Aionian Verses
ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು. (Sheol )
(parallel missing)
ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು. (Sheol )
(parallel missing)
ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು. (Sheol )
(parallel missing)
ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು. (Sheol )
(parallel missing)
ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು. (Sheol )
(parallel missing)
ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು. (Sheol )
(parallel missing)
ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು. (Sheol )
(parallel missing)
“ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ. (Sheol )
(parallel missing)
ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು, ಮರಣಕರವಾದ ಉರುಲುಗಳು ನನ್ನನ್ನು ಸುತ್ತಿಕೊಂಡವು. (Sheol )
(parallel missing)
ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು. (Sheol )
(parallel missing)
ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು. (Sheol )
(parallel missing)
ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ. (Sheol )
(parallel missing)
ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವುದೇನು? (Sheol )
(parallel missing)
ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು! (Sheol )
(parallel missing)
ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ. (Sheol )
(parallel missing)
ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ಧೂಳಿಗೆ ಸೇರಲು ಸಾಧ್ಯವೇ?” (Sheol )
(parallel missing)
ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು. (Sheol )
(parallel missing)
ಬರಗಾಲವೂ, ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ, ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವುದು. (Sheol )
(parallel missing)
ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ. (Sheol )
(parallel missing)
ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? (Sheol )
(parallel missing)
ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. (Sheol )
(parallel missing)
ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. (Sheol )
(parallel missing)
ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು. (Sheol )
(parallel missing)
ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ. (Sheol )
(parallel missing)
ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ. (Sheol )
(parallel missing)
ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು. (Sheol )
(parallel missing)
ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. (ಸೆಲಾ) (Sheol )
(parallel missing)
ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ. (Sheol )
(parallel missing)
ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ. (Sheol )
(parallel missing)
ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು. (Sheol )
(parallel missing)
ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? (ಸೆಲಾ) (Sheol )
(parallel missing)
ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. (Sheol )
(parallel missing)
ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ. (Sheol )
(parallel missing)
ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. (Sheol )
(parallel missing)
ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ. (Sheol )
(parallel missing)
ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು. (Sheol )
(parallel missing)
ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ. (Sheol )
(parallel missing)
ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು. (Sheol )
(parallel missing)
ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ. (Sheol )
(parallel missing)
ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು. (Sheol )
(parallel missing)
ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು. (Sheol )
(parallel missing)
ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ. (Sheol )
(parallel missing)
ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ. (Sheol )
(parallel missing)
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ. (Sheol )
(parallel missing)
ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ. (Sheol )
(parallel missing)
ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು. (Sheol )
(parallel missing)
“ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು. (Sheol )
(parallel missing)
ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ. (Sheol )
(parallel missing)
ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು. (Sheol )
(parallel missing)
ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ. (Sheol )
(parallel missing)
ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ. (Sheol )
(parallel missing)
ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು. (Sheol )
(parallel missing)
ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು. (Sheol )
(parallel missing)
ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ. (Sheol )
(parallel missing)
ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ. (Sheol )
(parallel missing)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು. (Sheol )
(parallel missing)
ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು. (Sheol )
(parallel missing)
ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹತರಾದವರ ಜೊತೆಗೆ ಸೇರಿದರು. (Sheol )
(parallel missing)
ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ, ‘ಇವರು ಸುನ್ನತಿಯಿಲ್ಲದವರಾಗಿಯೂ, ಖಡ್ಗದಿಂದ ಹತರಾದವರಾಗಿಯೂ ಇಳಿದು ಬಂದಿದ್ದಾರೆ’ ಅಂದುಕೊಳ್ಳುವರು. (Sheol )
(parallel missing)
ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ, ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ? (Sheol )
