< ಅರಣ್ಯಕಾಂಡ 20 >

1 ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.
וַיָּבֹ֣אוּ בְנֵֽי־יִ֠שְׂרָאֵל כָּל־הָ֨עֵדָ֤ה מִדְבַּר־צִן֙ בַּחֹ֣דֶשׁ הָֽרִאשׁ֔וֹן וַיֵּ֥שֶׁב הָעָ֖ם בְּקָדֵ֑שׁ וַתָּ֤מָת שָׁם֙ מִרְיָ֔ם וַתִּקָּבֵ֖ר שָֽׁם׃
2 ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಕೂಡಿಕೊಂಡರು.
וְלֹא־הָ֥יָה מַ֖יִם לָעֵדָ֑ה וַיִּקָּ֣הֲל֔וּ עַל־מֹשֶׁ֖ה וְעַֽל־אַהֲרֹֽן׃
3 ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತುಹೋದಾಗಲೇ ನಾವೂ ಸಹ ಸತ್ತುಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.
וַיָּ֥רֶב הָעָ֖ם עִם־מֹשֶׁ֑ה וַיֹּאמְר֣וּ לֵאמֹ֔ר וְל֥וּ גָוַ֛עְנוּ בִּגְוַ֥ע אַחֵ֖ינוּ לִפְנֵ֥י יְהוָֽה׃
4 ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ?
וְלָמָ֤ה הֲבֵאתֶם֙ אֶת־קְהַ֣ל יְהוָ֔ה אֶל־הַמִּדְבָּ֖ר הַזֶּ֑ה לָמ֣וּת שָׁ֔ם אֲנַ֖חְנוּ וּבְעִירֵֽנוּ׃
5 ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು.
וְלָמָ֤ה הֶֽעֱלִיתֻ֙נוּ֙ מִמִּצְרַ֔יִם לְהָבִ֣יא אֹתָ֔נוּ אֶל־הַמָּק֥וֹם הָרָ֖ע הַזֶּ֑ה לֹ֣א ׀ מְק֣וֹם זֶ֗רַע וּתְאֵנָ֤ה וְגֶ֙פֶן֙ וְרִמּ֔וֹן וּמַ֥יִם אַ֖יִן לִשְׁתּֽוֹת׃
6 ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
וַיָּבֹא֩ מֹשֶׁ֨ה וְאַהֲרֹ֜ן מִפְּנֵ֣י הַקָּהָ֗ל אֶל־פֶּ֙תַח֙ אֹ֣הֶל מוֹעֵ֔ד וַֽיִּפְּל֖וּ עַל־פְּנֵיהֶ֑ם וַיֵּרָ֥א כְבוֹד־יְהוָ֖ה אֲלֵיהֶֽם׃ פ
7 ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ,
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃
8 “ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.
קַ֣ח אֶת־הַמַּטֶּ֗ה וְהַקְהֵ֤ל אֶת־הָעֵדָה֙ אַתָּה֙ וְאַהֲרֹ֣ן אָחִ֔יךָ וְדִבַּרְתֶּ֧ם אֶל־הַסֶּ֛לַע לְעֵינֵיהֶ֖ם וְנָתַ֣ן מֵימָ֑יו וְהוֹצֵאתָ֨ לָהֶ֥ם מַ֙יִם֙ מִן־הַסֶּ֔לַע וְהִשְׁקִיתָ֥ אֶת־הָעֵדָ֖ה וְאֶת־בְּעִירָֽם׃
9 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಆತನ ಸನ್ನಿಧಿಯಿಂದ ತೆಗೆದುಕೊಂಡನು.
וַיִּקַּ֥ח מֹשֶׁ֛ה אֶת־הַמַּטֶּ֖ה מִלִּפְנֵ֣י יְהוָ֑ה כַּאֲשֶׁ֖ר צִוָּֽהוּ׃
10 ೧೦ ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?”
וַיַּקְהִ֜לוּ מֹשֶׁ֧ה וְאַהֲרֹ֛ן אֶת־הַקָּהָ֖ל אֶל־פְּנֵ֣י הַסָּ֑לַע וַיֹּ֣אמֶר לָהֶ֗ם שִׁמְעוּ־נָא֙ הַמֹּרִ֔ים הֲמִן־הַסֶּ֣לַע הַזֶּ֔ה נוֹצִ֥יא לָכֶ֖ם מָֽיִם׃
11 ೧೧ ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.
