< ಅರಣ್ಯಕಾಂಡ 10 >
1 ೧ ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,
১সদাপ্রভু মোশিকে বললেন,
2 ೨ “ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.
২“তুমি দুইটি রূপার শিঙ্গা তৈরী কর; পেটান রূপা দিয়ে তা তৈরী কর; তুমি তা মণ্ডলীকে ডাকার জন্য ও শিবিরগুলির যাত্রার জন্য ব্যবহার করবে।
3 ೩ ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.
৩সেই দুটি শিঙ্গা বাজলে সমস্ত মণ্ডলী সমাগম তাঁবুর প্রবেশপথে তোমার কাছে জড়ো হবে।
4 ೪ ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.
৪কিন্তু একটি শিঙ্গা বাজালে শাসনকর্তারা, ইস্রায়েলের সহস্রপতিরা, তোমার কাছে জড়ো হবে।
5 ೫ ನೀನು ಆರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.
৫তোমরা যুদ্ধের শিঙ্গা বাজালে পূর্বদিকের শিবিরের লোকেরা শিবির উঠাবে।
6 ೬ ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.
৬তোমরা দ্বিতীয় বার যুদ্ধের শিঙ্গা বাজালে দক্ষিণ দিকের শিবিরের লোকেরা শিবির উঠাবে; তাদের যাবার জন্য যুদ্ধের শিঙ্গা বাজাতে হবে।
7 ೭ ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು.
৭কিন্তু সমাজের মিলিত হওয়ার জন্য শিঙ্গা বাজাবার দিনের তোমরা যুদ্ধের শিঙ্গা বাজিও না।
8 ೮ “ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.
৮হারোণের সন্তান যাজকেরা সেই শিঙ্গা বাজাবে, তোমাদের বংশ পরম্পরা অনুসারে চিরস্থায়ী নিয়মের জন্য তোমরা তা রাখবে।
9 ೯ ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.
৯যে দিনের তোমরা নিজেদের দেশে বিপক্ষের বিরুদ্ধে যুদ্ধ করতে যাবে যারা তোমাদের জন্য দুঃখদায়ক, তখন তুমি যুদ্ধের শিঙ্গার সতর্ক ধ্বনি বাজাবে; তাতে তোমাদের ঈশ্বর সদাপ্রভুর সামনে তোমাদেরকে স্মরণ করবেন ও তোমরা নিজেদের শত্রুদের থেকে রক্ষা পাবে।
10 ೧೦ ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”
১০তোমাদের আনন্দের দিনের, পর্বের দিনের ও মাসের শুরুতে হোমবলির ও তোমাদের মঙ্গলার্থক বলিদান উপলক্ষে তোমরা সেই তূরী বাজাবে; এটা আমাকে, তোমাদের ঈশ্বরকে স্মরণ করিয়ে দেবে। আমি সদাপ্রভু, তোমাদের ঈশ্বর।”
11 ೧೧ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.
১১দ্বিতীয় বছর দ্বিতীয় মাসের কুড়িতম দিনের সেই মেঘ সাক্ষ্যের সমাগম তাঁবুর উপর থেকে উঁচুতে উঠল।
12 ೧೨ ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
১২তাতে ইস্রায়েল সন্তানরা নিজেদের যাত্রার নিয়ম অনুসারে সীনয় মরুভূমি থেকে যাত্রা করল, পরে সেই মেঘ পারণ মরুপ্রান্তে অবস্থান করল।
13 ೧೩ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ.
১৩মোশির মাধ্যমে দেওয়া সদাপ্রভুর আদেশ অনুসারে তারা এই প্রথম বার যাত্রা করল।
14 ೧೪ ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.
১৪প্রথমে তাদের সৈন্যদের সঙ্গে যিহূদা সন্তানদের শিবিরের পতাকা চলল; অম্মীনাদবের ছেলে নহশোন তাদের সেনাপতি ছিলেন।
15 ೧೫ ಇಸ್ಸಾಕಾರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂವಾರನ ಮಗನಾದ ನೆತನೇಲನು.
১৫সূয়ারের ছেলে নথনেল ইষাখর সন্তানদের বংশের সেনাপতি ছিলেন।
16 ೧೬ ಜೆಬುಲೂನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಹೇಲೋನನ ಮಗನಾದ ಎಲೀಯಾಬನು.
১৬হেলোনের ছেলে ইলীয়াব সবূলূন সন্তানদের বংশের সেনাপতি ছিলেন।
17 ೧೭ ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.
১৭সমাগম তাঁবু তোলা হলে গের্শোনের সন্তানরা ও মরারির সন্তানরা সেই সমাগম তাঁবু বহন করার জন্য এগিয়ে গেল।
18 ೧೮ ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.
১৮তারপরে নিজের সৈন্যদের সঙ্গে রূবেণের শিবিরের পতাকা চলল; শদেয়ূরের ছেলে ইলীষূর তাদের সেনাপতি ছিলেন।
19 ೧೯ ಸಿಮೆಯೋನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂರೀಷದ್ದೈಯ ಮಗನಾದ ಶೆಲುಮೀಯೇಲನು.