(parallel missing)
ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು. (Sheol )
(parallel missing)
ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು. (Sheol )
(parallel missing)
“ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ. (Sheol )
(parallel missing)
ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು. (Sheol )
(parallel missing)
ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು. (Geenna )
Ki kitan'ĭstopuau annŏk' ksĭstapĭstsĭm'iuōk ox'okoă ai'akesetsĭmaie okŏk'itsĭmani; ki annŏk' ak'anĭstsiuŏk ox'okoa Raca, aiakesetsimaie okok'itsĭmani: ki annŏk' ak'anĭstsiuŏk, kĭtŭt'tsapsi, ai'akesetsĭmaie Gihenni ots'tsiĭmiaie. (Geenna )
ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. (Geenna )
Kinet'oopspi itsuyĭsseeniki, sauau'tos ki mĭs'tŭpapiksĭstsĭs: ŏkh'siu tŭks'kŭma mŏk'saiĭnakuaiĭssi koŏpspi, ŏkstaiĭs'tupapiksĭs kostŭm Gehenna. (Geenna )
ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. (Geenna )
Kinet'otsĭs itsuyĭsse'eniki kawksĭnnĭt', ki mĭs'tŭpapĭxit: ŏkh'siu tuks'kaii kotsĭs'i mŏk'saiĭnakuaiĭssi, ŏkstaiĭs'tŭpapiksĭs kostŭm Gehenna. (Geenna )
ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ. (Geenna )
Ki pinstŭn'nokau anniks'ĭsk akenitomixk mostŭm', ki sta'aw matokotsenĭtsiau'ats: stŭn'nok annŏk' i kots'enĭts iuŏkax mostŭm' ki staaw stakhts'im. (Geenna )
ಎಲೈ ಕಪೆರ್ನೌಮೇನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. (Hadēs )
Ki ksĕsto'a Capernaum, kitspĭn'noko spots'im, hades kitaks'ĭnnĭssimoko; omŭk'apotŭksĭsts kitakap'ioyim itap'ĭstutsipiau ittsipstsapistutŭkkiopiau Sodom, ĭs'taisakiaitaitsiopi. (Hadēs )
ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ. (aiōn )
Annŏk' itŭp'sauokŏmotsepuyiuŏk Nĭn'au Okku'i ak'itsksĭnoau, ki annŏk' itŭpsauokŏmotsepuyiuŏk Atsĭm'iStaaw mat'akitsksĭnoau'ats annom' ksŏk'kum ki aie'nĭssi otsĭs'tŭpipuitappiisĭnni, mat'akitsksĭnoauats. (aiōn )
ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ. (aiōn )
Annŏk' mat'sĭmŏk ĭstsŭpipum'ani ksĭssi'ix, ai'okhtsĭmiu atsĭm'epoawsin; ki annok' pai'tappiisĭnni ĭstap'aitsitani, ki spŭkĭs'sists ito'satstomiauaie atsĭm'epoawsĭnni, ki matsinasiu'ats. (aiōn )
ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. (aiōn )
Katum'a annŏk' ai'sŭppipumattomĕsts, Sauum'itsitappiuă itamiu; pokiak'sĭnni ksŏkkum aiksiuo'si; ki aipo'kiakix, atsĭm'otokatatsĭsau, (aiōn )
ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. (aiōn )
Manĭsts'aumoipitŭkkipiau makap'ĭnsĭmmanĭsts ki manĭstse'tsĭnĭtspiau; ak'ŭnĭststsiu aiksiuo'si annom' ksŏk'kum. (aiōn )
ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. (aiōn )
Ak'otŭmanĭstsiu aiksiuos'i ksŏk'kum: atsĭm'otokatatsix ak'sipuksŭpsŭxiau, ki akai'aketaipiksĭstsiiau Sauum'itsitappix ki mokŏm'otsitappix; (aiōn )
ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನುಪೇತ್ರನು, ಈಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು. (Hadēs )
Ki kita'atanĭsto, ksĕsto'akauk Peter, ki am'om ok'otokŭm nitak'ittokhitokoĭska church; ki Hades istokh'sepĭstanĭsts matakatsiu'atsaie. (Hadēs )
ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (aiōnios )
Ŭn'nikaie kotsĭs' ki kokŏt'si ĭstsskĭmskŭkiats'otsenikiau, kŏksĭnit'au, ki mĭs'tŭpapiksĭstaiau: itŏkh'siu kŏk'kitsipĭssi opai' tappiisĭnni kŏks'ĭstsekaiisi ki kŏk'opokŏksi, kŏkstaitŭp'apixĭkŏsi kŭttaiaiapunstsiuasi ki kitai'akokŏtsĭsts ki kitai'akŏtsĭsts. (aiōnios )
ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna )
Ki koŏps'pi ĭstsskĭm'skŭkiatsotseniki, sauau'tos, ki mĭs'tŭpapiksĭstsĭs: itŏkh'siu kŏk'kitsipĭssi opai'tappiisĭnni tuks'kŭm moŏps'pa; kŏkstaitŭp'apixĭkosi kŭt'taiaiapunstsiuasii, ki kitaiakoŏpspix. (Geenna )
ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. (aiōnios )
Ki, sŭppĭt, tuks'kŭmi itsitotoiĭnaie ki an'iu, Ŏkhsĭn'ai, tsanĭstap'iua nŏk'ŏkhsĭstutsipi, nŏkkuinan'si ŭsk'sipaitappiisĭnni? (aiōnios )
ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು. (aiōnios )
Ki anniks'isk skĭm'ixk oko'auĕsts, ki anniks'isk skĭts' ixk umu'pappiipuauax ki ot'akemoauax ki un'oauax, ki oksist'oauax ki otkem'anoauax ki o'kosoauax, kiotsĭn'sĭmmanoauax, nĕsto'i itskĭm' iauĕsts, kepĭp'pi ak'okuyiau, ki akokuinan'attomiau ŭsk'sipaitappiisĭnni. (aiōnios )
ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು. (aiōn )
Ki otsĭtsĭnno'ŏsi moksoku'i omŭx'iniĭstsĭsi, itoto'aie ki matsitokonĭmau'atsaie, nam'itaitsii suio'pokĭsts, ki anĭstsiuaie, Ŭnnianĭst'sauŭsksaiĭn as it ksĕsto'a. Ki omŭx'inĭstsĭs sotŭm'ikŭnipisuiu. (aiōn )
“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ. (Geenna )
Kitaks'ksĭnipuau maka'pi ksĕsto'au ai'sĭnakix ki Pharisees, kitsiksĭs'tapokŏmotsitappiansuai kitotka'atau ksŏk'kum ki omŭk'sikĭmi kŏk'itokonoŏsi tuks'kŭmă matap'iuă mŏkĭtanĭs'tsitsitasi kanĭstsitsi'tawpi kitaumaitu'yĭssi, kanĭstŭm'ipuai ksĕsto'au Hell oku'yix kitak'anĭstsĭstokiaiĭstutoauau. (Geenna )
ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ? (Geenna )
Pitseksĭnax, opĭx'exĭnasĭnna, Tsa'a kitakanĭstupĭs'tapixsattopats Hell ĭstokŏk'itsimani? (Geenna )
ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು (aiōn )
Otsĭt'tokhitaupĭssi nitum'moyi Olives, ŭsksĭnĭmats'ax isĭmitoto'iauaie, ki an'iau, Anik'ĭnan Tsanĭstsĭs' akanĭstsiu'astsau? Ki tsa akanĭstsiu'a kitsipuksipusĭnni, ki punsksŏk'kuasĭsi? (aiōn )
ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. (aiōnios )
