< ಅರಣ್ಯಕಾಂಡ 19 >

1 ಯೆಹೋವನು ಮೋಶೆ ಮತ್ತು ಆರೋನರಿಗೆ ಹೀಗೆ ಆಜ್ಞಾಪಿಸಿದನು,
RAB Musa'yla Harun'a şöyle dedi:
2 “ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.
“RAB'bin buyurduğu yasanın kuralı şudur: İsrailliler'e size kusursuz, özürsüz, boyunduruk takmamış kızıl bir inek getirmelerini söyleyin.
3 ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊರಡಿಸಿಕೊಂಡು ಹೋಗಿ ತನ್ನ ಎದುರೇ ಒಬ್ಬನ ಕೈಯಿಂದ ವಧೆಮಾಡಿಸಬೇಕು.
İnek Kâhin Elazar'a verilsin; ordugahın dışına çıkarılıp onun önünde kesilecek.
4 ತರುವಾಯ ಯಾಜಕನಾದ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.
Kâhin Elazar parmağıyla kanından alıp yedi kez Buluşma Çadırı'nın önüne doğru serpecek.
5 ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.
Sonra Elazar'ın gözü önünde inek, derisi, eti, kanı ve gübresiyle birlikte yakılacak.
6 ಯಾಜಕನು ದೇವದಾರುಮರದ ಕಟ್ಟಿಗೆಯನ್ನೂ, ಹಿಸ್ಸೋಪ್ ಗಿಡದ ಬರಲನ್ನೂ, ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಆ ಆಕಳನ್ನು ಸುಡುವ ಬೆಂಕಿಯಲ್ಲಿ ಹಾಕಬೇಕು.
Kâhin biraz sedir ağacı, mercanköşkotu ve kırmızı iplik alıp yanmakta olan ineğin üzerine atacak.
7 ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.
Sonra giysilerini yıkayacak, yıkanacak. Ancak o zaman ordugaha girebilir. Ama akşama dek kirli sayılacaktır.
8 ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.
İneği yakan kişi de giysilerini yıkayacak, yıkanacak. O da akşama dek kirli sayılacak.
9 “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು.
“Temiz sayılan bir kişi ineğin külünü toplayıp ordugahın dışında temiz sayılan bir yere koyacak. İsrail topluluğu temizlenme suyu için bu külü saklayacak; bu, günahtan arınmak içindir.
10 ೧೦ ಆ ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ.
İneğin külünü toplayan adam giysilerini yıkayacak, akşama dek kirli sayılacak. Bu kural hem İsrailliler, hem de aralarında yaşayan yabancılar için kalıcı olacaktır.
11 ೧೧ “ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
“Herhangi bir insan ölüsüne dokunan kişi yedi gün kirli sayılacaktır.
12 ೧೨ ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.
Üçüncü ve yedinci gün temizlenme suyuyla kendini arındıracak, böylece paklanmış olacak. Üçüncü ve yedinci gün kendini arındırmazsa, paklanmış sayılmayacak.
13 ೧೩ ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.
Herhangi bir insan ölüsüne dokunup da kendini arındırmayan kişi RAB'bin Konutu'nu kirletmiş olur. O kişi İsrail'den atılmalı. Temizlenme suyu üzerine dökülmediği için kirli sayılır, kirliliği üzerinde kalır.
14 ೧೪ “ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.
“Çadırda biri öldüğü zaman uygulanacak kural şudur: Çadıra giren ve çadırda bulunan herkes yedi gün kirli sayılacaktır.
15 ೧೫ ಮುಚ್ಚಳ ಹಾಕದೆ ತೆರೆದಿರುವ ಎಲ್ಲಾ ಪಾತ್ರೆಗಳು ಅಶುದ್ಧವಾಗಿರುವವು.
Kapağı iple bağlanmamış, ağzı açık her kap kirli sayılacaktır.
16 ೧೬ ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
“Kırda kılıçla öldürülmüş ya da doğal ölümle ölmüş birine, insan kemiğine ya da mezara her dokunan yedi gün kirli sayılacaktır.
17 ೧೭ “ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು.
“Kirli sayılan kişi için bir kabın içine yakılan günah sunusunun külünden koyun, üstüne duru su dökeceksiniz.
18 ೧೮ ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.
Temiz sayılan bir adam mercanköşkotunu alıp suya batıracak. Sonra çadırın, bütün eşyaların ve orada bulunanların üzerine serpecek. Kemiğe, öldürülmüş ya da doğal ölümle ölmüş kişiye ya da mezara dokunanın üzerine de suyu serpecek.
19 ೧೯ ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.
Temiz sayılan adam, üçüncü ve yedinci gün kirli sayılanın üzerine suyu serpecek. Yedinci gün onu arındıracak. Arınan kişi giysilerini yıkayacak, yıkanacak ve akşam temiz sayılacak.
20 ೨೦ ಅಶುದ್ಧನಾಗಿ ದೋಷಪರಿಹಾರ ಮಾಡಿಕೊಳ್ಳದವನು ಯೆಹೋವನ ಆಲಯವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಹೋದುದರಿಂದ ಅವನು ಅಶುದ್ಧನಾಗುವನು.
Ancak, kirli sayılan biri kendini arındırmazsa topluluğun arasından atılmalı. Çünkü RAB'bin Tapınağı'nı kirletmiştir. Temizlenme suyu üzerine dökülmediği için kirli sayılır.
21 ೨೧ “ಇದು ಇಸ್ರಾಯೇಲರಿಗೆ ಶಾಶ್ವತ ನಿಯಮವಾಗಿರುವುದು. ಶುದ್ಧೀಕರಣದ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.
Onlar için bu kural kalıcı olacaktır. Temizlenme suyunu serpen kişi de giysisini yıkamalı. Temizlenme suyuna dokunan kişi akşama dek kirli sayılacak.
22 ೨೨ ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.”
Kirli sayılan birinin dokunduğu nesne kirli sayılır; o nesneye dokunan da akşama dek kirli sayılır.”

< ಅರಣ್ಯಕಾಂಡ 19 >