< ನೆಹೆಮೀಯನು 8 >

1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.
और जब सातवाँ महीना आया, तो बनी — इस्राईल अपने — अपने शहर में थे। और सब लोग यकतन होकर पानी फाटक के सामने के मैदान में इकट्ठा हुए, और उन्होंने एज्रा फ़क़ीह से 'अर्ज़ की कि मूसा की शरी'अत की किताब को, जिसका ख़ुदावन्द ने इस्राईल को हुक्म दिया था लाए।
2 ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು.
और सातवें महीने की पहली तारीख़ को एज्रा काहिन तौरेत को जमा'अत के, या'नी मर्दों और 'औरतों और उन सबके सामने ले आया जो सुनकर समझ सकते थे।
3 ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ನೆರೆದು ಬಂದಿದ್ದ ಗ್ರಹಿಸಲು ಶಕ್ತರಾದ ಸ್ತ್ರೀಪುರುಷರ ಮುಂದೆ ಧರ್ಮಶಾಸ್ತ್ರವನ್ನು ಮುಂಜಾನೆಯಿಂದ ಮಧ್ಯಾಹ್ನದವರೆಗೂ ಓದಿದನು. ಜನರು ಆಲಿಸುತ್ತಾ ಇದ್ದರು.
और वह उसमें से पानी फाटक के सामने के मैदान में, सुबह से दोपहर तक मर्दों और 'औरतों और सभों के आगे जो समझ सकते थे पढ़ता रहा; और सब लोग शरी'अत की किताब पर कान लगाए रहे।
4 ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು.
और एज्रा फ़कीह एक चोबी मिम्बर पर, जो उन्होंने इसी काम के लिए बनाया था खड़ा हुआ; और उसके पास मत्तितियाह, और समा', और 'अनायाह, और ऊरिय्याह, और ख़िलक़ियाह, और मासियाह उसके दहने खड़े थे; और उसके बाएँ फ़िदायाह, और मिसाएल, और मलकियाह, और हाशूम, और हसबदाना, और ज़करियाह और मुसल्लाम थे।
5 ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು.
और एज्रा ने सब लोगों के सामने किताब खोली क्यूँकि वह सब लोगों से ऊपर था, और जब उसने उसे खोला तो सब लोग उठ खड़े हुए;
6 ಎಜ್ರನು ಪರಾತ್ಪರನಾದ ದೇವರಾದ ಯೆಹೋವನನ್ನು ಸ್ತುತಿಸಿದಾಗ, ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್, ಎಂದು ಹೇಳಿ ನೆಲದವರೆಗೂ ತಲೆಬಾಗಿ ಸ್ತೋತ್ರ ಆರ್ಪಿಸಿ ಯೆಹೋವನನ್ನು ಆರಾಧಿಸಿದರು.
और एज्रा ने ख़ुदावन्द ख़ुदा — ए — 'अज़ीम को मुबारक कहा; और सब लोगों ने अपने हाथ उठाकर जवाब दिया, आमीन — आमीन “और उन्होंने औंधे मुँह ज़मीन तक झुककर ख़ुदावन्द को सिज्दा किया।
7 ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.
यशू'अ, और बानी, और सरीबियाह, और यामिन और 'अक़्क़ूब, और सब्बती, और हूदियाह, और मासियाह, और क़लीता, और 'अज़रियाह, और यूज़बाद, और हनान, और फ़िलायाह और लावी लोगों को शरी'अत समझाते गए; और लोग अपनी — अपनी जगह पर खड़े रहे।
8 ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು.
और उन्होंने उस किताब या'नी ख़ुदा की शरी'अत में से साफ़ आवाज़ से पढ़ा, फिर उसके मानी बताए और उनको 'इबारत समझा दी।
9 ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.
और नहमियाह ने जो हाकिम था, और एज्रा काहिन और फ़क़ीह ने, और उन लावियों ने जो लोगों को सिखा रहे थे सब लोगों से कहा, आज का दिन ख़ुदावन्द तुम्हारे ख़ुदा के लिए पाक है, न ग़म करो न रो।” क्यूँकि सब लोग शरी'अत की बातें सुनकर रोने लगे थे।
10 ೧೦ ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.