Akotŭm'anĭstsiuax anniks'isk ote'aksĭsautsĭs itau'pixk, ĭs'tapuk emŭtskax mŏkseĭnsau, ŭsksustsinasii ĭs'tapuk, ek'aisepŭtsĭstotomoiiauax au'tutsokiuă ki oto'tokatatsix: (aiōnios )
ಮತ್ತು ಅನೀತಿವಂತರಾದ ಇವರುನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು. (aiōnios )
Ki am'oxi aksĭstŭpitappo'iau ŭsk'sĭtauksĭstototspi: ki mokŏm'otsitappix akittappoiau ŭsk'sipaitappiisĭnni. (aiōnios )
ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗುಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು. (aiōn )
Isksĭnĭmats'okau mŏk'satsĭsauĕsts kĭtan'ĭstopuauĕsts; ki sat'sit, kitŭsks'opoksemopuau anĭstsiksĭs'tsikuĭsts aiksiuo'si ksŏk'kum. (aiōn )
ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು. (aiōn , aiōnios )
(parallel missing)
ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ. (aiōn )
(parallel missing)
ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna )
(parallel missing)
ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna )
(parallel missing)
ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. (Geenna )
(parallel missing)
ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು. (aiōnios )
(parallel missing)
ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು. (aiōn , aiōnios )
(parallel missing)
ಆಗ ಯೇಸು ಆ ಮರಕ್ಕೆ, “ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು. (aiōn )
(parallel missing)
ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು. (aiōn )
(parallel missing)
ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು. (aiōn )
(parallel missing)
ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ, (aiōn )
(parallel missing)
ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. (Abyssos )
(parallel missing)
ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ. (Hadēs )
(parallel missing)
ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು, (aiōnios )
(parallel missing)
ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ. (Geenna )
(parallel missing)
ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ. (aiōn )
(parallel missing)
“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ. (aiōnios )
(parallel missing)
ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ, (Hadēs )
(parallel missing)
ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ, (aiōnios )
(parallel missing)
ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು. (aiōn , aiōnios )
(parallel missing)
ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ. (aiōn )
(parallel missing)
ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ. (aiōn )
(parallel missing)
ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. (aiōnios )
(parallel missing)
“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. (aiōnios )
(parallel missing)
ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.” (aiōnios )
(parallel missing)
ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರುಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು. (aiōn , aiōnios )
(parallel missing)
ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು. (aiōnios )
(parallel missing)
ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. (aiōnios )
(parallel missing)
ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ. (aiōnios )
(parallel missing)
ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು. (aiōnios )
(parallel missing)
ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು. (aiōnios )
(parallel missing)
ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ. (aiōnios )
(parallel missing)
ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು. (aiōn )
(parallel missing)
ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. (aiōnios )
(parallel missing)
ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು. (aiōn )
(parallel missing)
ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ. (aiōnios )
(parallel missing)
ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ. (aiōn )
(parallel missing)
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು. (aiōn )
(parallel missing)
ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ? (aiōn )
(parallel missing)
ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ. (aiōn )
(parallel missing)
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. (aiōn , aiōnios )
(parallel missing)
ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ, (aiōn )
(parallel missing)
ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. (aiōnios )
(parallel missing)
ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು. (aiōn )
(parallel missing)
ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು. (aiōnios )
(parallel missing)
ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು. (aiōn )
(parallel missing)
ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು. (aiōn )
(parallel missing)
ನೀನು ಯಾರಾರನ್ನು ಕೊಟ್ಟಿದ್ದೀಯೋಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ. (aiōnios )
(parallel missing)
ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು. (aiōnios )
(parallel missing)
ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ. (Hadēs )
(parallel missing)
ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು. (Hadēs )
(parallel missing)
ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ. (aiōn )
(parallel missing)
ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. (aiōnios )
(parallel missing)
ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. (aiōnios )
