< ಅರಣ್ಯಕಾಂಡ 2 >
1 ೧ ಯೆಹೋವನು ಮಾತನಾಡಿ ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ,
সদাপ্রভু মোশি ও হারোণকে বললেন,
2 ೨ “ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.”
“ইস্রায়েলের প্রত্যেক ব্যক্তি, নিজের নিজের পিতৃকুলের চিহ্নের সঙ্গে দলীয় পতাকার সঙ্গে কিছুটা দূরত্ব রেখে, সমাগম তাঁবুর চতুর্দিকে ছাউনি করবে।”
3 ೩ ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.
পূর্বদিকে, সূর্যোদয় অভিমুখে: যিহূদার শিবিরের সেনাদল তাদের পতাকার তলায় সন্নিবেশিত হবে। অম্মীনাদবের ছেলে নহশোন যিহূদা জনগোষ্ঠীর নেতা হবে।
4 ೪ ಅವನ ಸೈನಿಕರ ಸಂಖ್ಯೆ 74,600 ಮಂದಿ.
তার বিভাগীয় সেনাদের সংখ্যা 74,600।
5 ೫ ಯೆಹೂದ ಕುಲದ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಕುಲದವರು. ಚೂವಾರನ ಮಗನಾದ ನೆತನೇಲನು ಇಸ್ಸಾಕಾರರ ಸೈನ್ಯಾಧಿಪತಿ.
তার পরবর্তী ছাউনি হবে ইষাখর গোষ্ঠীর। সূয়ারের ছেলে নথনেল ইষাখর জনগোষ্ঠীর নেতা হবে।
6 ೬ ಅವನ ಸೈನಿಕರ ಸಂಖ್ಯೆ 54,400 ಮಂದಿ.
তার বিভাগীয় সেনাদের সংখ্যা 54,400।
7 ೭ ಇಸ್ಸಾಕಾರರ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ ಕುಲದವರು. ಹೇಲೋನನ ಮಗನಾದ ಎಲೀಯಾಬನು ಜೆಬುಲೂನ್ಯರ ಸೈನ್ಯಾಧಿಪತಿ.
তার পরবর্তী ছাউনি হবে সবূলূন গোষ্ঠীর। হেলোনের ছেলে ইলীয়াব সবূলূন জনগোষ্ঠীর নেতা হবে।
8 ೮ ಅವನ ಸೈನಿಕರ ಸಂಖ್ಯೆ 57,400 ಮಂದಿ.
তার বিভাগীয় সেনাদের সংখ্যা 57,400।
9 ೯ ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು.
সমস্ত বিভাগীয় সেনাদল অনুসারে যিহূদা শিবিরের জন্য নির্দিষ্ট পুরুষের সংখ্যা 1,86,400 জন। প্রথমে তারা যাত্রা শুরু করবে।
10 ೧೦ ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೈನ್ಯಾಧಿಪತಿ.
দক্ষিণপ্রান্তে: রূবেণের শিবিরের সেনাদল তাদের পতাকার তলায় সন্নিবেশিত হবে। শদেয়ূরের ছেলে ইলীষূর রূবেণ জনগোষ্ঠীর নেতা হবে।
11 ೧೧ ಅವನ ಸೈನಿಕರ ಸಂಖ್ಯೆ 46,500 ಮಂದಿ.
তার বিভাগীয় সেনাদের সংখ্যা 46,500।
12 ೧೨ ರೂಬೇನ್ ಕುಲದವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನ್ ಕುಲದವರು. ಚೂರೀಷದ್ದೈಯನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೈನ್ಯಾಧಿಪತಿ.
শিমিয়োনের গোষ্ঠী তাদের পাশে ছাউনি স্থাপন করবে। সূরীশদ্দয়ের ছেলে শলুমীয়েল শিমিয়োন জনগোষ্ঠীর নেতা হবে।
13 ೧೩ ಅವನ ಸೈನಿಕರ ಸಂಖ್ಯೆ 59,300 ಮಂದಿ.
তার বিভাগীয় সেনাদের সংখ্যা 59,300।
14 ೧೪ ತರುವಾಯ ಗಾದ್ಯರ ಕುಲದವರು. ರೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೈನ್ಯಾಧಿಪತಿ.
তার পাশের ছাউনি হবে গাদের। দ্যূয়েলের ছেলে ইলীয়াসফ গাদ জনগোষ্ঠীর নেতা হবে।
15 ೧೫ ಅವನ ಸೈನಿಕರ ಸಂಖ್ಯೆ 45,650 ಮಂದಿ.
তার বিভাগীয় সেনাদের সংখ্যা 45,650।
16 ೧೬ ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.
রূবেণের শিবিরের জন্য নির্দিষ্ট তাদের বিভাগীয় সেনাদের অনুসারে, সমস্ত পুরুষের সংখ্যা 1,51,450। দ্বিতীয় স্থানে তারা যাত্রা শুরু করবে।
17 ೧೭ ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.
তারপর শিবির সমূহের মধ্যস্থানে, সমাগম তাঁবু এবং লেবীয়দের ছাউনি যাত্রা শুরু করবে। তারা যে রকম ছাউনি স্থাপন করে, সেইরকম অভিন্ন ক্রম অনুসারে যাত্রা করবে, প্রত্যেকজন দলীয় পতাকার কাছে, তাদের নির্দিষ্ট স্থানে।
18 ೧೮ ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.
পশ্চিম প্রান্তে: ইফ্রয়িম শিবিরের সেনাদল তাদের পতাকার তলায় অবস্থান করবে। অম্মীহূদের ছেলে ইলীশামা ইফ্রয়িম জনগোষ্ঠীর নেতা হবে।
19 ೧೯ ಅವನ ಸೈನಿಕರ ಸಂಖ್ಯೆ 40,500 ಮಂದಿ.
