< ಅರಣ್ಯಕಾಂಡ 16 >
1 ೧ ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ಮಗನೂ ಆದ ಕೋರಹನು ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ, ಕೆಲವು ಜನರನ್ನು ಕೂಡಿಸಿದರು.
Now Korah, the son of Izhar, the son of Kohath, the son of Levi, with Dathan and Abiram, the sons of Eliab, and On, the son of Peleth, sons of Reuben, took some men.
2 ೨ ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ವಿರುದ್ಧವಾಗಿ ಪ್ರತಿಭಟಿಸಿ ತಿರುಗಿಬಿದ್ದರು.
They rose up before Moses, with some of the children of Israel, two hundred fifty princes of the congregation, called to the assembly, men of renown.
3 ೩ ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.
They assembled themselves together against Moses and against Aaron, and said to them, “You take too much on yourself, since all the congregation are holy, everyone of them, and Yahweh is among them! Why do you lift yourselves up above Yahweh’s assembly?”
4 ೪ ಮೋಶೆ ಆ ಮಾತನ್ನು ಕೇಳಿ ಬೋರಲುಬಿದ್ದನು.
When Moses heard it, he fell on his face.
5 ೫ ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.
He said to Korah and to all his company, “In the morning, Yahweh will show who are his, and who is holy, and will cause him to come near to him. Even him whom he shall choose, he will cause to come near to him.
6 ೬ ನೀವು ಇದನ್ನು ಮಾಡಿರಿ, ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು,
Do this: have Korah and all his company take censers,
7 ೭ ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು.
put fire in them, and put incense on them before Yahweh tomorrow. It shall be that the man whom Yahweh chooses, he shall be holy. You have gone too far, you sons of Levi!”
8 ೮ ಪುನಃ ಮೋಶೆ ಕೋರಹನಿಗೆ, “ಲೇವಿಯ ಸಂತಾನದವರೇ, ಈಗ ಕೇಳಿರಿ,
Moses said to Korah, “Hear now, you sons of Levi!
9 ೯ ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?
Is it a small thing to you that the God of Israel has separated you from the congregation of Israel, to bring you near to himself, to do the service of Yahweh’s tabernacle, and to stand before the congregation to minister to them;
10 ೧೦ ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?
and that he has brought you near, and all your brothers the sons of Levi with you? Do you seek the priesthood also?
11 ೧೧ ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.
Therefore you and all your company have gathered together against Yahweh! What is Aaron that you complain against him?”
12 ೧೨ ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ.
Moses sent to call Dathan and Abiram, the sons of Eliab; and they said, “We won’t come up!
13 ೧೩ ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?
Is it a small thing that you have brought us up out of a land flowing with milk and honey, to kill us in the wilderness, but you must also make yourself a prince over us?
14 ೧೪ ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.
Moreover you haven’t brought us into a land flowing with milk and honey, nor given us inheritance of fields and vineyards. Will you put out the eyes of these men? We won’t come up.”
15 ೧೫ ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.
Moses was very angry, and said to Yahweh, “Don’t respect their offering. I have not taken one donkey from them, neither have I hurt one of them.”
16 ೧೬ ಮೋಶೆ ಕೋರಹನಿಗೆ, “ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.
Moses said to Korah, “You and all your company go before Yahweh, you, and they, and Aaron, tomorrow.
17 ೧೭ ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.
Each man take his censer and put incense on it, and each man bring before Yahweh his censer, two hundred fifty censers; you also, and Aaron, each with his censer.”
18 ೧೮ ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.
They each took his censer, and put fire in it, and laid incense on it, and stood at the door of the Tent of Meeting with Moses and Aaron.
19 ೧೯ ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.
Korah assembled all the congregation opposite them to the door of the Tent of Meeting. Yahweh’s glory appeared to all the congregation.
20 ೨೦ ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
Yahweh spoke to Moses and to Aaron, saying,
21 ೨೧ “ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.
“Separate yourselves from among this congregation, that I may consume them in a moment!”
22 ೨೨ ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
They fell on their faces, and said, “God, the God of the spirits of all flesh, shall one man sin, and will you be angry with all the congregation?”
23 ೨೩ ಆಗ ಯೆಹೋವನು ಮೋಶೆಗೆ ಉತ್ತರವಾಗಿ,
Yahweh spoke to Moses, saying,
24 ೨೪ “ಇಸ್ರಾಯೇಲರ ಸಮೂಹದವರಿಗೆ, ‘ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು’ ಎಂದು ಅವರಿಗೆ ಆಜ್ಞಾಪಿಸು” ಎಂದು ಹೇಳಿದನು.
“Speak to the congregation, saying, ‘Get away from around the tent of Korah, Dathan, and Abiram!’”
