< ಅರಣ್ಯಕಾಂಡ 11 >

1 ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
Mwet uh mutawauk in torkaskas nu sin LEUM GOD ke ma upa ma sikyak nu selos. Ke LEUM GOD El lohng torkaskas lalos, El kasrkusrakak ac supweya e nu fin mwet uh. E sac firir inmasrlolos ac esukak sie siska ke nien aktuktuk uh.
2 ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.
Mwet uh wowoyak nu sel Moses, na el pre nu sin LEUM GOD, ac e sac kunla.
3 ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು.
Ke ma inge acn sac pangpang Taberah, mweyen pa inge acn se e lun LEUM GOD firir inmasrlolos.
4 ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?
Oasr mwetsac wi mwet Israel in fahsr lalos. Oasr nikaru na yohk lalos ke ikwa, ac finne mwet Israel sifacna elos mutawauk in torkaskas ac fahk, “Ke nasr kutu ikwa ah!
5 ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.
Esamak ik pukanten kut tuh kang in acn Egypt, ma wangin molo. Esam pac cucumber, watermelon, leek, onion, ac garlic kut kang we ah.
6 ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು.
A inge kut ngulngul ke wangin na pwaye ma kut in kang sayen manna se inge len nukewa!” (
7 ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು.
Manna uh oana luman fita srisrik se, ac tuhna uh rangrang mulala.
8 ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.
Mwet uh ac illa ac sifani, na ilya, ku tuktukya, ac poeleak ac orek cake kac. Emah uh oana eman flao umla ke oil in olive.
9 ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.
Ke aunfong uh apunla nien aktuktuk uh ke fong, manna uh putati pac.)
10 ೧೦ ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.
Moses el lohngak torkaskas lun mwet uh ke elos tukeni mutun lohm nuknuk selos uh. El arulana toasrla mweyen LEUM GOD El kasrkusrak selos,
11 ೧೧ ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?
ac el fahk nu sin LEUM GOD, “Efu kom ku oreyu ouinge? Efu kom ku toasr sik? Efu kom ku filiya in nga pa fosrngakin mwet inge nukewa?
12 ೧೨ ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?
Mea, nga pa oralosla ku oswela mwet inge uh? Efu kom ku siyuk ngan orekma oana sie mwet to ac kafsalosyak oana tulik srakna titi, ac usalos nwe ke facl se ma kom tuh wulela kac nu sin mwet matu lalos meet ah?
13 ೧೩ ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?
Nga ac konauk oya ikwa ma ac fal nu sin mwet inge nukewa? Elos sasao na ac siyukyuk ikwa.
14 ೧೪ ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.
Nga tia ku in sifacna fosrngakin mwet inge nukewa; arulana upala nu sik!
15 ೧೫ ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.
Fin pa inge ma kom ac oru nu sik, tari uniyuwi tuh nga in tia pula mwe keok kom oru inge.”
16 ೧೬ ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
LEUM GOD El fahk nu sel Moses, “Eisani itngoul mwet kol matu ma ohi sin mwet uh, ac pwanulosme nu yuruk ke Lohm Nuknuk Mutal sik, ac fahk elos in wi kom tu ingo.
17 ೧೭ ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”
Nga fah oatume ac kaskas nu sum we, ac nga fah eis kutu ngun su nga filiya fom ac filiya faclos. Na elos ac fah ku in kasrekom lippise kutu fosrnga lom ke mwet inge, ac kom fah tia mukena in polong.
18 ೧೮ ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.
Inge fahk nu sin mwet uh, ‘Aknasnasye kowos sifacna nu lutu. Ac fah oasr ikwa nowos. LEUM GOD El lipsre sasao lowos ke kowos mu kowos kena in oasr ikwa nowos, ac ke kowos mu wo nu suwos ke kowos srak muta Egypt. Inge LEUM GOD El fah asot ikwa nowos, ac kowos fah mongo kac.
19 ೧೯ ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.
Ac fah tia nu ke len se na ku luo, ku len limekosr, ku singoul, ku longoul, a kowos fah kang
20 ೨೦ ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.
ke malem na fon se, nwe ke kowos srungala ngok fohlo, ac maskunak. Ma se inge ac sikyak mweyen kowos ngetla liki LEUM GOD su muta inmasrlowos, ac kowos torkaskas nu sel mu kowos in na tia tuku liki acn Egypt.’”
