< ಅರಣ್ಯಕಾಂಡ 27 >
1 ೧ ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಮೋಶೆಯ ಬಳಿ ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವುದಕ್ಕೆ ಬಂದರು.
Niin astuivat esiin Selofhadin tyttäret-Selofhadin, Heeferin pojan, Gileadin pojan, Maakirin pojan, Manassen pojan, tyttäret-jotka olivat Manassen, Joosefin pojan, suvuista ja joiden nimet olivat Mahla, Nooga, Hogla, Milka ja Tirsa,
2 ೨ ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,
ja he asettuivat Mooseksen ja pappi Eleasarin ja päämiesten ja kaiken kansan eteen ilmestysmajan ovelle ja sanoivat:
3 ೩ “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.
"Meidän isämme kuoli erämaassa, mutta hän ei ollut siinä joukossa, joka kävi kapinoimaan Herraa vastaan, Koorahin joukossa, vaan hän kuoli oman syntinsä tähden, eikä hänellä ollut poikia.
4 ೪ ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು” ಎಂದು ಕೇಳಿಕೊಂಡರು.
Miksi häviäisi nyt meidän isämme nimi hänen sukunsa keskuudesta sentähden, että hänellä ei ollut poikaa? Anna meille perintöosuus isämme veljien keskuudessa."
5 ೫ ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.
Ja Mooses saattoi heidän asiansa Herran eteen.
6 ೬ ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
Ja Herra puhui Moosekselle sanoen:
7 ೭ “ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವತ್ತನ್ನು ಕೊಡಬೇಕು. ತಂದೆಯ ಸ್ವತ್ತು ಅವರಿಗೆ ಬರಲಿ.
"Selofhadin tyttäret puhuvat oikein. Anna heille perintöosuus heidän isänsä veljien keskuudessa ja siirrä heidän isänsä perintöosa heille.
8 ೮ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವತ್ತು ಅವನ ಮಗಳಿಗೆ ಆಗಬೇಕು.
Ja puhu israelilaisille sanoen: Jos joku kuolee pojatonna, niin siirtäkää hänen perintöosansa hänen tyttärellensä.
9 ೯ ಮಗಳೂ ಇಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು.
Mutta jos hänellä ei ole tytärtä, niin antakaa hänen perintöosansa hänen veljillensä.
10 ೧೦ ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ತಂದೆಯ ಅಣ್ಣತಮ್ಮಂದಿರಿಗೆ ಕೊಡಬೇಕು.
Mutta jos hänellä ei ole veljiä, niin antakaa hänen perintöosansa hänen isänsä veljille.
11 ೧೧ ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿಯಮಗಳಾಗಿರಬೇಕು.’”
Mutta jos hänen isällänsä ei ole veljiä, niin antakaa hänen perintöosansa sille hänen veriheimolaisellensa, joka hänen suvussansa on häntä lähin; tämä ottakoon sen haltuunsa. Ja tämä olkoon oikeussäädöksenä israelilaisilla, niinkuin Herra on Moosekselle käskyn antanut."
12 ೧೨ ಯೆಹೋವನು ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.
Ja Herra sanoi Moosekselle: "Nouse tälle Abarimin vuorelle ja katsele sitä maata, jonka minä annan israelilaisille.
13 ೧೩ ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.
Ja kun olet sitä katsellut, niin sinutkin otetaan pois heimosi tykö, niinkuin veljesi Aaron otettiin,
14 ೧೪ ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.
sentähden että te Siinin erämaassa, kansan riidellessä, niskoittelitte minun käskyjäni vastaan ettekä pitäneet minua pyhänä heidän silmiensä edessä, silloin kun vettä hankitte." Se oli Meriban vesi Kaadeksessa Siinin erämaassa.
15 ೧೫ ಆಗ ಮೋಶೆಯು ಯೆಹೋವನ ಸಂಗಡ ಮಾತನಾಡಿ,
Ja Mooses puhui Herralle sanoen:
16 ೧೬ “ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
"Asettakoon Herra, Jumala, jonka vallassa on kaiken lihan henki, tämän seurakunnan johtoon miehen,
17 ೧೭ ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.
joka heidän edellänsä lähtee ja joka heidän edellänsä tulee, joka saattaa heidät lähtemään ja tulemaan, ettei Herran seurakunta olisi niinkuin lammaslauma, jolla ei ole paimenta".
18 ೧೮ ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ,
Ja Herra sanoi Moosekselle: "Ota Joosua, Nuunin poika, mies, jossa on Henki, ja pane kätesi hänen päällensä.
19 ೧೯ ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸಮೂಹದವರೆಲ್ಲರ ಮುಂದೆ ನಿಲ್ಲಿಸಿ ಅವನ ಮೇಲೆ ಕೈಯಿಟ್ಟು ಅವರ ಎದುರಿನಲ್ಲೇ ಅಧಿಕಾರವನ್ನು ಕೊಡಬೇಕು.
Ja aseta hänet pappi Eleasarin ja kaiken kansan eteen ja aseta hänet virkaan heidän nähtensä.
20 ೨೦ ಇಸ್ರಾಯೇಲರ ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗಿರುವಂತೆ ನಿನ್ನ ಬಗ್ಗೆ ಇರುವ ಗೌರವವನ್ನು ಅವನಿಗೆ ಕೊಡಬೇಕು.
Ja siirrä hänelle osa omaa arvoasi, että kaikki israelilaisten seurakunta häntä tottelisi.
21 ೨೧ ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.
Ja hän astukoon pappi Eleasarin eteen, ja tämä kysyköön hänen puolestaan uurimin kautta Jumalan vastausta Herran edessä. Hänen käskystänsä he lähtekööt ja hänen käskystänsä he tulkoot, hän ja kaikki israelilaiset hänen kanssansa, koko seurakunta."
22 ೨೨ ಯೆಹೋವನ ಅಪ್ಪಣೆಯ ಪ್ರಕಾರ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿದನು.
Ja Mooses teki, niinkuin Herra oli häntä käskenyt, ja otti Joosuan ja asetti hänet pappi Eleasarin ja kaiken seurakunnan eteen.
23 ೨೩ ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು.
Ja hän pani kätensä hänen päällensä ja asetti hänet virkaan, niinkuin Herra oli puhunut Mooseksen kautta.