ಹೀಗೆ ಎಲ್ಲರೂ, “ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ಮುಗಿಸದೆ ಇರಲಿ” ಎಂದು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ಆದರೆ ನನ್ನ ದೇವರೇ, ನನ್ನ ಕೈಗಳನ್ನು ಬಲಗೊಳಿಸಿ ನನ್ನನ್ನು ಧೈರ್ಯಪಡಿಸು ಎಂದು ಪ್ರಾರ್ಥಿಸಿದೆನು
Çünki hamı bizi qorxutmağa çalışıb deyirdi: «Bu işdən əlləri soyuyacaq və bu iş baş tutmayacaq». Ay Allah, indi Sən əllərimə qüvvət ver!
10 ೧೦ ಆನಂತರ ನಾನು ಮೆಹೇಟಬೇಲನ ಮೊಮ್ಮಗನೂ, ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಈ ರಾತ್ರಿಯೇ ಬರುತ್ತಾರೆ. ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿ ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ” ಎಂದು ಹೇಳಿದನು.
Mən Mehetavel oğlu Delaya oğlu Şemayanın evinə getdim. O, evinə qapanıb qalmışdı. Mənə dedi: «Gəl Allahın evində – məbəddə görüşək və qapılarını bağlayaq. Çünki səni öldürməyə adamlar gələcək. Bəli, gecə ikən səni öldürməyə gələcəklər».
11 ೧೧ ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು.
Mən isə dedim: «Mənim kimi adam qaçarmı? Canını qurtarmaq üçün məbəddə gizlənərmi? Əsla belə etmərəm!»
12 ೧೨ ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.
Bunu başa düşdüm ki, Şemayanı Allah göndərməmişdi. Bu peyğəmbərlik sözünü mənə qarşı ona görə söyləmişdi ki, Toviya ilə Sanballat onu pulla tutmuşdu.
13 ೧೩ ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು.
O məni qorxutmaq üçün muzdla tutulmuşdu ki, mən dediyini edib günaha batım. Beləcə məni pisləyib hörmətdən salmağa fürsət axtarırdılar.
14 ೧೪ ನನ್ನ ದೇವರೇ, ಟೋಬೀಯ, ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮತ್ತು ಇತರ ಪ್ರವಾದಿಗಳನ್ನು ನೆನಪಿನಲ್ಲಿಟ್ಟುಕೋ.
Ey Allahım, Toviya ilə Sanballatı, həm də məni qorxutmaq istəyən qadın peyğəmbər Noadyanı və digər peyğəmbərləri bu əməllərinə görə yadda saxla!
15 ೧೫ ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಪೂರ್ಣಗೊಂಡಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.
Elul ayının iyirmi beşində, əlli iki gün ərzində divarın tikintisi tamamlandı.
16 ೧೬ ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗದವರಿಗೆ ತಲುಪಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿ ತಗ್ಗಿ ಹೋದರು. ಈ ಕಾರ್ಯವು ದೇವರ ಸಹಾಯದಿಂದಲೇ ಪೂರ್ಣಗೊಂಡಿತು ಎಂಬುದು ಅವರಿಗೆ ತಿಳಿದುಬಂದಿತು.
Bütün düşmənlərimiz, ətrafımızdakı xalqlar bunu eşidəndə qorxdular və öz gözlərində çox kiçildilər. Çünki onlar başa düşdülər ki, bu iş Allahımızın köməyi ilə edilib.
17 ೧೭ ಅದೇ ಸಮಯದಲ್ಲಿ ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರ ವ್ಯವಹಾರಗಳು ನಡೆಯುತ್ತಿದ್ದವು.
Həm də o günlər Yəhudanın əyanları Toviyaya çoxlu namə göndərirdi və Toviyadan da onlara cavablar gəlirdi.
18 ೧೮ ಏಕೆಂದರೆ ಅವನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದ ಹಾಗೂ ಅವನ ಮಗನಾದ ಯೆಹೋಹಾನಾನನೆಂಬ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆ ಮಾಡಿಕೊಂಡಿದ್ದನು. ಆದುದರಿಂದ ಯೆಹೂದ್ಯರಲ್ಲಿ ಅನೇಕರು ಅವನೊಂದಿಗೆ ಪ್ರಮಾಣ ಮಾಡಿ ಅವರಿಗೆ ವಶವಾಗಿದ್ದರು.
Toviya Arah oğlu Şekanyanın kürəkəni olduğuna görə Yəhudada çox adam onunla əhd bağlamışdı. Həm də Toviyanın oğlu Yehoxanan Berekya oğlu Meşullamın qızını almışdı.
19 ೧೯ ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.
Əyanlar onun yaxşı işləri haqqında mənim yanımda danışardılar və mənim sözlərimi ona çatdırardılar. Toviya məni qorxutmaq üçün namələr göndərirdi.