১৯সূরীশদ্দয়ের ছেলে শলুমীয়েল শিমিয়োন সন্তানদের বংশের সেনাপতি ছিলেন।
20 ೨೦ ಗಾದ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ದೆಗೂವೇಲನ ಮಗನಾದ ಎಲ್ಯಾಸಾಫನು.
২০দ্যূয়েলের ছেলে ইলীয়াসফ গাদ সন্তানদের বংশের সেনাপতি ছিলেন।
21 ೨೧ ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
২১কহাতীয়েরা পবিত্র স্থানের উপকরণ বহন করে যাত্রা করল। অন্য লোকেরা কহাতীয়দের পরের শিবিরে পৌঁছানোর আগে সমাগম তাঁবু স্থাপন করল।
22 ೨೨ ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.
২২নিজের সৈন্যদের সঙ্গে ইফ্রয়িম সন্তানদের শিবিরের পতাকা চলল। অম্মীহূদের ছেলে ইলীশামা তাদের সেনাপতি ছিলেন।
23 ೨೩ ಮನಸ್ಸೆ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಪೆದಾಚೂರನ ಮಗನಾದ ಗಮ್ಲೀಯೇಲನು.
২৩পদাহসূরের ছেলে গমলীয়েল মনঃশি সন্তানদের বংশের সেনাপতি ছিলেন।
24 ೨೪ ಬೆನ್ಯಾಮೀನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಗಿದ್ಯೋನಿಯ ಮಗನಾದ ಅಬೀದಾನನು.
২৪গিদিয়োনির ছেলে অবীদান বিন্যামীন সন্তানদের বংশের সেনাপতি ছিলেন।
25 ೨೫ ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.
২৫সমস্ত শিবিরের পিছু পিছু নিজের সৈন্যের সঙ্গে দান সন্তানদের শিবিরের পতাকা চলল। অম্মীশদ্দয়ের ছেলে অহীয়েষর তাদের সেনাপতি ছিলেন।
26 ೨೬ ಆಶೇರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಒಕ್ರಾನನ ಮಗನಾದ ಪಗೀಯೇಲನು.
২৬অক্রণের ছেলে পগীয়েল আশের সন্তানদের বংশের সেনাপতি ছিলেন।
27 ೨೭ ನಫ್ತಾಲಿ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಏನಾನನ ಮಗನಾದ ಅಹೀರನು.
২৭ঐননের ছেলে অহীরঃ নপ্তালি সন্তানদের বংশের সেনাপতি ছিলেন।
28 ೨೮ ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.
২৮ইস্রায়েল সন্তানরা এই ভাবে যাত্রা করত।
29 ೨೯ ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.
২৯মোশি তাঁর শ্বশুর মিদিয়োনীয় রূয়েলের ছেলে হোববকে বললেন, “সদাপ্রভু আমাদেরকে যে স্থান দিতে প্রতিজ্ঞা করেছেন, আমরা সে স্থানে যাত্রা করছি, তুমিও আমাদের সঙ্গে এস, আমরা তোমার মঙ্গল করব, কারণ সদাপ্রভু ইস্রায়েলের মঙ্গল করার প্রতিজ্ঞা করেছেন।”
30 ೩೦ ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.
৩০তিনি তাকে বললেন, “আমি যাব না, আমি নিজের দেশে ও নিজের আত্মীয়দের কাছে যাব।”
31 ೩೧ ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.
৩১মোশি বললেন, “দয়া করে আমাদেরকে ত্যাগ কোরো না, কারণ মরুপ্রান্তের মধ্যে আমাদের শিবির স্থাপনের বিষয়ে তুমি জান, আর তুমি আমাদের পথপ্রদর্শক হবে।
32 ೩೨ ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.
৩২যদি তুমি আমাদের সঙ্গে যাও, সদাপ্রভু আমাদের প্রতি যে মঙ্গল করবেন, আমরা তোমার প্রতি তাই করব।”
33 ೩೩ ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.
৩৩তারা সদাপ্রভুর পর্বত থেকে তিন দিনের র পথ চলে গেল। তাদের বিশ্রাম স্থান খোঁজার জন্য সদাপ্রভুর নিয়ম সিন্দুক তিন দিনের র পথ তাদের থেকে এগিয়ে গেল।
34 ೩೪ ಅವರು ಪಾಳೆಯದಿಂದ ಹೊರಡುವಾಗ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಅವರ ಮೇಲೆ ಇರುತ್ತಿತ್ತು.
৩৪শিবির থেকে অন্য জায়গায় যাবার দিনের সদাপ্রভুর মেঘ দিনের রবেলায় তাদের উপরে থাকত।
35 ೩೫ ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.
৩৫আর সিন্দুকের এগিয়ে যাবার দিনের মোশি বলতেন, “হে সদাপ্রভু, ওঠ, তোমার শত্রুরা বিচ্ছিন্ন হোক, যারা তোমাকে ঘৃণা করে তারা তোমার সামনে থেকে পালিয়ে যাক।”
36 ೩೬ ಅದು ನಿಂತಾಗ ಅವನು, “ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು.
৩৬যখন নিয়মের সিন্দুক থামতো, মোশি বলতেন, “হে সদাপ্রভু, ইস্রায়েলের হাজার হাজারের কাছে ফিরে এস।”