< ಅರಣ್ಯಕಾಂಡ 18 >
1 ೧ ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.
and to say LORD to(wards) Aaron you(m. s.) and son: child your and house: household father your with you to lift: guilt [obj] iniquity: crime [the] sanctuary and you(m. s.) and son: child your with you to lift: guilt [obj] iniquity: crime priesthood your
2 ೨ ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.
and also [obj] brother: male-relative your tribe Levi tribe father your to present: bring with you and to join upon you and to minister you and you(m. s.) and son: child your with you to/for face: before tent [the] testimony
3 ೩ ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.
and to keep: guard charge your and charge all [the] tent surely to(wards) article/utensil [the] holiness and to(wards) [the] altar not to present: come and not to die also they(masc.) also you(m. p.)
4 ೪ ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.
and to join upon you and to keep: guard [obj] charge tent meeting to/for all service: ministry [the] tent and be a stranger not to present: come to(wards) you
5 ೫ ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.
and to keep: guard [obj] charge [the] holiness and [obj] charge [the] altar and not to be still wrath upon son: descendant/people Israel
6 ೬ ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.
and I behold to take: take [obj] brother: male-relative your [the] Levi from midst son: descendant/people Israel to/for you gift to give: give to/for LORD to/for to serve: minister [obj] service: ministry tent meeting
7 ೭ ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.
and you(m. s.) and son: child your with you to keep: guard [obj] priesthood your to/for all word: thing [the] altar and to/for from house: inside to/for curtain and to serve: minister service: ministry gift to give: give [obj] priesthood your and [the] be a stranger [the] approaching to die
8 ೮ ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.
and to speak: speak LORD to(wards) Aaron and I behold to give: give to/for you [obj] charge contribution my to/for all holiness son: descendant/people Israel to/for you to give: give them to/for consecrated portion and to/for son: child your to/for statute: portion forever: enduring
9 ೯ ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.
this to be to/for you from holiness [the] holiness from [the] fire all offering their to/for all offering their and to/for all sin: sin offering their and to/for all guilt (offering) their which to return: pay to/for me holiness holiness to/for you he/she/it and to/for son: child your
10 ೧೦ ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು.
in/on/with holiness [the] holiness to eat him all male to eat [obj] him holiness to be to/for you
11 ೧೧ “ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.
and this to/for you contribution gift their to/for all wave offering son: descendant/people Israel to/for you to give: give them and to/for son: child your and to/for daughter your with you to/for statute: portion forever: enduring all pure in/on/with house: household your to eat [obj] him
12 ೧೨ ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.
all fat oil and all fat new wine and grain first: beginning their which to give: give to/for LORD to/for you to give: give them
13 ೧೩ ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.
firstfruit all which in/on/with land: country/planet their which to come (in): bring to/for LORD to/for you to be all pure in/on/with house: household your to eat him
14 ೧೪ ಕೇವಲ ಯೆಹೋವನಿಗೋಸ್ಕರ ಇರುವುದಕ್ಕೆ ಇಸ್ರಾಯೇಲರು ಹರಕೆಮಾಡಿ ಸಮರ್ಪಿಸುವುದೆಲ್ಲವೂ ನಿನಗೆ ಸೇರಬೇಕು.
all devoted thing in/on/with Israel to/for you to be
15 ೧೫ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.
all firstborn womb to/for all flesh which to present: bring to/for LORD in/on/with man and in/on/with animal to be to/for you surely to ransom to ransom [obj] firstborn [the] man and [obj] firstborn [the] animal [the] unclean to ransom
16 ೧೬ ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ಶೆಕೆಲ್ ಪ್ರಕಾರ ಐದು ಶೆಕೆಲ್ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.
and to ransom his from son: aged month to ransom in/on/with valuation your silver: price five shekel in/on/with shekel [the] holiness twenty gerah he/she/it
17 ೧೭ “ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.
surely firstborn cattle or firstborn sheep or firstborn goat not to ransom holiness they(masc.) [obj] blood their to scatter upon [the] altar and [obj] fat their to offer: burn food offering to/for aroma soothing to/for LORD
18 ೧೮ ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.
and flesh their to be to/for you like/as breast [the] wave offering and like/as leg [the] right to/for you to be
19 ೧೯ ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು.
all contribution [the] holiness which to exalt son: descendant/people Israel to/for LORD to give: give to/for you and to/for son: child your and to/for daughter your with you to/for statute: portion forever: enduring covenant salt forever: enduring he/she/it to/for face: before LORD to/for you and to/for seed: children your with you
20 ೨೦ ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ.
and to say LORD to(wards) Aaron in/on/with land: country/planet their not to inherit and portion not to be to/for you in/on/with midst their I portion your and inheritance your in/on/with midst son: descendant/people Israel
21 ೨೧ “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.
and to/for son: descendant/people Levi behold to give: give all tithe in/on/with Israel to/for inheritance for service: ministry their which they(masc.) to serve: minister [obj] service: ministry tent meeting
22 ೨೨ ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು.
and not to present: come still son: descendant/people Israel to(wards) tent meeting to/for to lift: guilt sin to/for to die
23 ೨೩ ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.
and to serve: minister [the] Levi he/she/it [obj] service: ministry tent meeting and they(masc.) to lift: guilt iniquity: crime their statute forever: enduring to/for generation your and in/on/with midst son: descendant/people Israel not to inherit inheritance
24 ೨೪ ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ ‘ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ’” ಎಂದು ಹೇಳಿದ ಮಾತಿಗೆ ಇದೇ ಕಾರಣ.
for [obj] tithe son: descendant/people Israel which to exalt to/for LORD contribution to give: give to/for Levi to/for inheritance upon so to say to/for them in/on/with midst son: descendant/people Israel not to inherit inheritance
25 ೨೫ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
and to speak: speak LORD to(wards) Moses to/for to say
26 ೨೬ “ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.
and to(wards) [the] Levi to speak: speak and to say to(wards) them for to take: take from with son: descendant/people Israel [obj] [the] tithe which to give: give to/for you from with them in/on/with inheritance your and to exalt from him contribution LORD tithe from [the] tithe
27 ೨೭ ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು.
and to devise: count to/for you contribution your like/as grain from [the] threshing floor and like/as fruit from [the] wine
28 ೨೮ ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.
so to exalt also you(m. p.) contribution LORD from all tithe your which to take: recieve from with son: descendant/people Israel and to give: give from him [obj] contribution LORD to/for Aaron [the] priest
29 ೨೯ ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು’
from all gift your to exalt [obj] all contribution LORD from all fat his [obj] sanctuary his from him
30 ೩೦ ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.
and to say to(wards) them in/on/with to exalt you [obj] fat his from him and to devise: count to/for Levi like/as produce threshing floor and like/as produce wine
31 ೩೧ ನೀವೂ, ನಿಮ್ಮ ಮನೆಯವರೂ ಅದನ್ನು ಎಲ್ಲಾ ಸ್ಥಳಗಳಲ್ಲಿ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ದೊರೆಯುವ ಪ್ರತಿಫಲ.
and to eat [obj] him in/on/with all place you(m. p.) and house: household your for wages he/she/it to/for you for service: ministry your in/on/with tent meeting
32 ೩೨ ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’” ಎಂದನು.
and not to lift: guilt upon him sin in/on/with to exalt you [obj] fat his from him and [obj] holiness son: descendant/people Israel not to profane/begin: profane and not to die