< ಅರಣ್ಯಕಾಂಡ 11 >
1 ೧ ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
Ko se je ljudstvo pritoževalo, je to razžalilo Gospoda, in Gospod je to slišal in njegova jeza je bila vžgana in med njimi je zagorel Gospodov ogenj in použil tiste, ki so bili na najbolj oddaljenih delih tabora.
2 ೨ ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.
Ljudstvo je klicalo k Mojzesu in ko je Mojzes molil h Gospodu je bil ogenj pogašen.
3 ೩ ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು.
Ime kraja je imenoval Tabêra, ker je med njimi gorel Gospodov ogenj.
4 ೪ ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?
Mešana množica, ki je bila med njimi, je čutila poželenje in tudi Izraelovi otroci so ponovno jokali ter rekli: »Kdo nam bo dal za jesti meso?«
5 ೫ ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.
Spominjamo se rib, ki smo jih prosto jedli v Egiptu, kumaric, melon, pora, čebule in česna.
6 ೬ ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು.
Toda naša duša je sedaj izsušena. Tukaj, pred našimi očmi, sploh ni ničesar poleg mane.
7 ೭ ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು.
Mana je bila kakor koriandrovo seme in njena barva kakor barva bdelija.
8 ೮ ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.
Ljudstvo je šlo okoli in to nabiralo in mlelo v mlinih ali tolklo v možnarju in jo peklo v ponvah in iz nje delalo kolače in njen okus je bil kakor okus svežega olja.
9 ೯ ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.
Ko je ponoči na tabor padla rosa, je nanj padla mana.
10 ೧೦ ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.
Potem je Mojzes slišal ljudstvo jokati po svojih družinah, vsakega moža pri vratih svojega šotora. Gospodova jeza je bila silno vžgana; tudi Mojzes je bil razžaljen.
11 ೧೧ ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?
Mojzes je rekel Gospodu: »Zakaj si prizadel svojega služabnika? In zakaj nisem našel naklonjenosti v tvojem pogledu, da name polagaš breme vsega tega ljudstva?
12 ೧೨ ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?
Ali sem jaz spočel vse to ljudstvo? Mar sem jih rodil, da bi mi rekel: ›Nosi jih v svojem naročju, kakor skrbeč oče nosi doječega otroka, v deželo, ki si jo prisegel njihovim očetom?‹
13 ೧೩ ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?
Od kod naj bi imel meso, da ga dam vsemu temu ljudstvu? Kajti jokajo k meni, rekoč: ›Daj nam meso, da bomo lahko jedli.‹
14 ೧೪ ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.
Vsega tega ljudstva nisem zmožen nositi sam, ker je to zame pretežko.
15 ೧೫ ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.
Če tako postopaš z menoj, me ubij, prosim te, brez razmisleka, če sem našel naklonjenost v tvojih očeh in naj ne vidim svoje bednosti.«
16 ೧೬ ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
Gospod je rekel Mojzesu: »K meni zberi sedemdeset mož izmed Izraelovih starešin, ki jih poznaš, da so starešine ljudstva in častniki nad njimi; in privedi jih k šotorskemu svetišču skupnosti, da bodo tam lahko stali s teboj.
17 ೧೭ ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”
Jaz pa bom prišel dol in tam govoril s teboj. Vzel bom od duha, ki je nad teboj in položil ga bom nanje in s teboj bodo nosili breme ljudstva, da ga ne boš nosil sam.
18 ೧೮ ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.
Ljudstvu pa reci: ›Posvetite se za jutri in jedli boste meso, kajti jokali ste v Gospodova ušesa, rekoč: ›Kdo nam bo dal za jesti meso? Kajti z nami je bilo dobro v Egiptu, ‹ zato vam bo Gospod dal meso in vi boste jedli.
19 ೧೯ ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.