וַיָּ֨רֶם מֹשֶׁ֜ה אֶת־יָד֗וֹ וַיַּ֧ךְ אֶת־הַסֶּ֛לַע בְּמַטֵּ֖הוּ פַּעֲמָ֑יִם וַיֵּצְאוּ֙ מַ֣יִם רַבִּ֔ים וַתֵּ֥שְׁתְּ הָעֵדָ֖ה וּבְעִירָֽם׃ ס
12 ೧೨ ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.
וַיֹּ֣אמֶר יְהוָה֮ אֶל־מֹשֶׁ֣ה וְאֶֽל־אַהֲרֹן֒ יַ֚עַן לֹא־הֶאֱמַנְתֶּ֣ם בִּ֔י לְהַ֨קְדִּישֵׁ֔נִי לְעֵינֵ֖י בְּנֵ֣י יִשְׂרָאֵ֑ל לָכֵ֗ן לֹ֤א תָבִ֙יאוּ֙ אֶת־הַקָּהָ֣ל הַזֶּ֔ה אֶל־הָאָ֖רֶץ אֲשֶׁר־נָתַ֥תִּי לָהֶֽם׃
13 ೧೩ ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ “ಮೆರೀಬಾ” ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು.
הֵ֚מָּה מֵ֣י מְרִיבָ֔ה אֲשֶׁר־רָב֥וּ בְנֵֽי־יִשְׂרָאֵ֖ל אֶת־יְהוָ֑ה וַיִּקָּדֵ֖שׁ בָּֽם׃ ס
14 ೧೪ ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.
וַיִּשְׁלַ֨ח מֹשֶׁ֧ה מַלְאָכִ֛ים מִקָּדֵ֖שׁ אֶל־מֶ֣לֶךְ אֱד֑וֹם כֹּ֤ה אָמַר֙ אָחִ֣יךָ יִשְׂרָאֵ֔ל אַתָּ֣ה יָדַ֔עְתָּ אֵ֥ת כָּל־הַתְּלָאָ֖ה אֲשֶׁ֥ר מְצָאָֽתְנוּ׃
15 ೧೫ ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.
וַיֵּרְד֤וּ אֲבֹתֵ֙ינוּ֙ מִצְרַ֔יְמָה וַנֵּ֥שֶׁב בְּמִצְרַ֖יִם יָמִ֣ים רַבִּ֑ים וַיָּרֵ֥עוּ לָ֛נוּ מִצְרַ֖יִם וְלַאֲבֹתֵֽינוּ׃
16 ೧೬ ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.
וַנִּצְעַ֤ק אֶל־יְהוָה֙ וַיִּשְׁמַ֣ע קֹלֵ֔נוּ וַיִּשְׁלַ֣ח מַלְאָ֔ךְ וַיֹּצִאֵ֖נוּ מִמִּצְרָ֑יִם וְהִנֵּה֙ אֲנַ֣חְנוּ בְקָדֵ֔שׁ עִ֖יר קְצֵ֥ה גְבוּלֶֽךָ׃
17 ೧೭ ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.
נַעְבְּרָה־נָּ֣א בְאַרְצֶ֗ךָ לֹ֤א נַעֲבֹר֙ בְּשָׂדֶ֣ה וּבְכֶ֔רֶם וְלֹ֥א נִשְׁתֶּ֖ה מֵ֣י בְאֵ֑ר דֶּ֧רֶךְ הַמֶּ֣לֶךְ נֵלֵ֗ךְ לֹ֤א נִטֶּה֙ יָמִ֣ין וּשְׂמֹ֔אול עַ֥ד אֲשֶֽׁר־נַעֲבֹ֖ר גְּבוּלֶֽךָ׃
18 ೧೮ ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು.
וַיֹּ֤אמֶר אֵלָיו֙ אֱד֔וֹם לֹ֥א תַעֲבֹ֖ר בִּ֑י פֶּן־בַּחֶ֖רֶב אֵצֵ֥א לִקְרָאתֶֽךָ׃
19 ೧೯ ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು.
וַיֹּאמְר֨וּ אֵלָ֥יו בְּנֵֽי־יִשְׂרָאֵ֘ל בַּֽמְסִלָּ֣ה נַעֲלֶה֒ וְאִם־מֵימֶ֤יךָ נִשְׁתֶּה֙ אֲנִ֣י וּמִקְנַ֔י וְנָתַתִּ֖י מִכְרָ֑ם רַ֥ק אֵין־דָּבָ֖ר בְּרַגְלַ֥י אֶֽעֱבֹֽרָה׃
20 ೨೦ ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.
