< ಅರಣ್ಯಕಾಂಡ 17 >
1 ೧ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
Тогава Господ говори на Моисея, казвайки:
2 ೨ “ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕುಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.
Говори на израилтяните, и вземи от тях дванадесет жезли, по един жезъл за всеки дом, от всичките им първенци, според домовете на бащите им, и напиши името на всекиго на жезъла му.
3 ೩ ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
На Левиевия жезъл напиши името на Аарона; понеже ще има по един жезъл за всеки началник на бащините им домове.
4 ೪ ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.
Положи ги в шатъра за срещане пред плочите на свидетелството, гдето Аз се срещам с вас.
5 ೫ ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’” ಎಂದನು.
И жезълът на човека, когото избера, ще процъфти. Така ще направя да престанат пред Мене роптанията на израилтяните, с които те роптаят против вас.
6 ೬ ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.
Моисей, прочее, каза на израилтяните; и всичките им първенци му дадоха дванадесет жезъла, всеки първенец по един жезъл, според бащините си домове; и Аароновият жезъл беше между жезлите им.
7 ೭ ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.
И Моисей положи жезлите пред Господа в шатъра за плочите на свидетелството.
8 ೮ ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು!
И на следния ден Моисей влезе в шатъра за плочите на свидетелството; и ето, Аароновият жезъл за Левиевия дом беше покарал и произрастил пъпки, цъфнал, и завързал зрели бадеми.
9 ೯ ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲರ ಬಳಿಗೆ ತಂದು ತೋರಿಸಿದನು. ಅವರು ನೋಡಿ ತಮ್ಮತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.
И Моисей изнесе всичките жезли от пред Господа при всичките израилтяни; и те, като ги прегледаха, взеха всеки жезъла си.
10 ೧೦ ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು.
Тогава Господ каза на Моисея: Върни Аароновия жезъл пред плочите на свидетелството, за да се пази за знак против бунтовническия род; и така да направиш да престанат роптанията им против Мене, та да не измрат.
11 ೧೧ ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.
И Моисей направи така: според както Господ му заповяда така направи.
12 ೧೨ ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.
Тогава израилтяните говориха на Моисея, казвайки: Ето, ние загиваме, погубени сме, всички сме погубени;
13 ೧೩ ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು.
всеки, който се приближава, който се приближи до Господната скиния, умира; ще измрем ли ние всички?