< ನೆಹೆಮೀಯನು 1 >
1 ೧ ಹಕಲ್ಯನ ಮಗನಾದ ನೆಹೆಮೀಯನ ಚರಿತ್ರೆ: ಇಪ್ಪತ್ತನೆಯ ವರ್ಷದ ಮಾರ್ಗಶಿರ್ಷ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ,
Hakalia babarima Nehemia nsɛm ni: Ɔsram Kislev (bɛyɛ Obubuo) mpaemu akyi wɔ Ɔhene Artasasta adedi afe a ɛto so aduonu so no, na mewɔ Susa aban mu.
2 ೨ ನನ್ನ ಸಹೋದರಲ್ಲಿ ಒಬ್ಬನಾದ ಹನಾನೀಯನೂ, ಬೇರೆ ಕೆಲವರು ಯೆಹೂದ ಜನರೊಂದಿಗೆ, ನನ್ನ ಬಳಿಗೆ ಬಂದರು. ಸೆರೆಯಾಳುಗಳಾಗಿ ಹೋಗಿದ್ದವರಲ್ಲಿ ಕೆಲವು ಯೆಹೂದ್ಯರು ತಪ್ಪಿಸಿಕೊಂಡು ನನ್ನ ಬಳಿಗೆ ಬಂದಾಗ ಯೆರೂಸಲೇಮಿನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸಿದೆನು.
Me nuanom mmarima mu ɔbaako a wɔfrɛ no Hanani no ne mmarima bi a wofi Yuda ba bɛsraa me. Mibisaa wɔn Yudafo a nkae ne wɔn a wɔafi nnommum mu aba no ne Yerusalem ho asɛm.
3 ೩ ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.
Wɔka kyerɛɛ me se, “Nneɛma nkɔ yiye mma wɔn a wɔsan kɔɔ Yudaman mu no. Ɔhaw kɛse ne animguase aka wɔn. Wɔabubu Yerusalem fasu no agu fam, na wɔahyew apon no nso.”
4 ೪ ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.
Bere a metee eyinom no, metenaa ase sui. Nokware, mitwaa agyaadwo nna bi, bua dae, bɔɔ ɔsoro Nyankopɔn mpae.
5 ೫ ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,
Afei, mekae se, “Awurade, ɔsoro Nyankopɔn, Onyankopɔn a ɔyɛ ɔkɛse na ɔyɛ ɔnwonwani no, Onyankopɔn a ɔkora ne nokware dɔ apam a ɔwɔ ma wɔn a wɔdɔ no na wodi ne mmara nsɛm so no,
6 ೬ ಕೃಪೆಮಾಡಿ ನನ್ನ ಮೊರೆಗೆ ಕಿವಿಗೊಡು, ನನ್ನನ್ನು ಕಟಾಕ್ಷಿಸು, ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲರಿಗಾಗಿ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆ ಮಾಡುತ್ತಾ ಇದ್ದೇನೆ; ನಾನೂ, ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರಾಗಿದ್ದೇವೆ.
tie me mpaebɔ. Hwɛ me sɛ merebɔ mpae ma Israelfo anadwo ne awia. Mepae mu ka se, yɛayɛ bɔne atia wo. Yiw, mpo, me ara me fifo ne mʼankasa ayɛ bɔne!
7 ೭ ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.
Yɛayɛ bɔne kɛse sɛ yɛanni wo mmara nsɛm, wo mmara, ne wʼahyɛde a wonam wʼakoa Mose so de maa yɛn no so.
8 ೮ ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು;
“Mesrɛ sɛ, kae asɛm a woka kyerɛɛ wʼakoa Mose se, ‘Sɛ moyɛ bɔne a, mɛtetew mo mu akɔ amanaman so.
9 ೯ ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.
Na sɛ mosan ba me nkyɛn, na mudi me mmara nsɛm so a, sɛ mpo, wɔatwa mo asu akɔ asase ano nohɔ koraa a, mede mo bɛsan aba faako a mayi asi hɔ sɛ wɔnhyɛ me din anuonyam no.’
10 ೧೦ “ಅವರು ನಿನ್ನ ಸೇವಕರೂ, ನೀನು ನಿನ್ನ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.
“Yɛyɛ wʼasomfo, nnipa a wonam wo tumi kɛse so gyee yɛn no.
11 ೧೧ ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.
Awurade, mesrɛ wo, tie me mpaebɔ. Tie yɛn mu bi a wɔn ani gye sɛ wɔhyɛ wo anuonyam no mpaebɔ. Mesrɛ sɛ, ma ensi me yiye, bere a merekɔ ɔhene nkyɛn akɔsrɛ no adom bi yi. Fa hyɛ ne koma mu, na ɔnyɛ me adɔe.” Na meyɛ ɔhene nsahyɛni.