< ಅರಣ್ಯಕಾಂಡ 23 >

1 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.
Balaamu akasema, “Nijengee hapa madhabahu saba, mnitayarishie mafahali saba na kondoo dume saba.”
2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು.
Balaki akafanya kama Balaamu alivyosema; hao wawili kila mmoja wao akatoa fahali mmoja na kondoo dume mmoja juu ya kila madhabahu.
3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
Kisha Balaamu akamwambia Balaki, “Kaa hapa kando ya sadaka yako wakati mimi ninakwenda kando. Huenda Bwana atakuja kukutana nami. Lolote atakalonifunulia, nitakuambia.” Basi akaenda hata mahali peupe palipoinuka.
4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.
Mungu akakutana naye, kisha Balaamu akasema, “Nimekwisha kutengeneza madhabahu saba, na juu ya kila madhabahu nimetoa sadaka ya fahali mmoja na kondoo dume mmoja.”
5 ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.
Bwana akaweka ujumbe katika kinywa cha Balaamu na kusema, “Rudi kwa Balaki umpe ujumbe huu.”
6 ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು.
Basi Balaamu akarudi kwa Balaki, akamkuta amesimama kando ya sadaka yake akiwa na wakuu wote wa Moabu.
7 ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’
Ndipo Balaamu akasema ujumbe wake: “Balaki amenileta kutoka Aramu, mfalme wa Moabu kutoka milima ya mashariki. Akasema, ‘Njoo, unilaanie Yakobo; njoo unishutumie Israeli.’
8 ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?
Nitawezaje kuwalaani, hao ambao Mungu hajawalaani? Nitawezaje kuwashutumu hao ambao Bwana hakuwashutumu?
9 ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ; ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ. ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು. ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ.
Kutoka vilele vya miamba ninawaona, kutoka mahali palipoinuka ninawatazama. Ninaliona taifa ambalo wanaishi peke yao, nao hawahesabiwi kama mojawapo ya mataifa.
10 ೧೦ ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.
Ni nani awezaye kuhesabu mavumbi ya Yakobo, au kuhesabu robo ya Israeli? Mimi na nife kifo cha mtu mwenye haki, na mwisho wangu na uwe kama wao!”
11 ೧೧ ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು.
Balaki akamwambia Balaamu, “Ni nini ulichonitendea? Nimekuleta ulaani adui zangu, lakini wewe badala yake umewabariki!”
12 ೧೨ ಅದಕ್ಕೆ ಬಿಳಾಮನು, “ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?” ಎಂದನು.
Balaamu akajibu, “Je, hainipasi kusema kile Bwana anachoweka katika kinywa changu?”
13 ೧೩ ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.
Ndipo Balaki akamwambia, “Twende pamoja mahali pengine ambapo unaweza kuwaona; utawaona baadhi tu wala si wote. Nawe kutoka huko, unilaanie hao.”
14 ೧೪ ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
Basi akampeleka kwenye shamba la Sofimu, juu ya kilele cha Mlima Pisga. Pale akajenga madhabahu saba na kutoa sadaka ya fahali na kondoo dume mmoja juu ya kila madhabahu.
15 ೧೫ ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು.
Balaamu akamwambia Balaki, “Kaa hapa kando ya sadaka yako wakati ninapokwenda kuonana na Mungu kule.”
16 ೧೬ ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟನು. ಆಗ ಅವನು ಹೇಳಿದ್ದೇನೆಂದರೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು” ಎಂದನು.
Bwana akakutana na Balaamu, akaweka ujumbe katika kinywa chake akasema, “Rudi kwa Balaki umpe ujumbe huu.”
17 ೧೭ ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದನು.
Basi Balaamu akarudi kwa Balaki, akamkuta amesimama kando ya sadaka yake, akiwa na wakuu wa Moabu. Balaki akamuuliza, “Je, Bwana amesema nini?”
18 ೧೮ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.
Ndipo Balaamu akasema ujumbe wake: “Balaki, inuka na usikilize, nisikie mimi, wewe mwana wa Sipori.
19 ೧೯ ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
Mungu si mtu, hata aseme uongo, wala yeye si mwanadamu, hata ajute. Je, anasema, kisha asitende? Je, anaahidi, asitimize?
20 ೨೦ ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.
Nimepokea agizo kubariki; amebariki, nami siwezi kubadilisha.
21 ೨೧ ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.
“Haijaonekana bahati mbaya katika Yakobo, wala taabu katika Israeli. Bwana, Mungu wao yu pamoja nao, nayo sauti kuu ya Mfalme imo katikati yao.
22 ೨೨ ಅವರನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದವನು ದೇವರೇ, ಅವರು ಕಾಡುಕೋಣದಷ್ಟು ಬಲವುಳ್ಳವರು.
Mungu aliwatoa kutoka Misri; wao wana nguvu za nyati.
23 ೨೩ ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’
Hakuna uchawi dhidi ya Yakobo, wala hakuna uaguzi dhidi ya Israeli. Sasa itasemwa kuhusu Yakobo na Israeli, ‘Tazama yale Mungu aliyotenda!’
24 ೨೪ ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.”
Taifa lainuka kama simba jike; linajiinua kama simba ambaye hatulii mpaka amalize kurarua mawindo yake na kunywa damu ya mawindo yake.”
25 ೨೫ ಆಗ ಬಾಲಾಕನು ಬಿಳಾಮನಿಗೆ, “ನೀನು ಅವರನ್ನು ಶಪಿಸಲೂ ಬೇಡ; ಆಶೀರ್ವದಿಸಲೂ ಬೇಡ” ಎಂದು ಹೇಳಿದನು.
Kisha Balaki akamwambia Balaamu, “Usiwalaani kabisa, wala usiwabariki kabisa!”
26 ೨೬ ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು.
Balaamu akajibu, “Je, sikukuambia ni lazima nifanye lolote analosema Bwana?”
27 ೨೭ ತರುವಾಯ ಬಾಲಾಕನು ಬಿಳಾಮನಿಗೆ, “ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು” ಎಂದು ಹೇಳಿದನು.
Basi Balaki akamwambia Balaamu, “Njoo, nikupeleke mahali pengine. Huenda itampendeza Mungu kukuruhusu unilaanie hao watu kutoka mahali hapo.”
28 ೨೮ ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.
Balaki akamchukua Balaamu juu ya Mlima Peori, unaotazamana na nyika.
29 ೨೯ ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು
Balaamu akasema, “Nijengee hapa madhabahu saba, uandae mafahali saba na kondoo dume saba kwa ajili yangu.”
30 ೩೦ ಬಿಳಾಮನ ಅಪ್ಪಣೆಯ ಪ್ರಕಾರ ಬಾಲಾಕನು ಪ್ರತಿಯೊಂದು ಯಜ್ಞ ವೇದಿಯಲ್ಲಿ ಒಂದು ಹೋರಿಯನ್ನೂ. ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
Balaki akafanya kama Balaamu alivyosema, kisha akatoa sadaka ya fahali mmoja na kondoo dume mmoja juu ya kila madhabahu.

< ಅರಣ್ಯಕಾಂಡ 23 >