< ಅರಣ್ಯಕಾಂಡ 12 >
1 ೧ ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಆ ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು.
और मूसा ने एक कूशी 'औरत से ब्याह कर लिया। तब उस कूशी 'औरत की वजह से जिसे मूसा ने ब्याह लिया था, मरियम और हारून उसकी बदगोई करने लगे।
2 ೨ ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು.
वह कहने लगे, “क्या ख़ुदावन्द ने सिर्फ़ मूसा ही से बातें की हैं? क्या उसने हम से भी बातें नहीं कीं?” और ख़ुदावन्द ने यह सुना।
3 ೩ ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.
और मूसा तो इस ज़मीन के सब आदमियों से ज़्यादा हलीम था।
4 ೪ ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, “ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು” ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು.
तब ख़ुदावन्द ने अचानक मूसा और हारून और मरियम से कहा, “तुम तीनों निकल कर ख़ेमा — ए — इजितमा'अ के पास हाज़िर हो।” तब वह तीनों वहाँ आए।
5 ೫ ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.
और ख़ुदावन्द बादल के सुतून में होकर उतरा और ख़ेमे के दरवाज़े पर खड़े होकर हारून और मरियम को बुलाया। वह दोनों पास गए।
6 ೬ ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.
तब उसने कहा, “मेरी बातें सुनो, अगर तुम में कोई नबी हो, तो मैं जो ख़ुदावन्द हूँ उसे रोया में दिखाई दूँगा और ख़्वाब में उससे बातें करूँगा।
7 ೭ ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.
पर मेरा ख़ादिम मूसा ऐसा नहीं है, वह मेरे सारे ख़ान्दान में अमानत दार है;
8 ೮ ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.
मैं उससे राज़ों में नहीं बल्कि आमने — सामने और सरीह तौर पर बातें करता हूँ, और उसे ख़ुदावन्द का दीदार भी नसीब होता है। इसलिए तुम को मेरे ख़ादिम मूसा की बदगोई करते ख़ौफ़ क्यूँ न आया?”
9 ೯ ನಂತರ ಯೆಹೋವನು ಅವರ ಮೇಲೆ ಕೋಪಗೊಂಡು ಹೊರಟುಹೋದನು.
और ख़ुदावन्द का ग़ज़ब उन पर भड़का और वह चला गया।
10 ೧೦ ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.
और बादल ख़ेमे के ऊपर से हट गया, और मरियम कोढ़ से बर्फ़ की तरह सफ़ेद हो गई; और हारून ने जो मरियम की तरफ़ नज़र की तो देखा कि वह कोढ़ी हो गई है।
11 ೧೧ ಆಗ ಆರೋನನು ಮೋಶೆಗೆ, “ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
तब हारून मूसा से कहने लगा, “हाय मेरे मालिक, इस गुनाह को हमारे सिर न लगा, क्यूँकि हम से नादानी हुई और हम ने ख़ता की।
12 ೧೨ ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನಂತೆ ಈಕೆ ಆಗಬಾರದು” ಎಂದು ಬೇಡಿದನು.
और मरियम की उस मरे हुए की तरह न रहने दे, जिसका जिस्म उसकी पैदाइश ही के वक़्त आधा गला हुआ होता है।”
13 ೧೩ ಆಗ ಮೋಶೆ ಯೆಹೋವನಿಗೆ, “ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ” ಎಂದು ಮೊರೆಯಿಟ್ಟನು.
तब मूसा ख़ुदावन्द से फ़रियाद करने लगा, “ऐ ख़ुदा, मैं तेरी मिन्नत करता हूँ, उसे शिफ़ा दे।”
14 ೧೪ ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.
और ख़ुदावन्द ने मूसा से कहा, “अगर उसके बाप ने उसके मुँह पर सिर्फ़ थूका ही होता, तो क्या सात दिन तक वह शर्मिन्दा न रहती? इसलिए वह सात दिन तक लश्करगाह के बाहर बन्द रहे, इसके बाद वह फिर अन्दर आने पाए।”
15 ೧೫ ಹಾಗೆಯೇ ಮಿರ್ಯಾಮಳು ಏಳು ದಿನಗಳವರೆಗೆ ಪಾಳೆಯದ ಹೊರಗೆ ಇರಬೇಕಾಯಿತು. ಆಕೆಯನ್ನು ತಿರುಗಿ ಸೇರಿಸಿಕೊಳ್ಳುವ ವರೆಗೆ ಇಸ್ರಾಯೇಲರು ಪ್ರಯಾಣಮಾಡಲಿಲ್ಲ.
चुनाँचे मरियम सात दिन तक लश्करगाह के बाहर बन्द रही, और लोगों ने जब तक वह अन्दर आने न पाई रवाना न हुए।
16 ೧೬ ತರುವಾಯ ಅವರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳಿದುಕೊಂಡರು.
इसके बाद वह लोग हसेरात से रवाना हुए और फ़ारान के जंगल में पहुँच कर उन्होंने ख़ेमे लगाए।