וַיֹּ֖אמֶר לֹ֣א תַעֲבֹ֑ר וַיֵּצֵ֤א אֱדוֹם֙ לִקְרָאת֔וֹ בְּעַ֥ם כָּבֵ֖ד וּבְיָ֥ד חֲזָקָֽה׃
21 ೨೧ ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು.
וַיְמָאֵ֣ן ׀ אֱד֗וֹם נְתֹן֙ אֶת־יִשְׂרָאֵ֔ל עֲבֹ֖ר בִּגְבֻל֑וֹ וַיֵּ֥ט יִשְׂרָאֵ֖ל מֵעָלָֽיו׃ פ
22 ೨೨ ಆಗ ಇಸ್ರಾಯೇಲರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.
וַיִּסְע֖וּ מִקָּדֵ֑שׁ וַיָּבֹ֧אוּ בְנֵֽי־יִשְׂרָאֵ֛ל כָּל־הָעֵדָ֖ה הֹ֥ר הָהָֽר׃
23 ೨೩ ಯೆಹೋವನು ಎದೋಮ್ಯರ ದೇಶದ ಗಡಿಯ ಹತ್ತಿರವಿರುವ ಹೋರ್ ಎಂಬ ಬೆಟ್ಟದ ಬಳಿಯಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
וַיֹּ֧אמֶר יְהוָ֛ה אֶל־מֹשֶׁ֥ה וְאֶֽל־אַהֲרֹ֖ן בְּהֹ֣ר הָהָ֑ר עַל־גְּב֥וּל אֶֽרֶץ־אֱד֖וֹם לֵאמֹֽר׃
24 ೨೪ “ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.
יֵאָסֵ֤ף אַהֲרֹן֙ אֶל־עַמָּ֔יו כִּ֣י לֹ֤א יָבֹא֙ אֶל־הָאָ֔רֶץ אֲשֶׁ֥ר נָתַ֖תִּי לִבְנֵ֣י יִשְׂרָאֵ֑ל עַ֛ל אֲשֶׁר־מְרִיתֶ֥ם אֶת־פִּ֖י לְמֵ֥י מְרִיבָֽה׃
25 ೨೫ ನೀನು ಆರೋನನನ್ನೂ, ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ.
קַ֚ח אֶֽת־אַהֲרֹ֔ן וְאֶת־אֶלְעָזָ֖ר בְּנ֑וֹ וְהַ֥עַל אֹתָ֖ם הֹ֥ר הָהָֽר׃
26 ೨೬ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ತನ್ನ ಪೂರ್ವಿಕರ ಬಳಿಗೆ ಸೇರಬೇಕು” ಎಂದು ಆಜ್ಞಾಪಿಸಿದನು.
וְהַפְשֵׁ֤ט אֶֽת־אַהֲרֹן֙ אֶת־בְּגָדָ֔יו וְהִלְבַּשְׁתָּ֖ם אֶת־אֶלְעָזָ֣ר בְּנ֑וֹ וְאַהֲרֹ֥ן יֵאָסֵ֖ף וּמֵ֥ת שָֽׁם׃
27 ೨೭ ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು.
וַיַּ֣עַשׂ מֹשֶׁ֔ה כַּאֲשֶׁ֖ר צִוָּ֣ה יְהוָ֑ה וַֽיַּעֲלוּ֙ אֶל־הֹ֣ר הָהָ֔ר לְעֵינֵ֖י כָּל־הָעֵדָֽה׃
28 ೨೮ ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.
וַיַּפְשֵׁט֩ מֹשֶׁ֨ה אֶֽת־אַהֲרֹ֜ן אֶת־בְּגָדָ֗יו וַיַּלְבֵּ֤שׁ אֹתָם֙ אֶת־אֶלְעָזָ֣ר בְּנ֔וֹ וַיָּ֧מָת אַהֲרֹ֛ן שָׁ֖ם בְּרֹ֣אשׁ הָהָ֑ר וַיֵּ֧רֶד מֹשֶׁ֛ה וְאֶלְעָזָ֖ר מִן־הָהָֽר׃
29 ೨೯ ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.
וַיִּרְאוּ֙ כָּל־הָ֣עֵדָ֔ה כִּ֥י גָוַ֖ע אַהֲרֹ֑ן וַיִּבְכּ֤וּ אֶֽת־אַהֲרֹן֙ שְׁלֹשִׁ֣ים י֔וֹם כֹּ֖ל בֵּ֥ית יִשְׂרָאֵֽל׃ ס

< ಅರಣ್ಯಕಾಂಡ 20 >