< ಅರಣ್ಯಕಾಂಡ 28 >
1 ೧ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
Rəbb Musaya dedi:
2 ೨ “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’
«İsrail övladlarına əmr edib de: “Diqqət edin ki, Mənə təqdim olunan payı – yandırma təqdimini, Mənim xoşuma gələn ətri öz vaxtında verəsiniz”.
3 ೩ ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.
Onlara de: “Rəbbə verəcəyiniz yandırma təqdimi budur: daimi yandırma qurbanı olaraq hər gün iki birillik qüsursuz erkək toğlu.
4 ೪ ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು.
Toğlulardan birini səhər, o birini isə axşamçağı təqdim edin.
5 ೫ ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.
Toğlu ilə birlikdə taxıl təqdimi olaraq dörddə bir hin çəkilmiş zeytun yağı ilə yoğrulmuş efanın onda biri narın un təqdim edin.
6 ೬ ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.
Bu, daimi yandırma qurbanı, Sina dağında buyurulan, Rəbbin xoşuna gələn ətir – Onun üçün yandırma təqdimidir.
7 ೭ ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.
Hər toğlu ilə birlikdə içmə təqdimi olaraq dörddə bir hin kefləndirici içkini Rəbbin adına müqəddəs yerdə tökün.
8 ೮ ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು.
O biri toğlunu axşamçağı təqdim edin. Səhərki kimi taxıl təqdimi və içmə təqdimi ilə birlikdə onu təqdim edin. Bu, Rəbbin xoşuna gələn ətir – yandırma təqdimidir.
9 ೯ “‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.
Şənbə günündə iki birillik qüsursuz erkək toğlu və taxıl təqdimi olaraq zeytun yağı ilə yoğrulmuş onda iki efa narın un və onun içmə təqdimini təqdim edin.
10 ೧೦ ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.
Daimi yandırma qurbanı və onun içmə təqdimindən başqa hər Şənbənin yandırma qurbanı olan təqdim budur.
11 ೧೧ “‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.
Hər ayın başında Rəbbə yandırma qurbanı olaraq qüsursuz iki buğa və bir qoç, birillik yeddi erkək toğlu təqdim edin.
12 ೧೨ ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು ಸೇರಿಸಬೇಕು.
Hər buğa üçün taxıl təqdimi olaraq zeytun yağı ilə yoğrulmuş onda üç efa narın un və tək qoç üçün taxıl təqdimi olaraq zeytun yağı ilə yoğrulmuş onda iki efa narın un,
13 ೧೩ ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.
hər toğlu üçün taxıl təqdimi olaraq zeytun yağı ilə yoğrulmuş onda bir efa narın un təqdim edin. Bu, yandırma qurbanı Rəbbin xoşuna gələn ətir – Onun üçün yandırma təqdimidir.
14 ೧೪ ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.
Onların içmə təqdimləri bir buğa üçün yarım hin, qoç üçün üçdə bir hin və bir toğlu üçün dörddə bir hin şərab olacaq. İl boyu hər yeni ayda veriləcək yandırma qurbanı budur.
15 ೧೫ ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು.
Daimi yandırma qurbanı və onun içmə təqdimlərindən başqa Rəbbə günah təqdimi olaraq bir təkə də təqdim edin.
16 ೧೬ “‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು.
Birinci ayın on dördüncü günü Rəbbin Pasxa bayramıdır.
17 ೧೭ ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
Bu ayın on beşinci günü bayram olsun, yeddi gün mayasız çörək yeyilsin.
18 ೧೮ ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
Birinci gün müqəddəs toplantı keçirin, gündəlik işlərinizi görməyin.
19 ೧೯ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.
Rəbbə yandırma qurbanı, yandırma təqdimi olaraq iki buğa, bir qoç və birillik yeddi erkək toğlu təqdim edin; hamısı qüsursuz olsun.
20 ೨೦ ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,
Hər buğa üçün taxıl təqdimi olaraq zeytun yağı ilə yoğrulmuş onda üç efa, qoç üçün onda iki,
21 ೨೧ ಏಳು ಕುರಿಮರಿಯಲ್ಲಿ ಒಂದೊಂದಕ್ಕೆ ಎಣ್ಣೆ ಬೆರೆಸಿದ ಮೂರು ಸೇರನ್ನು,
yeddi toğludan hər toğlu üçün onda bir efa narın un təqdim edin.
22 ೨೨ ಅದಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
Özünüzü kəffarə etmək üçün günah qurbanı olaraq bir təkə təqdim edin.
23 ೨೩ ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
Hər səhər təqdim edəcəyiniz daimi yandırma qurbanına əlavə olaraq bunları da təqdim edin.
24 ೨೪ ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.
Beləliklə, yeddi gün ərzində hər gün Rəbbin payını, Onun xoşuna gələn ətri – yandırma təqdimini verin. Bunu daimi yandırma qurbanı ilə içmə təqdiminə əlavə olaraq verin.
25 ೨೫ ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
Yeddinci gün müqəddəs toplantı keçirin, gündəlik işlərinizi görməyin.
26 ೨೬ “‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
Nübarın təqdim edilməsi günü Həftələr bayramında Rəbbə təzə taxıl təqdimi gətirəndə müqəddəs toplantı keçirin, gündəlik işlərinizi görməyin.
27 ೨೭ ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,
Yandırma qurbanını Rəbbin xoşuna gələn ətir kimi iki buğa, bir qoç və birillik yeddi erkək toğlu olmaqla təqdim edin.
28 ೨೮ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಟಗರಿಗೆ ಒಂಭತ್ತು ಸೇರು,
Hər buğa üçün taxıl təqdimi olaraq zeytun yağı ilə yoğrulmuş onda üç efa, tək qoç üçün onda iki efa,
29 ೨೯ ಹೋರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನೂ,
yeddi toğludan hər toğlu üçün isə onda bir efa narın un təqdim edin.
30 ೩೦ ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
Özünüzü kəffarə etmək üçün bir təkə də təqdim edin.
31 ೩೧ ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’”
Daimi yandırma qurbanı taxıl və içmə təqdimlərinə əlavə olaraq bunları gətirin. Qurban etdiyiniz heyvanlar qüsursuz olmalıdır.