তার বিভাগীয় সেনাদের সংখ্যা 40,500।
20 ೨೦ ಎಫ್ರಾಯೀಮ್ ಬಳಿಯಲ್ಲಿ ಮನಸ್ಸೆ ಕುಲದವರೂ ತಮ್ಮ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪೆದಾಚೂರನ ಮಗನಾದ ಗಮ್ಲೀಯೇಲ್ ಮನಸ್ಸೆ ಕುಲದ ಸೈನ್ಯಾಧಿಪತಿ.
তাদের পরবর্তী ছাউনি হবে মনঃশি গোষ্ঠীর। পদাহসূরের ছেলে গমলীয়েল, মনঃশি জনগোষ্ঠীর নেতা হবে।
21 ೨೧ ಅವನ ಸೈನಿಕರ ಸಂಖ್ಯೆ 32,200 ಮಂದಿ.
তার বিভাগীয় সেনাদের সংখ্যা 32,200।
22 ೨೨ ತರುವಾಯ ಬೆನ್ಯಾಮೀನ ಕುಲದವರು. ಗಿದ್ಯೋನಿಯ ಮಗನಾದ ಅಬೀದಾನ್ ಬೆನ್ಯಾಮೀನ ಕುಲದ ಸೈನ್ಯಾಧಿಪತಿ.
বিন্যামীন গোষ্ঠীর ছাউনি হবে তাদের পরে। গিদিয়োনির ছেলে অবীদান বিন্যামীন জনগোষ্ঠীর নেতা হবে।
23 ೨೩ ಅವನ ಸೈನಿಕರ ಸಂಖ್ಯೆ 35,400 ಮಂದಿ.
তার বিভাগীয় সেনাদের সংখ্যা 35,400।
24 ೨೪ ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು.
ইফ্রয়িমের শিবিরের জন্য নির্দিষ্ট, তাদের সেনাদল অনুসারে পুরুষের সংখ্যা 1,08,100। তারা তৃতীয় স্থানে যাত্রা শুরু করবে।
25 ೨೫ ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್ ದಾನ್ ಕುಲದ ಸೈನ್ಯಾಧಿಪತಿ.
উত্তর প্রান্তে: দানের শিবিরের সেনাদল তাদের পতাকার তলায় সন্নিবেশিত হবে। অম্মীশদ্দয়ের ছেলে অহীয়েষর দান জনগোষ্ঠীর নেতা হবে।
26 ೨೬ ಅವನ ಸೈನಿಕರ ಸಂಖ್ಯೆ 62,700 ಮಂದಿ.
তার বিভাগীয় সেনাদের সংখ্যা 62,700।
27 ೨೭ ದಾನ್ ಕುಲದ ಬಳಿಯಲ್ಲಿ ಆಶೇರ್ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಒಕ್ರಾನನ ಮಗನಾದ ಪಗೀಯೇಲನು ಆಶೇರ್ ಕುಲದವರ ಸೈನ್ಯಾಧಿಪತಿ.
তার পরবর্তী ছাউনি হবে আশের গোষ্ঠীর। অক্রণের ছেলে পগীয়েল আশের জনগোষ্ঠীর নেতা হবে।
28 ೨೮ ಅವನ ಸೈನಿಕರ ಸಂಖ್ಯೆ 41,500 ಮಂದಿ.
তার বিভাগীয় সেনাদের সংখ্যা 41,500।
29 ೨೯ ತರುವಾಯ ನಫ್ತಾಲಿ ಕುಲದವರು, ಏನಾನನ ಮಗನಾದ ಅಹೀರನು ನಫ್ತಾಲಿ ಕುಲದ ಸೈನ್ಯಾಧಿಪತಿ.
তারপরে অবস্থান হবে নপ্তালি গোষ্ঠীর। ঐননের ছেলে অহীরঃ নপ্তালি জনগোষ্ঠীর নেতা হবে।
30 ೩೦ ಅವನ ಸೈನಿಕರ ಸಂಖ್ಯೆ 53,400 ಮಂದಿ.
তার বিভাগীয় সেনাদের সংখ্যা 53,400।
31 ೩೧ ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು.
দানের শিবিরের জন্য নির্দিষ্ট সমস্ত পুরুষের সংখ্যা 1,57,600 জন। তাদের পতাকা সমেত তারা সবশেষে যাত্রা করবে।
32 ೩೨ ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ.
এরাই ইস্রায়েলী জনগোষ্ঠী, তাদের পিতৃকুল অনুসারে গণিত। শিবির সমূহে, তাদের বিভাগ অনুসারে গণিত সর্বমোট জনসংখ্যা 6,03,550 জন।
33 ೩೩ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇಸ್ರಾಯೇಲರ ಸಂಗಡ ಲೆಕ್ಕಹಾಕಲಿಲ್ಲ.
কিন্তু এদের মধ্যে অন্য ইস্রায়েলীদের সঙ্গে লেবীয়েরা গণিত হয়নি, যেমন সদাপ্রভু মোশিকে আদেশ দিয়েছিলেন।
34 ೩೪ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು.
সদাপ্রভু মোশিকে যেমন আদেশ দিয়েছিলেন, এইভাবে ইস্রায়েলীরা সে সমস্তই করেছিল; তারা সেইভাবে তাদের পতাকাতলে সন্নিবেশিত প্রত্যেক ব্যক্তি তার গোষ্ঠী এবং পিতৃকুল অনুসারে সেইভাবে যাত্রা করত।