< ಅರಣ್ಯಕಾಂಡ 21 >

1 ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.
І почув ханаане́янин, цар Ара́ду, що сидів на полу́дні, що Ізраїль увійшов дорогою Атарім, — і він став воювати з Ізраїлем, і взяв у нього до неволі полоне́них.
2 ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.
І склав Ізраїль обі́тницю Господе́ві й сказав: „Якщо справді даси Ти наро́д той у мою руку, то я вчиню́ їхні міста закля́ттям“.
3 ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಾಯಿತು.
І вислухав Господь голос Ізраїлів, — і дав йому ханаане́янина, і він учинив закля́ттям їх та їхні міста, і назвав ім'я́ тому містові: Хорма.
4 ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.
І рушили вони з Гор-гори дорогою Червоного моря, щоб обійти едо́мський край. І підупала душа того наро́ду в тій дорозі.
5 ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
І промовляв той народ проти Бога та проти Мойсея: „На́що ви вивели нас із Єгипту, щоб ми повмирали в пустині? Бож нема тут хліба й нема води, а душі нашій обри́дла ця непридатна ї́жа“.
6 ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.
І послав Господь на той наро́д зміїв сара́фів, і вони кусали наро́д. І померло багато народу з Ізраїля.
7 ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
І прийшов народ до Мойсея та й сказав: „Згрішили ми, бо говорили проти Господа та проти тебе. Молися до Господа, і нехай Він забере від нас цих зміїв“. І молився Мойсей за народ.
8 ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು.
І сказав Господь до Мойсея: „Зроби собі сара́фа, і вистав його на жерди́ні. І станеться, — кожен поку́саний, як погляне на нього, то буде жити“.
9 ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
І зробив Мойсей мідяно́го змія, і виставив його на жерди́ні. І сталося, якщо змій покусав кого, то той дивився на мідяно́го змія — і жив!
10 ೧೦ ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
І рушили Ізраїлеві сини, і таборува́ли в Овоті.
11 ೧೧ ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
І рушили вони з Овоту, і таборува́ли в Ійє-Гааварімі, на пустині, що перед Моавом, від схо́ду сонця.
12 ೧೨ ಅಲ್ಲಿಂದ ಹೊರಟು ಜೆರೆದ್ ತಗ್ಗಿನಲ್ಲಿ ಇಳಿದುಕೊಂಡರು.
Звідти вони рушили, і таборува́ли в долині Зереду.
13 ೧೩ ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.
Звідти рушили й таборували на тім боці Арнону в пустині, що виходить із аморейської границі, бо Арнон — границя Моаву між Моавом та аморе́янином.
14 ೧೪ ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ,
Тому розповідається в „Книжці воєн Господніх“: „Вагев у Суфі, і потоки Арнону,
15 ೧೫ ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ.
і спад потоків, що збо́чив на місце Ару, і на моавську границю опертий“.
16 ೧೬ ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.
А звідти до Бееру. Це той Беер, що про нього сказав Господь до Мойсея: „Збери наро́д, і нехай Я дам їм воду“.
17 ೧೭ ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ
Тоді заспівав був Ізраїль цю пісню: „Піднесися, крини́це, співайте про неї!
18 ೧೮ ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,
Криниця, — вельмо́жі копали її, її викопали наро́дні достойники бе́рлом, жезла́ми своїми“. А з Мідбару до Маттани,
19 ೧೯ ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು.
а з Маттани до Нахаліїлу, а з Нахаліїлу до Бамоту,
20 ೨೦ ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.
а з Бамоту до долини, що на моавському полі, у верхівки Пісґі, що зве́рнена до пустині.
21 ೨೧ ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
І послав Ізраїль послів до Сигона аморе́йського царя, говорячи:
22 ೨೨ “ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.
„Нехай я перейду́ в твоїм краї! Ми не збочимо ні на поле, ні на виноградник, не будемо пити води з криниці, — ми підемо царсько́ю дорогою, аж поки пере́йдемо землю твою“.
23 ೨೩ ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
І не дав Сиго́н Ізраїлеві перейти в границі його. І зібрав Сигон увесь свій народ, та й вийшов навпроти Ізраїля на пустині, і прибув до Йогці, і воював з Ізраїлем.
24 ೨೪ ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.
І вдарив його Ізраїль ві́стрям меча, і посів край його від Арнону аж до Яббоку, аж до синів Аммону, бо Аз — границя синів Аммону.
25 ೨೫ ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.
І позабирав Ізраїль усі ті міста́. І осів Ізраїль у всіх аморейських містах: у Хешбоні й по всіх залежних містах його.
26 ೨೬ ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.
Бо Хешбо́н — місто Сигона, царя аморейського він; і він воював з першим моавським царем, і забрав увесь його край з його руки аж до Арнону.
27 ೨೭ ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
Тому й розповідають кобзарі: „Підіть до Хешбо́ну, — нехай він збуду́ється, і хай міцно поставиться місто Сиго́нове.
28 ೨೮ ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.
Бо вийшов огонь із Хешбо́ну, а по́лум'я з міста Сигонового, — він місто моавське пожер, волода́рів арнонських висот.
29 ೨೯ ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
Горе тобі, о Моаве, ти згинув, наро́де Кемо́шів! Він зробив був синів своїх утікача́ми, а дочок своїх дав у неволю Сигону, царю аморейському.
30 ೩೦ ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.”
I розбили ми їх, — згинув Хешбон до Дівону, і ми попусто́шили аж до Нофаху, що аж до Медви́“.
31 ೩೧ ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು.
І Ізраїль осів в аморейському краї.
32 ೩೨ ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
І послав Мойсей розвідати про Язера, — і вони здобули́ його залежні міста, і заволоділи аморе́янином, що жив там.
33 ೩೩ ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.
І повернулись вони, і пішли доро́гою Башану. І вийшов Оґ, цар баша́нський, насупроти них, він та ввесь його народ, на війну до Едреї.
34 ೩೪ ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.
І сказав Господь до Мойсея: „Не бійся його, бо в руку твою дав Я його й увесь народ його та край його, і зробиш йому, як зробив ти Сигону, цареві аморейському, що сидів у Хешбоні.
35 ೩೫ ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.
І вони побили його й синів його та ввесь народ його, так що нікого не зосталося. І вони заволоділи краєм його.

< ಅರಣ್ಯಕಾಂಡ 21 >