< ಅರಣ್ಯಕಾಂಡ 24 >
1 ೧ ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.
발람이 자기와 이스라엘을 축복하는 것을 여호와께서 선히 여기심을 보고 전과 같이 사술을 쓰지 아니하고 그 낯을 광야로 향하여
2 ೨ ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,
눈을 들어 이스라엘이 그 지파대로 거하는 것을 보는 동시에 하나님의 신이 그 위에 임하신지라
3 ೩ ಹೀಗೆ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
그가 노래를 지어 가로되 브올의 아들 발람이 말하며 눈을 감았던 자가 말하며
4 ೪ ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.
하나님의 말씀을 듣는 자, 전능자의 이상을 보는 자, 엎드려서 눈을 뜬 자가 말하기를
5 ೫ ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.
야곱이여! 네 장막이, 이스라엘이여! 네 거처가 어찌 그리 아름다운고
6 ೬ ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.
그 벌어짐이 골짜기 같고 강 가의 동산 같으며 여호와의 심으신 침향목들 같고 물가의 백향목들 같도다
7 ೭ ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.
그 통에서는 물이 넘치겠고 그 종자는 많은 물가에 있으리로다 그 왕이 아각보다 높으니 그 나라가 진흥하리로다
8 ೮ ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲುಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಗಾಯಪಡಿಸುವರು.
하나님이 그를 애굽에서 인도하여 내셨으니 그 힘이 들소와 같도다 그 적국을 삼키고 그들의 뼈를 꺽으며 화살로 쏘아 꿰뚫으리로다
9 ೯ ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.
꿇어 앉고 누움이 수사자와 같고 암사자와도 같으니 일으킨 자 누구이랴 너를 축복하는 자마다 복을 받을 것이요 너를 저주하는 자마다 저주를 받을지어다!
10 ೧೦ ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
발락이 발람에게 노하여 손뼉을 치며 발람에게 말하되 `내가 그대를 부른 것은 내 원수를 저주하라 함이어늘 그대가 이같이 세번 그들을 축복하였도다
11 ೧೧ ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು.
그러므로 그대는 이제 그대의 곳으로 달려가라 내가 그대를 높여 심히 존귀케 하기로 뜻하였더니 여호와가 그대를 막아 존귀치 못하게 하셨도다'
12 ೧೨ ಅದಕ್ಕೆ ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ,
발람이 발락에게 이르되 `당신이 내게 보낸 사자들에게 내가 고하여 이르지 아니하였나이까?
13 ೧೩ ‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’
가령 발락이 그 집에 은, 금을 가득히 채워서 내게 줄지라도 나는 여호와의 말씀을 어기고 선악간 임의로 행하지 못하고 여호와께서 말씀하신 대로 말하리라 하지 아니하였나이까?
14 ೧೪ ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.
이제 나는 내 백성에게로 돌아가거니와 들으소서 내가 이 백성이 후일에 당신의 백성에게 어떻게 할 것을 당신에게 고하리이다'하고
15 ೧೫ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
노래를 지어 가로되 브올의 아들 발람이 말하며 눈을 감았던 자가 말하며
16 ೧೬ ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.
하나님의 말씀을 듣는 자가 말하며 지극히 높으신 자의 지식을 아는 자, 전능자의 이상을 보는 자, 엎드려서 눈을 뜬 자가 말하기를
17 ೧೭ ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.
내가 그를 보아도 이 때의 일이 아니며 내가 그를 바라보아도 가까운 일이 아니로다 한 별이 야곱에게서 나오며 한 홀이 이스라엘에게서 일어나서 모압을 이 편에서, 저 편까지 파하고 또 소동하는 자식들을 다 멸하리로다
18 ೧೮ ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ, ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.
그 원수 에돔은 그들의 산업이 되며, 그 원수 세일도 그들의 산업이 되고 그 동시에 이스라엘은 용감히 행동하리로다
19 ೧೯ ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು.
주권자가 야곱에게서 나서 남은 자들을 그 성읍에서 멸절하리로다 하고
20 ೨೦ ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”
또 아말렉을 바라보며 노래를 지어 가로되 아말렉은 열국 중 으뜸이나 종말은 멸망에 이르리로다 하고
21 ೨೧ ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ನಿಮ್ಮ ನಿವಾಸ ಸ್ಥಳವು ಶಾಶ್ವತವಾಗಿಯೇ ತೋರುತ್ತದೆ, ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ.
또 가인 족속을 바라보며 노래를 지어 가로되 너의 거처가 견고하니 네 보금자리는 바위에 있도다
22 ೨೨ ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ? ಅಶ್ಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.”
그러나 가인이 쇠미하리니 나중에는 앗수르의 포로가 되리로다 하고
23 ೨೩ ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ, “ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು?
또 노래를 지어 가로되 슬프다 하나님이 이 일을 행하시리니 그 때에 살 자가 누구이랴?
24 ೨೪ ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.
깃딤 해변에서 배들이 와서 앗수르를 학대하며 에벨을 괴롭게 하리라마는 그도 멸망하리로다 하고
25 ೨೫ ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು.
발람이 일어나 자기 곳으로 돌아갔고 발락도 자기 길로 갔더라