< ಅರಣ್ಯಕಾಂಡ 19 >
1 ೧ ಯೆಹೋವನು ಮೋಶೆ ಮತ್ತು ಆರೋನರಿಗೆ ಹೀಗೆ ಆಜ್ಞಾಪಿಸಿದನು,
Jehova Nyasaye nowacho ne Musa gi Harun niya,
2 ೨ “ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.
“Ma e dwaro mar chik ma Jehova Nyasaye osechiko: Nyis jo-Israel mondo okel nyaroya ma silwal maonge songa kata ma ok ongʼol kendo mapok otwe e jok.
3 ೩ ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊರಡಿಸಿಕೊಂಡು ಹೋಗಿ ತನ್ನ ಎದುರೇ ಒಬ್ಬನ ಕೈಯಿಂದ ವಧೆಮಾಡಿಸಬೇಕು.
Chiwe ne Eliazar jadolo; kendo nyaroyano nyaka gol oko mar kambi mi yangʼe ka oneno.
4 ೪ ತರುವಾಯ ಯಾಜಕನಾದ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.
Bangʼe Eliazar jadolo nyaka kaw rembe moko e lith lwete kendo okwoye nyadibiriyo kochiko nyim Hemb Romo.
5 ೫ ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.
E kinde ma pod ongʼicho nyaroyano nyaka wangʼ piende, ringe, rembe kod wen.
6 ೬ ಯಾಜಕನು ದೇವದಾರುಮರದ ಕಟ್ಟಿಗೆಯನ್ನೂ, ಹಿಸ್ಸೋಪ್ ಗಿಡದ ಬರಲನ್ನೂ, ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಆ ಆಕಳನ್ನು ಸುಡುವ ಬೆಂಕಿಯಲ್ಲಿ ಹಾಕಬೇಕು.
Jadolo nokaw yiende moko mag sida, owino gi usi marakwaro kendo owitgi kuom nyaroya ma wangʼno.
7 ೭ ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.
Bangʼ mano, jadolo nyaka luok lepe kendo olwokre gi pi. Bangʼe onyalo donjo e kambi, makmana ni obiro bedo mochido nyaka chop odhiambo.
8 ೮ ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.
Ngʼatno mowangʼo nyaroyano bende nyaka luok lepe, kendo olwokre, en bende nobed mochido nyaka chop odhiambo.
9 ೯ “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು.
“Ngʼat maler nochok buru mag nyaroyano kendo oketgi kar misango maler e oko mar kambi. Ginikan-gi gi dhout oganda mar jo-Israel mondo ti kodgi e pi pwodhruok; nikech en mar pwodho ji aa e richo.
10 ೧೦ ಆ ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ.
Ngʼatno mochoko buch nyaroyano nyaka luok lepe bende, to en bende nobed mochido nyaka chop odhiambo. Ma nobedi chik mosiko ne jo-Israel kaachiel gi jopinje mamoko modak kodgi.
11 ೧೧ “ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
“Ngʼato angʼata momulo ringre ngʼama otho biro bedo mochido kuom ndalo abiriyo.
12 ೧೨ ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.
Nyaka opwodhre owuon gi pi chiengʼ mar adek kod chiengʼ mar abiriyo; eka obiro bedo maler. To ka ok opwodhore owuon chiengʼ mar adek gi chiengʼ mar abiriyo, to ok obi bedo maler.
13 ೧೩ ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.
Ngʼato angʼata momulo ringre ngʼama otho kendo ma ok opwodhore owuon ochido hekalu mar Jehova Nyasaye. Ngʼatno nyaka gol oko mar Israel. Nikech pi mar pwodhruok pod ok okir kuome, ochido; kendo chidono odongʼ kuome.
14 ೧೪ “ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.
“Chik momako ngʼama otho e hema ema: Ngʼato angʼata modonjo ei hema kendo ngʼato angʼata mantiere e iye nobed mochido kuom ndalo abiriyo,
15 ೧೫ ಮುಚ್ಚಳ ಹಾಕದೆ ತೆರೆದಿರುವ ಎಲ್ಲಾ ಪಾತ್ರೆಗಳು ಅಶುದ್ಧವಾಗಿರುವವು.
kendo mikebe moro amora maonge raum moumego nobed mochido.
16 ೧೬ ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
“Ngʼato angʼata man oko momulo ngʼatno mane onegi gi ligangla kata ngʼat motho kende, kata ngʼatno momulo chok dhano, kata liel, nobedi mochido kuom ndalo abiriyo.
17 ೧೭ “ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು.
“Ne ngʼatno mochido, ket buru moko moa e misango mar pwodhruok kendo uruw gi pi maler mi uol e wigi.
18 ೧೮ ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.
Eka ngʼatno maler nokaw owino, gilute e pi kendo gikuo pi e hema kod e gik moko duto molosgo ii hekalu gi ji man kanyo. Bende nyaka okwo pi kuom ngʼato angʼata mabed ni osemulo chok ngʼama osetho kata liel kata ngʼato ma osenegi kata ngʼato motho athoya.
19 ೧೯ ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.
Ngʼat maler ema nyaka kir pi kuom ngʼat mochidono chiengʼ mar adek gi mar abiriyo, to kochopo e odiechiengʼ mar abiriyo nyaka opwodhe. Ngʼama ipwodhono nyaka luok lepe kendo luokre gi pi, kendo odhiambono nobed mapoth.
20 ೨೦ ಅಶುದ್ಧನಾಗಿ ದೋಷಪರಿಹಾರ ಮಾಡಿಕೊಳ್ಳದವನು ಯೆಹೋವನ ಆಲಯವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಹೋದುದರಿಂದ ಅವನು ಅಶುದ್ಧನಾಗುವನು.
To ka ngʼat mochido ok opwodhore owuon, nyaka gole oko e dier oganda, nikech osemiyo kama ler mar lemo mar Jehova Nyasaye ochido. Pi pwodhruokgo pod ok okir kuome, omiyo ochido.
21 ೨೧ “ಇದು ಇಸ್ರಾಯೇಲರಿಗೆ ಶಾಶ್ವತ ನಿಯಮವಾಗಿರುವುದು. ಶುದ್ಧೀಕರಣದ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.
Chik mosiko ne gin ema. “Ngʼat mokiro pi mar pwodhruok nyaka luok lepe bende, kendo ngʼato angʼata momulo pi mar pwodhruok nobed mochido nyaka chop odhiambo.
22 ೨೨ ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.”
Gimoro amora ma ngʼat mochido omulo nobed mochido, kendo ngʼato angʼata momule nobed mochido nyaka chop odhiambo.”