< ಅರಣ್ಯಕಾಂಡ 12 >

1 ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಆ ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು.
וַתְּדַבֵּ֨ר מִרְיָ֤ם וְאַהֲרֹן֙ בְּמֹשֶׁ֔ה עַל־אֹדֹ֛ות הָאִשָּׁ֥ה הַכֻּשִׁ֖ית אֲשֶׁ֣ר לָקָ֑ח כִּֽי־אִשָּׁ֥ה כֻשִׁ֖ית לָקָֽח׃
2 ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು.
וַיֹּאמְר֗וּ הֲרַ֤ק אַךְ־בְּמֹשֶׁה֙ דִּבֶּ֣ר יְהוָ֔ה הֲלֹ֖א גַּם־בָּ֣נוּ דִבֵּ֑ר וַיִּשְׁמַ֖ע יְהוָֽה׃
3 ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.
וְהָאִ֥ישׁ מֹשֶׁ֖ה עָנָו (עָנָ֣יו) מְאֹ֑ד מִכֹּל֙ הָֽאָדָ֔ם אֲשֶׁ֖ר עַל־פְּנֵ֥י הָאֲדָמָֽה׃ ס
4 ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, “ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು” ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು.
וַיֹּ֨אמֶר יְהוָ֜ה פִּתְאֹ֗ם אֶל־מֹשֶׁ֤ה וְאֶֽל־אַהֲרֹן֙ וְאֶל־מִרְיָ֔ם צְא֥וּ שְׁלָשְׁתְּכֶ֖ם אֶל־אֹ֣הֶל מֹועֵ֑ד וַיֵּצְא֖וּ שְׁלָשְׁתָּֽם׃
5 ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.
וַיֵּ֤רֶד יְהוָה֙ בְּעַמּ֣וּד עָנָ֔ן וַֽיַּעֲמֹ֖ד פֶּ֣תַח הָאֹ֑הֶל וַיִּקְרָא֙ אַהֲרֹ֣ן וּמִרְיָ֔ם וַיֵּצְא֖וּ שְׁנֵיהֶֽם׃
6 ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.
וַיֹּ֖אמֶר שִׁמְעוּ־נָ֣א דְבָרָ֑י אִם־יִֽהְיֶה֙ נְבִ֣יאֲכֶ֔ם יְהוָ֗ה בַּמַּרְאָה֙ אֵלָ֣יו אֶתְוַדָּ֔ע בַּחֲלֹ֖ום אֲדַבֶּר־בֹּֽו׃
7 ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.
לֹא־כֵ֖ן עַבְדִּ֣י מֹשֶׁ֑ה בְּכָל־בֵּיתִ֖י נֶאֱמָ֥ן הֽוּא׃
8 ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.
פֶּ֣ה אֶל־פֶּ֞ה אֲדַבֶּר־בֹּ֗ו וּמַרְאֶה֙ וְלֹ֣א בְחִידֹ֔ת וּתְמֻנַ֥ת יְהוָ֖ה יַבִּ֑יט וּמַדּ֙וּעַ֙ לֹ֣א יְרֵאתֶ֔ם לְדַבֵּ֖ר בְּעַבְדִּ֥י בְמֹשֶֽׁה׃
9 ನಂತರ ಯೆಹೋವನು ಅವರ ಮೇಲೆ ಕೋಪಗೊಂಡು ಹೊರಟುಹೋದನು.
וַיִּֽחַר אַ֧ף יְהוָ֛ה בָּ֖ם וַיֵּלַֽךְ׃
10 ೧೦ ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.
וְהֶעָנָ֗ן סָ֚ר מֵעַ֣ל הָאֹ֔הֶל וְהִנֵּ֥ה מִרְיָ֖ם מְצֹרַ֣עַת כַּשָּׁ֑לֶג וַיִּ֧פֶן אַהֲרֹ֛ן אֶל־מִרְיָ֖ם וְהִנֵּ֥ה מְצֹרָֽעַת׃
11 ೧೧ ಆಗ ಆರೋನನು ಮೋಶೆಗೆ, “ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
וַיֹּ֥אמֶר אַהֲרֹ֖ן אֶל־מֹשֶׁ֑ה בִּ֣י אֲדֹנִ֔י אַל־נָ֨א תָשֵׁ֤ת עָלֵ֙ינוּ֙ חַטָּ֔את אֲשֶׁ֥ר נֹואַ֖לְנוּ וַאֲשֶׁ֥ר חָטָֽאנוּ׃
12 ೧೨ ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನಂತೆ ಈಕೆ ಆಗಬಾರದು” ಎಂದು ಬೇಡಿದನು.
אַל־נָ֥א תְהִ֖י כַּמֵּ֑ת אֲשֶׁ֤ר בְּצֵאתֹו֙ מֵרֶ֣חֶם אִמֹּ֔ו וַיֵּאָכֵ֖ל חֲצִ֥י בְשָׂרֹֽו׃
13 ೧೩ ಆಗ ಮೋಶೆ ಯೆಹೋವನಿಗೆ, “ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ” ಎಂದು ಮೊರೆಯಿಟ್ಟನು.
וַיִּצְעַ֣ק מֹשֶׁ֔ה אֶל־יְהוָ֖ה לֵאמֹ֑ר אֵ֕ל נָ֛א רְפָ֥א נָ֖א לָֽהּ׃ פ
14 ೧೪ ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.
וַיֹּ֨אמֶר יְהוָ֜ה אֶל־מֹשֶׁ֗ה וְאָבִ֙יהָ֙ יָרֹ֤ק יָרַק֙ בְּפָנֶ֔יהָ הֲלֹ֥א תִכָּלֵ֖ם שִׁבְעַ֣ת יָמִ֑ים תִּסָּגֵ֞ר שִׁבְעַ֤ת יָמִים֙ מִח֣וּץ לַֽמַּחֲנֶ֔ה וְאַחַ֖ר תֵּאָסֵֽף׃
15 ೧೫ ಹಾಗೆಯೇ ಮಿರ್ಯಾಮಳು ಏಳು ದಿನಗಳವರೆಗೆ ಪಾಳೆಯದ ಹೊರಗೆ ಇರಬೇಕಾಯಿತು. ಆಕೆಯನ್ನು ತಿರುಗಿ ಸೇರಿಸಿಕೊಳ್ಳುವ ವರೆಗೆ ಇಸ್ರಾಯೇಲರು ಪ್ರಯಾಣಮಾಡಲಿಲ್ಲ.
וַתִּסָּגֵ֥ר מִרְיָ֛ם מִח֥וּץ לַֽמַּחֲנֶ֖ה שִׁבְעַ֣ת יָמִ֑ים וְהָעָם֙ לֹ֣א נָסַ֔ע עַד־הֵאָסֵ֖ף מִרְיָֽם׃
16 ೧೬ ತರುವಾಯ ಅವರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳಿದುಕೊಂಡರು.
וְאַחַ֛ר נָסְע֥וּ הָעָ֖ם מֵחֲצֵרֹ֑ות וַֽיַּחֲנ֖וּ בְּמִדְבַּ֥ר פָּארָֽן׃ פ

< ಅರಣ್ಯಕಾಂಡ 12 >