< ಅರಣ್ಯಕಾಂಡ 20 >
1 ೧ ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.
Israelfo no nyinaa duu Sin sare so ɔsram a edi kan no mu, na wɔtenaa Kades. Ɛhɔ na Miriam wu maa wosiee no.
2 ೨ ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಕೂಡಿಕೊಂಡರು.
Na nsu a wɔbɛnom nni hɔ nti, nnipa no sɔre tiaa Mose ne Aaron.
3 ೩ ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತುಹೋದಾಗಲೇ ನಾವೂ ಸಹ ಸತ್ತುಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.
Nnipa no ne Mose hamee se, “Sɛ yɛne yɛn nuanom wuwuu wɔ Awurade anim a anka yɛpɛ.
4 ೪ ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ?
Adɛn nti na mode Awurade man ne yɛn nguan ne yɛn anantwi aba sare yi so sɛ yemmewuwu?
5 ೫ ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು.
Adɛn nti na muyii yɛn fii Misraim de yɛn baa asase bɔne yi so? Borɔdɔma, atoko ne bobe nni asase yi so. Nsu a yɛbɛnom nso nni ha.”
6 ೬ ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
Mose ne Aaron fii dɔm no hɔ kɔɔ Ahyiae Ntamadan no ano de wɔn anim butubutuw fam wɔ Awurade anim; na wohuu Awurade anuonyam.
7 ೭ ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ,
Na Awurade ka kyerɛɛ Mose se,
8 ೮ “ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.
“Fa abaa no na wo ne wo nua Aaron mfrɛ nnipa no nyinaa. Wɔrehwɛ mo no, kasa kyerɛ ɔbotan no na nsu befi mu aba. Mubenya wɔn nsu a ɛbɛso wɔn ne wɔn anantwi afi ɔbotan no mu!”
9 ೯ ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಆತನ ಸನ್ನಿಧಿಯಿಂದ ತೆಗೆದುಕೊಂಡನು.
Mose yɛɛ nea Awurade hyɛe no. Ɔfaa abaa no fii baabi a wɔde asie wɔ Awurade anim.
10 ೧೦ ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?”
Mose ne Aaron frɛɛ nnipa no nyinaa ma wobehyiaa wɔ ɔbotan no anim na Mose ka kyerɛɛ wɔn se, “Atuatewfo, muntie! Yɛmma nsu mfi saa ɔbotan yi mu mmra ana?”
11 ೧೧ ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.
Afei Mose maa ne nsa so de abaa no bɔɔ ɔbotan no mprenu maa nsu bebree fii mu ba maa nnipa no ne wɔn anantwi nomee.
12 ೧೨ ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.
Nanso Awurade ka kyerɛɛ Mose ne Aaron se, “Esiane sɛ moannya me mu ahotoso anhyɛ me anuonyam sɛ ɔkronkronni wɔ Israelfo no ani so nti, moremfa wɔn nkɔ asase a mede rema wɔn no so.”
13 ೧೩ ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ “ಮೆರೀಬಾ” ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು.
Wɔfrɛɛ beae hɔ Meriba a ase ne: Atuatew Nsu, efisɛ ɛhɔ ne baabi a Israelfo tew Awurade atua, na ɛhɔ ara nso na Awurade daa ne ho adi kyerɛɛ wɔn sɛ ɔyɛ ɔkronkron.
14 ೧೪ ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.
Mose somaa abɔfo fii Kades kɔɔ Edomhene nkyɛn sɛ wɔnkɔka nkyerɛ no se: “Sɛɛ na wo nua Israelfo reka: Wunim abɛbrɛsɛ a yɛafa mu no nyinaa.
15 ೧೫ ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.
Yɛn agyanom kɔtenaa Misraim, yɛtenaa hɔ mfe bebree. Misraimfo no yɛɛ yɛne yɛn agyanom ayayade,
16 ೧೬ ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.
nanso yesu frɛɛ Awurade no, otiee yɛn na ɔsomaa ɔbɔfo ma obeyii yɛn fii Misraim. “Mprempren yɛwɔ Kades wɔ mo asase hye so.
17 ೧೭ ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.
Yɛsrɛ mo sɛ, ma yentwa mu mfa wo man yi mu. Yɛbɛhwɛ yiye sɛ yɛremfa mo mfuw ne mo bobe nturo mu. Na mpo, yɛrennom mo abura mu nsu. Yɛbɛfa Ɔhene Tempɔn so na yɛremfi so kosi sɛ yɛbɛtra wo hye no.”
18 ೧೮ ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು.
Nanso Edomhene buae se, “Mommfa mʼasase so, anyɛ saa a mede asraafo ne afoa betua mo ano!”
19 ೧೯ ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು.
Israelfo no buae se, “Owura, yɛbɛfa ɔtempɔn no so. Sɛ yɛn nyɛmmoa nom mo nsu a, yebetua ka. Yɛpɛ sɛ yetwa mu wɔ mo asase so na yenni adwemmɔne bi.”
20 ೨೦ ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.
Nanso Edomhene buae se, “Mommfa yɛn asase so!” Ɔboaboaa nʼakofo ano de wɔn kɔɔ ɔhye no so.
21 ೨೧ ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು.
Esiane sɛ Edom amma wɔn kwan amma Israelfo no amfa wɔn man mu no nti, wɔman faa nkyɛn.
22 ೨೨ ಆಗ ಇಸ್ರಾಯೇಲರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.
Israelfo no nyinaa fii Kades kɔɔ Bepɔw Hor so.
23 ೨೩ ಯೆಹೋವನು ಎದೋಮ್ಯರ ದೇಶದ ಗಡಿಯ ಹತ್ತಿರವಿರುವ ಹೋರ್ ಎಂಬ ಬೆಟ್ಟದ ಬಳಿಯಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
Awurade ka kyerɛɛ Mose ne Aaron wɔ Bepɔw Hor a ɛwɔ Edom hye so no se,
24 ೨೪ “ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.
“Bere adu sɛ Aaron wu, na ɔrenkɔ asase a mede ama Israelfo no so bi, efisɛ mo baanu no tew mʼahyɛde ho atua wɔ Meriba nsu no ho.
25 ೨೫ ನೀನು ಆರೋನನನ್ನೂ, ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ.
Fa Aaron ne ne babarima Eleasar kɔ Bepɔw Hor so.
26 ೨೬ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ತನ್ನ ಪೂರ್ವಿಕರ ಬಳಿಗೆ ಸೇರಬೇಕು” ಎಂದು ಆಜ್ಞಾಪಿಸಿದನು.
Ɛhɔ na wubeyi Aaron asɔfotade no de ahyɛ ne babarima Eleasar. Ɛhɔ na Aaron bewu na watoa nʼagyanom.”
27 ೨೭ ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು.
Mose yɛɛ nea Awurade hyɛɛ no no. Wɔn baasa nyinaa kɔɔ bepɔw Hor so a nnipa no nyinaa hwɛ wɔn.
28 ೨೮ ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.
Mose yii Aaron asɔfotade no de hyɛɛ ne babarima Eleasar, na Aaron wuu wɔ bepɔw no apampam. Na Mose ne Eleasar san fii bepɔw no so bae,
29 ೨೯ ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.
na nnipa no tee Aaron wu no, Israelfo no suu no adaduasa.