< ಅರಣ್ಯಕಾಂಡ 27 >

1 ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಮೋಶೆಯ ಬಳಿ ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವುದಕ್ಕೆ ಬಂದರು.
روزی دختران صلفحاد به نامهای محله، نوعه، حجله، ملکه و ترصه به در خیمهٔ ملاقات آمدند تا تقاضای خودشان را به موسی و العازار کاهن و رهبران قبایل و سایر کسانی که در آنجا بودند تقدیم کنند. این زنان از قبیلهٔ منسی (یکی از پسران یوسف) بودند. صلفحاد پسر حافر بود، حافر پسر جلعاد، جلعاد پسر ماخیر و ماخیر پسر منسی.
2 ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,
3 “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.
دختران صلفحاد گفتند: «پدر ما در بیابان مرد. او از پیروان قورح نبود که بر ضد خداوند قیام کردند و هلاک شدند. او به سبب گناه خود مرد و پسری نداشت. چرا باید اسم پدرمان به دلیل اینکه پسری نداشته است از میان قبیله‌اش محو گردد؟ باید به ما هم مثل برادران پدرمان ملکی داده شود.»
4 ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು” ಎಂದು ಕೇಳಿಕೊಂಡರು.
5 ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.
پس موسی دعوی ایشان را به حضور خداوند آورد.
6 ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
خداوند در جواب موسی فرمود: «دختران صلفحاد راست می‌گویند. در میان املاک عموهایشان، به آنها ملک بده. همان ملکی را به ایشان بده که اگر پدرشان زنده بود به او می‌دادی.
7 “ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವತ್ತನ್ನು ಕೊಡಬೇಕು. ತಂದೆಯ ಸ್ವತ್ತು ಅವರಿಗೆ ಬರಲಿ.
8 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವತ್ತು ಅವನ ಮಗಳಿಗೆ ಆಗಬೇಕು.
به بنی‌اسرائیل بگو که هرگاه مردی بمیرد و پسری نداشته باشد، ملک او به دخترانش می‌رسد،
9 ಮಗಳೂ ಇಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು.
و اگر دختری نداشته باشد ملک او متعلق به برادرانش خواهد بود.
10 ೧೦ ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ತಂದೆಯ ಅಣ್ಣತಮ್ಮಂದಿರಿಗೆ ಕೊಡಬೇಕು.
اگر برادری نداشته باشد آنگاه عمویش وارث او خواهد شد،
11 ೧೧ ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿಯಮಗಳಾಗಿರಬೇಕು.’”
و اگر عمو نداشته باشد، در آن صورت ملک او به نزدیکترین فامیلش می‌رسد. بنی‌اسرائیل باید این قانون را رعایت کنند، همان‌طور که من به تو امر کرده‌ام.»
12 ೧೨ ಯೆಹೋವನು ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.
روزی خداوند به موسی فرمود: «به کوه عباریم برو و از آنجا سرزمینی را که به قوم اسرائیل داده‌ام ببین.
13 ೧೩ ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.
پس از اینکه آن را دیدی مانند برادرت هارون خواهی مرد و به اجداد خود خواهی پیوست،
14 ೧೪ ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.
زیرا در بیابان صین هر دو شما از دستور من سرپیچی کردید. وقتی که قوم اسرائیل بر ضد من قیام کردند، در حضور آنها حرمت قدوسیت مرا نگه نداشتید.» (این واقعه در کنار چشمهٔ مریبه در قادش واقع در بیابان صین اتفاق افتاده بود.)
15 ೧೫ ಆಗ ಮೋಶೆಯು ಯೆಹೋವನ ಸಂಗಡ ಮಾತನಾಡಿ,
موسی به خداوند عرض کرد:
16 ೧೬ “ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
«ای خداوند، خدای روحهای تمامی افراد بشر، پیش از آنکه بمیرم التماس می‌کنم برای قوم اسرائیل رهبر جدیدی تعیین فرمایی،
17 ೧೭ ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.
مردی که ایشان را هدایت کند و از آنان مراقبت نماید تا قوم خداوند مثل گوسفندان بی‌شبان نباشند.»
18 ೧೮ ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ,
خداوند جواب داد: «برو و دست خود را بر یوشع پسر نون که روح من در اوست، بگذار.
19 ೧೯ ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸಮೂಹದವರೆಲ್ಲರ ಮುಂದೆ ನಿಲ್ಲಿಸಿ ಅವನ ಮೇಲೆ ಕೈಯಿಟ್ಟು ಅವರ ಎದುರಿನಲ್ಲೇ ಅಧಿಕಾರವನ್ನು ಕೊಡಬೇಕು.
سپس او را نزد العازار کاهن ببر و پیش چشم تمامی قوم اسرائیل او را به رهبری قوم تعیین نما.
20 ೨೦ ಇಸ್ರಾಯೇಲರ ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗಿರುವಂತೆ ನಿನ್ನ ಬಗ್ಗೆ ಇರುವ ಗೌರವವನ್ನು ಅವನಿಗೆ ಕೊಡಬೇಕು.
اختیارات خود را به او بده تا تمام قوم اسرائیل او را اطاعت کنند.
21 ೨೧ ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.
او برای دستور گرفتن از من باید پیش العازار کاهن برود. من به‌وسیلۀ اوریم با العازار سخن خواهم گفت و العازار دستورهای مرا به یوشع و قوم اسرائیل ابلاغ خواهد کرد. به این طریق من آنان را هدایت خواهم نمود.»
22 ೨೨ ಯೆಹೋವನ ಅಪ್ಪಣೆಯ ಪ್ರಕಾರ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿದನು.
پس موسی، همان‌طور که خداوند امر کرده بود عمل نمود و یوشع را پیش العازار کاهن برد. سپس در حضور همهٔ قوم اسرائیل،
23 ೨೩ ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು.
دستهایش را بر سر او گذاشت و طبق فرمان خداوند وی را به عنوان رهبر قوم تعیین نمود.

< ಅರಣ್ಯಕಾಂಡ 27 >