21 ೨೧ ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ.
Moses el fahk nu sin LEUM GOD, “Mwet onfoko tausin pa wiyu inge, ac kom fahk mu kom ac sang ikwa fal nu selos ke malem na fon se?
22 ೨೨ ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು.
Cow ac sheep nukewa fin anwuki, ya ac fal nu selos? Ya ik nukewa in meoa uh fin sruhu, ya ac ku in sang kitalos?”
23 ೨೩ ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.
LEUM GOD El topuk, “Ya oasr saflaiyen ku luk uh? Ac tia paht kom ac fah liye lah ma nga fahk uh ac sikyak, ku tia!”
24 ೨೪ ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.
Ke ma inge Moses el illa ac fahk nu sin mwet uh ma LEUM GOD El fahk. El eisani itngoul sin mwet kol ac oakelosi apunla Lohm Nuknuk Mutal uh.
25 ೨೫ ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.
Na LEUM GOD El oatui in pukunyeng uh ac kaskas nu sel. El eisla kutu sin ngun ma El tuh filiya facl Moses, ac sang nu fin mwet kol itngoul uh. Ke pacl se ngun inge oan faclos, elos mutawauk in sasa oana mwet palu uh, tusruktu ke kitin pacl na.
26 ೨೬ ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.
Eldad ac Medad, luo sin mwet kol itngoul, eltal mutana in nien aktuktuk uh ac tia wi som nu ke Lohm Nuknuk Mutal. Na ngun sac tuku nu faclos in nien aktuktuk, ac elos wi pac sasa oana mwet palu.
27 ೨೭ ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು.
Mwet fusr se kasrusr som fahk nu sel Moses ma Eldad ac Medad oru uh.
28 ೨೮ ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.
Na Joshua wen natul Nun, su nuna mwet kasru nu sel Moses oe ke el fusr ah me, el fahk nu sel Moses, “Leum luk, sap eltal in tui!”
29 ೨೯ ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.
Na Moses el topuk, “Ya kom nunku mu ku in oasr ma ac sikyak nu sik ke ma eltal oru uh? Nga kena LEUM GOD Elan sang ngun lal nu sin mwet lal nukewa, ac oru elos nukewa in sasa oana mwet palu!”
30 ೩೦ ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
Ouinge Moses ac mwet kol itngoul lun Israel elos folokla nu in nien aktuktuk uh.
31 ೩೧ ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.
Tia paht na LEUM GOD El oru sie eng in tuhyak ac use won quail meoa me. Elos sohk fit tolu fulata fin fohk uh yak, ac putati fin nien aktuktuk uh, oayapa rauneak mael nu ke mael apunla.
32 ೩೨ ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
Ke len sac nufon, fong fon sac, ac len se toko ah nufon, mwet uh kafofona ke sruh quail. Wangin mwet telani supus liki fotoh lumngaul, na elos oralik yen nukewa ke nien aktuktuk uh in oayuk ke faht.
33 ೩೩ ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.
Ke srak yolyak ikwa nalos, LEUM GOD El kasrkusrakak sin mwet uh, ac oru tuh sie mas upa in sikyak inmasrlolos.
34 ೩೪ ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು.
Elos pikinya mwet oasroasr in mongo ikwa we, na elos pangon acn sac Kibroth Hataavah, oana fahk mu “Kulyuk Lun Mwet Oasroasr In Mongo Ikwa.”
35 ೩೫ ತರುವಾಯ ಜನರು ಕಿಬ್ರೋತ್ ಹತಾವದಿಂದ ಪ್ರಯಾಣಮಾಡಿ ಹಚೇರೋತಿಗೆ ಬಂದು ಅಲ್ಲಿ ಇಳಿದುಕೊಂಡರು.
Mwet uh mukuiyak liki acn sac nu Hazeroth, ac tulokunak nien aktuktuk selos we.

< ಅರಣ್ಯಕಾಂಡ 11 >