फिर उसने उनसे कहा, “अब जाओ, और जो मोटा है खाओ, और जो मीठा है पियो और जिनके लिए कुछ तैयार नहीं हुआ उनके पास भी भेजो; क्यूँकि आज का दिन हमारे ख़ुदावन्द के लिए पाक है; और तुम मायूस मत हो, क्यूँकि ख़ुदावन्द की ख़ुशी तुम्हारी पनाहगाह है।”
11 ೧೧ ಲೇವಿಯರೂ ಜನರಿಗೆ, “ಸುಮ್ಮನಿರಿ, ಇದು ದೇವರ ಪರಿಶುದ್ಧ ದಿನ, ದುಃಖಿಸಬೇಡಿರಿ” ಎಂದು ಹೇಳಿ ಜನರನ್ನು ಸಂತೈಸಿದರು.
और लावियों ने सब लोगों को चुप कराया और कहा, “ख़ामोश हो जाओ, क्यूँकि आज का दिन पाक है; और ग़म न करो।”
12 ೧೨ ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.
तब सब लोग खाने पीने और हिस्सा भेजने और बड़ी ख़ुशी करने को चले गए; क्यूँकि वह उन बातों को जो उनके आगे पढ़ी गई, समझे थे।
13 ೧೩ ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ, ಯಾಜಕರೂ, ಲೇವಿಯರೂ ಧರ್ಮನಿಯಮಗಳ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಸೇರಿಬಂದರು.
और दूसरे दिन सब लोगों के आबाई ख़ान्दानों के सरदार और काहिन और लावी, एज्रा फ़क़ीह के पास इकट्ठे हुए कि तौरेत की बातों पर ध्यान लगाएँ।
14 ೧೪ ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದ ಪ್ರಕಾರ ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಾಯೇಲರು ಬಿಡಾರಗಳಲ್ಲಿ ವಾಸಮಾಡಬೇಕು.
और उनको शरी'अत में ये लिखा मिला, कि ख़ुदावन्द ने मूसा के ज़रिए' फ़रमाया है कि बनी — इस्राईल सातवें महीने की 'ईद में झोपड़ियों में रहा करें,
15 ೧೫ ಇದು ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯೂ ಡಂಗುರದಿಂದ ಸಾರಲ್ಪಡಬೇಕು ಎಂಬುದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮನಿಯಮಗಳಲ್ಲಿ ಸಿಕ್ಕಿತು. ಅದರಲ್ಲಿ, “ಆ ಬಿಡಾರಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ್ ಮರ, ಕಾಡು ಒಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳು ಅಲ್ಲದೆ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕು.”
और अपने सब शहरों में और येरूशलेम में ये 'ऐलान और मनादी कराएँ कि पहाड़ पर जाकर ज़ैतून की डालियाँ और जंगली ज़ैतून की डालियाँ और मेहंदी की डालियाँ और खजूर की शाख़ें, और घने दरख़्तों की डालियाँ झोपड़ियों के बनाने को लाओ, जैसा लिखा है।
16 ೧೬ ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳ, ಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಿಲು, ಎಫ್ರಾಯೀಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.
तब लोग जा — जा कर उनको लाए, और हर एक ने अपने घर की छत पर, और अपने अहाते में, और ख़ुदा के घर के सहनों में, और पानी फाटक के मैदान में, और इफ़्राईमी फाटक के मैदान में अपने लिए झोपड़ियाँ बनाई।
17 ೧೭ ನೂನನ ಮಗನಾದ ಯೆಹೋಶುವನ ಕಾಲದಿಂದ ಆ ವರೆಗೂ ಇಸ್ರಾಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿ ಬಂದ ಸರ್ವ ಸಮೂಹದವರಾದರೋ ಬಿಡಾರಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಮಾಡುತ್ತಾ ಬಹಳ ಸಂತೋಷಪಟ್ಟರು.
और उन लोगों की सारी जमा'अत ने जो ग़ुलामी से फिर आए थे, झोपड़ियाँ बनाई और उन्हीं झोपड़ियों में रहे; क्यूँकि यशू'अ बिन नून के दिनों से उस दिन तक बनी — इस्राईल ने ऐसा नहीं किया था। चुनाँचे बहुत बड़ी ख़ुशी हुई।
18 ೧೮ ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.
और पहले दिन से आख़िरी दिन तक रोज़ — ब — रोज़ उसने ख़ुदा की शरी'अत की किताब पढ़ी। और उन्होंने सात दिन 'ईद मनाई, और आठवें दिन दस्तूर के मुवाफ़िक़ पाक मजमा' इकठ्ठा हुआ।

< ನೆಹೆಮೀಯನು 8 >