25 ೨೫ ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.
Moses rose up and went to Dathan and Abiram; and the elders of Israel followed him.
26 ೨೬ ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.
He spoke to the congregation, saying, “Depart, please, from the tents of these wicked men, and touch nothing of theirs, lest you be consumed in all their sins!”
27 ೨೭ ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.
So they went away from the tent of Korah, Dathan, and Abiram, on every side. Dathan and Abiram came out, and stood at the door of their tents with their wives, their sons, and their little ones.
28 ೨೮ ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.
Moses said, “Hereby you shall know that Yahweh has sent me to do all these works; for they are not from my own mind.
29 ೨೯ ಹೇಗೆಂದರೆ, ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.
If these men die the common death of all men, or if they experience what all men experience, then Yahweh hasn’t sent me.
30 ೩೦ ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು. (Sheol )
But if Yahweh makes a new thing, and the ground opens its mouth, and swallows them up with all that belong to them, and they go down alive into Sheol, then you shall understand that these men have despised Yahweh.” (Sheol )
31 ೩೧ ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು.
As he finished speaking all these words, the ground that was under them split apart.
32 ೩೨ ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.
The earth opened its mouth and swallowed them up with their households, all of Korah’s men, and all their goods.
33 ೩೩ ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು. (Sheol )
So they, and all that belonged to them went down alive into Sheol. The earth closed on them, and they perished from among the assembly. (Sheol )
34 ೩೪ ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು.
All Israel that were around them fled at their cry; for they said, “Lest the earth swallow us up!”
35 ೩೫ ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.
Fire came out from Yahweh, and devoured the two hundred fifty men who offered the incense.
36 ೩೬ ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ
Yahweh spoke to Moses, saying,
37 ೩೭ “ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು.
“Speak to Eleazar the son of Aaron the priest, that he take up the censers out of the burning, and scatter the fire away from the camp; for they are holy,
38 ೩೮ ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.
even the censers of those who sinned against their own lives. Let them be beaten into plates for a covering of the altar, for they offered them before Yahweh. Therefore they are holy. They shall be a sign to the children of Israel.”
39 ೩೯ ಆಗ ಯಾಜಕನಾದ ಎಲ್ಲಾಜಾರನು ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ದಹಿಸಿಹೋದವರು ಅರ್ಪಿಸಿದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಮಾಡಿಸಿ, ಯಜ್ಞವೇದಿಯನ್ನು ಮುಚ್ಚಿದನು.
Eleazar the priest took the bronze censers which those who were burned had offered; and they beat them out for a covering of the altar,
40 ೪೦ ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.
to be a memorial to the children of Israel, to the end that no stranger who isn’t of the offspring of Aaron, would come near to burn incense before Yahweh, that he not be as Korah and as his company; as Yahweh spoke to him by Moses.
41 ೪೧ ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.
But on the next day all the congregation of the children of Israel complained against Moses and against Aaron, saying, “You have killed Yahweh’s people!”
42 ೪೨ ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.
When the congregation was assembled against Moses and against Aaron, they looked toward the Tent of Meeting. Behold, the cloud covered it, and Yahweh’s glory appeared.
43 ೪೩ ಮೋಶೆ ಮತ್ತು ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.
Moses and Aaron came to the front of the Tent of Meeting.
44 ೪೪ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
Yahweh spoke to Moses, saying,
45 ೪೫ “ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.
“Get away from among this congregation, that I may consume them in a moment!” They fell on their faces.
46 ೪೬ ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.
Moses said to Aaron, “Take your censer, put fire from the altar in it, lay incense on it, carry it quickly to the congregation, and make atonement for them; for wrath has gone out from Yahweh! The plague has begun.”
47 ೪೭ ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
Aaron did as Moses said, and ran into the middle of the assembly. The plague had already begun among the people. He put on the incense, and made atonement for the people.
48 ೪೮ ಅವನು ಸತ್ತವರಿಗೂ, ಬದುಕುವವರಿಗೂ ಮಧ್ಯದಲ್ಲಿ ನಿಂತುಕೊಂಡುದರಿಂದ ಆ ವ್ಯಾಧಿಯು ಶಮನವಾಯಿತು.
He stood between the dead and the living; and the plague was stayed.
49 ೪೯ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ.
Now those who died by the plague were fourteen thousand seven hundred, in addition to those who died about the matter of Korah.
50 ೫೦ ಆ ವ್ಯಾಧಿ ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಿಲಿಗೆ ಮೋಶೆಯ ಬಳಿಗೆ ಹಿಂತಿರುಗಿ ಬಂದನು.
Aaron returned to Moses to the door of the Tent of Meeting, and the plague was stopped.