< ಅರಣ್ಯಕಾಂಡ 25 >
1 ೧ ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.
當以色列人住在史廷的時候,民眾開始與摩阿布女子行淫。
2 ೨ ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.
這些女子請民眾參與她們神祗的祭祀;民眾吃了供物,且朝拜了她們的神祗。
3 ೩ ಹೀಗೆ ಇಸ್ರಾಯೇಲರು ಪೆಗೋರದ ಬಾಳನ ಭಕ್ತರಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.
這樣以色列人就歸依了巴耳培敖爾,上主因此對以色列大發憤怒。
4 ೪ ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
上主對梅瑟說:「你捉住民眾中所有的罪魁,在光天化日之下,為上主對他們懸掛起來,好挽回上主對以色列的怒火」。
5 ೫ ಆದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, “ಪೆಗೋರದ ಬಾಳ್ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು” ಎಂದು ಆಜ್ಞಾಪಿಸಿದನು.
梅瑟就吩咐以色列的各首長說:「你們每人應將自已家中歸依巴耳培敖爾的人殺死」。
6 ೬ ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು.
看,當梅瑟和以色列子民全會眾都在會幕門口流淚痛哭時,以色列子民中正有一人,當他們的面,帶了一個米德揚女人到他兄弟那裏去。
7 ೭ ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.
大司祭亞郎的兒子厄肋阿匝爾的兒子丕乃哈斯一見,就由會眾中起來,順手拿了一把長槍,
8 ೮ ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.
跟那以色列人進入臥室內,刺穿了他們兩人,即那以色列和那女人的肚腹;以色列子民間的災禍遂止息了。
9 ೯ ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.
在這次災禍內,死去了二萬四千人。
10 ೧೦ ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,
上主於是訓示梅瑟說:
11 ೧೧ “ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.
「大司祭亞郎的孫子,厄肋阿匝爾床的丕乃哈斯,由以色列子民身上挽回了我的憤怒,因為他在他們中,懷著與我同樣的嫉邪的心,因此我沒有因我嫉邪之心消滅了以色列子民。
12 ೧೨ ಆದಕಾರಣ ನಾನು ಅವನ ಸಂಗಡ ಸ್ನೇಹದ ಒಡಂಬಡಿಕೆ ಮಾಡಿಕೊಳ್ಳುತ್ತೇನೆ ಎಂದು ಎಲ್ಲರಿಗೂ ತಿಳಿಸು.
為此你應聲明:看,我與他結平安的盟約。
13 ೧೩ ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
這為他和他的後裔,是永享司祭品位的盟約,因為他為了自己天主的緣故,嫉惡如仇,賠補了以色列子民的罪」。
14 ೧೪ ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.
那與米德揚女人一同被殺的人,名叫齊默黎,是撒路的兒子,西滿盎家族的族長。
15 ೧೫ ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು.
那被殺的米德揚女人,名叫苛次彼,是族爾的女兒;族爾是米德揚一部落的酋長。
16 ೧೬ ತರುವಾಯ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
事後,上主訓示梅瑟說:
17 ೧೭ “ನೀನು ಮಿದ್ಯಾನ್ಯರನ್ನು ವೈರಿಯೆಂದು ತಿಳಿದು ಸಂಹರಿಸಬೇಕು.
「你應2圍攻米德揚人,打擊他們,因為他們用詭計打擊了你們,就是在培敖爾的事上,
18 ೧೮ ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಆ ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.”
並且他們的姊妹.米德揚酋長的女兒苛次彼的事上,欺騙了你們。──這女子已在培敖爾的事上,在災禍之日被殺」。