Ne boste jedli en dan, niti dva dni, niti pet dni, niti deset dni, niti dvajset dni,
20 ೨೦ ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.
temveč cel mesec, dokler to ne pride iz vaših nosnic in vam to postane gnusno, zato ker ste prezirali Gospoda, ki je med vami in ste jokali pred njim, rekoč: ›Zakaj smo prišli iz Egipta?‹«
21 ೨೧ ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ.
Mojzes je rekel: »Ljudstva, med katerim sem, je šeststo tisoč pešcev, ti pa si rekel: ›Jaz jim bom dal mesa, da bodo lahko jedli cel mesec.‹
22 ೨೨ ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು.
Mar bodo tropi in črede umorjeni zaradi njih, da jim zadostijo? Mar se bodo vse morske ribe zanje zbrale skupaj, da jim zadostijo?«
23 ೨೩ ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.
Gospod je rekel Mojzesu: »Ali je Gospodova roka postala prekratka? Sedaj boš videl, če se ti bo moja beseda zgodila ali ne.«
24 ೨೪ ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.
Mojzes je odšel ven in ljudstvu povedal Gospodove besede in zbral sedemdeset mož izmed starešin ljudstva in jih postavil naokoli šotorskega svetišča.
25 ೨೫ ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.
Gospod je prišel dol v oblaku in mu spregovoril in vzel od duha, ki je bil nad njim in ga dal sedemdesetim starešinam. Pripetilo se je, ko je nad njimi počival duh, da so prerokovali in niso prenehali.
26 ೨೬ ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.
Toda tam v taboru sta ostala dva izmed mož, ime enega je bilo Eldád in ime drugega Medád in duh je počival nad njima. Bila sta izmed tistih, ki so bili zapisani, toda nista odšla k šotorskemu svetišču, in prerokovala sta v taboru.
27 ೨೭ ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು.
Tam je pritekel mladenič in povedal Mojzesu ter rekel: »Eldád in Medád prerokujeta v taboru.«
28 ೨೮ ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.
Nunov sin Józue, Mojzesov služabnik, eden izmed njegovih mladeničev, je odgovoril in rekel: »Moj gospod Mojzes, prepovej jima.«
29 ೨೯ ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.
Mojzes mu je rekel: »Mar si zaradi mene ljubosumen? Da bi Bog dal, da bi bilo vse Gospodovo ljudstvo preroki in da bi Gospod nanje položil svojega duha!«
30 ೩೦ ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
Mojzes se je povzpel v tabor, on in starešine Izraela.
31 ೩೧ ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.
Od Gospoda je izšel veter in od morja prinesel prepelice in jih pustil pasti pri taboru, kakor bi bilo dan potovanja na tej strani in kakor bi bilo dan potovanja na oni strani, naokoli tabora in kakor bi jih bilo dva komolca visoko na obličju zemlje.
32 ೩೨ ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
Ljudstvo je stalo pokonci ves ta dan in vso to noč in ves naslednji dan in zbiralo prepelice. Kdor je zbral najmanj je zbral deset tovorov. Razporedili so si jih povsod naokoli tabora.
33 ೩೩ ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.
Medtem ko je bilo meso še vedno med njihovimi zobmi, preden je bilo prežvečeno, je bil Gospodov bes vžgan zoper ljudstvo in Gospod je ljudstvo udaril z zelo veliko nadlogo.
34 ೩೪ ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು.
Ime tega kraja je imenoval Kibrot-Hattaava, ker so tam pokopali ljudstvo, ki je poželelo.
35 ೩೫ ತರುವಾಯ ಜನರು ಕಿಬ್ರೋತ್ ಹತಾವದಿಂದ ಪ್ರಯಾಣಮಾಡಿ ಹಚೇರೋತಿಗೆ ಬಂದು ಅಲ್ಲಿ ಇಳಿದುಕೊಂಡರು.
In ljudstvo je odpotovalo od Kibrot-Hattaave do Haceróta in ostalo pri Hacerótu.