(parallel missing)
ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ. (aiōn )
(parallel missing)
ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ. (aïdios )
(parallel missing)
ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್. (aiōn )
(parallel missing)
ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. (aiōnios )
(parallel missing)
ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು. (aiōnios )
(parallel missing)
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. (aiōnios )
(parallel missing)
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ. (aiōnios )
(parallel missing)
ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್. (aiōn )
(parallel missing)
ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’” ಆದರೆ ಅದು ಏನನ್ನು ಹೇಳುತ್ತದೆ. (Abyssos )
(parallel missing)
ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ. (eleēsē )
(parallel missing)
ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್. (aiōn )
(parallel missing)
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. (aiōn )
(parallel missing)
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ, (aiōnios )
(parallel missing)
ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್. (aiōn )
(parallel missing)
ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ? (aiōn )
(parallel missing)
ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. (aiōn )
(parallel missing)
ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ. (aiōn )
(parallel missing)
ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ; (aiōn )
(parallel missing)
ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ” (aiōn )
(parallel missing)
ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ. (aiōn )
(parallel missing)
ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ. (aiōn )
(parallel missing)
“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?” (Hadēs )
(parallel missing)
ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ. (aiōn )
(parallel missing)
ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. (aiōnios )
(parallel missing)
ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು. (aiōnios )
(parallel missing)
ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ. (aiōnios )
(parallel missing)
“ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.” (aiōn )
(parallel missing)
ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು. (aiōn )
(parallel missing)
ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. (aiōn )
(parallel missing)
ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್. (aiōn )
(parallel missing)
ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. (aiōnios )
(parallel missing)
ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. (aiōn )
(parallel missing)
ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. (aiōn )
(parallel missing)
ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ. (aiōn )
(parallel missing)
ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. (aiōn )
(parallel missing)
ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು. (aiōn )
(parallel missing)
ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್. (aiōn )
(parallel missing)
ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. (aiōn )
(parallel missing)
ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್. (aiōn )
(parallel missing)
ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ. (aiōn )
(parallel missing)
ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು. (aiōnios )
(parallel missing)
ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ, (aiōnios )
(parallel missing)
ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು. (aiōnios )
(parallel missing)
ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. (aiōn )
(parallel missing)
ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ. (aiōnios )
(parallel missing)
ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್. (aiōnios )
(parallel missing)
ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು. (aiōn )
(parallel missing)
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ, (aiōnios )
(parallel missing)
ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ. (aiōnios )
(parallel missing)
ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು. (aiōn )
(parallel missing)
ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್. (aiōn )
(parallel missing)
ಸುಳ್ಳಾಡದ ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ. (aiōnios )
(parallel missing)
ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು, (aiōn )
(parallel missing)
ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ ಸುರಿಸಿದನು. (aiōnios )
(parallel missing)
ಅವನು ಸ್ವಲ್ಪಕಾಲ ನಿನ್ನಿಂದ ದೂರವಾಗಿಹೋದದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ ಇರಬಹುದು; (aiōnios )
(parallel missing)
ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. (aiōn )
(parallel missing)
ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ. (aiōn )
(parallel missing)
ಆತನು ಇನ್ನೊಂದು ಕಡೆಯಲ್ಲಿ, “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ. (aiōn )
(parallel missing)
ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು. (aiōnios )
(parallel missing)
ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. (aiōnios )
(parallel missing)
ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, (aiōn )
(parallel missing)
ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ. (aiōn )
(parallel missing)
ಆತನ ವಿಷಯದಲ್ಲಿ “ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ. (aiōn )
(parallel missing)
ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ. (aiōn )
(parallel missing)
ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು. (aiōn )
(parallel missing)
ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ. (aiōn )
(parallel missing)
ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು. (aiōnios )
(parallel missing)
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ? (aiōnios )
(parallel missing)
ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು. (aiōnios )
(parallel missing)
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು. (aiōn )
(parallel missing)
ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ. (aiōn )
(parallel missing)
ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು. (aiōn )
(parallel missing)
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್. (aiōn , aiōnios )
(parallel missing)
ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ. (Geenna )
(parallel missing)
ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. (aiōn )
(parallel missing)
ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. (aiōn )
(parallel missing)
ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್. (aiōn )
(parallel missing)
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು. (aiōnios )
(parallel missing)
ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. (aiōn )
(parallel missing)
ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು. (aiōnios )
(parallel missing)
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. (Tartaroō )
(parallel missing)
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್. (aiōn )
(parallel missing)
ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ. (aiōnios )
(parallel missing)
ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು. (aiōn )
(parallel missing)
ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ. (aiōnios )
(parallel missing)
ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ. (aiōnios )
(parallel missing)
ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. (aiōnios )
(parallel missing)
ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ. (aiōnios )
(parallel missing)
ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ. (aiōnios )
(parallel missing)
ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, ಸತ್ಯವನ್ನು ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. (aiōn )
(parallel missing)
ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. (aïdios )
(parallel missing)
ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ. (aiōnios )
(parallel missing)
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ. (aiōn )
(parallel missing)
ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ. (aiōnios )
(parallel missing)
ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್. (aiōn )
(parallel missing)
ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್. (aiōn )
(parallel missing)
ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ. (aiōn , Hadēs )
(parallel missing)
ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, (aiōn )
(parallel missing)
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು. (aiōn )
(parallel missing)
ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು. (aiōn )
(parallel missing)
ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು. (Hadēs )
(parallel missing)
“ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. (aiōn )
(parallel missing)
ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು. (Abyssos )
(parallel missing)
ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು. (Abyssos )
(parallel missing)
ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು. (Abyssos )
(parallel missing)
ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ, (aiōn )
(parallel missing)
ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು. (Abyssos )
(parallel missing)
ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. (aiōn )
(parallel missing)
ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು. (aiōnios )
(parallel missing)
ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು. (aiōn )
(parallel missing)
ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು. (aiōn )
(parallel missing)
ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು. (Abyssos )
(parallel missing)
ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು. (aiōn )
(parallel missing)
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು. (Limnē Pyr )
(parallel missing)
ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. (Abyssos )
(parallel missing)
ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು. (Abyssos )
(parallel missing)
ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. (aiōn , Limnē Pyr )
(parallel missing)
ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. (Hadēs )
(parallel missing)
ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. (Hadēs , Limnē Pyr )
(parallel missing)
ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. (Limnē Pyr )
(parallel missing)
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು. (Limnē Pyr )
(parallel missing)
ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು. (aiōn )
(parallel missing)
ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ. ()