< ಅರಣ್ಯಕಾಂಡ 29 >
1 ೧ “‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
and in/on/with month: new moon [the] seventh in/on/with one to/for month assembly holiness to be to/for you all work service: work not to make: do day shout to be to/for you
2 ೨ ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.
and to make: offer burnt offering to/for aroma soothing to/for LORD bullock son: young animal cattle one ram one lamb son: aged year seven unblemished
3 ೩ ಧಾನ್ಯನೈವೇದ್ಯಕ್ಕಾಗಿ ಆ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಎಣ್ಣೆ ಬೆರೆಸಿದ ಆರು ಸೇರು ಹಿಟ್ಟನ್ನು,
and offering their fine flour to mix in/on/with oil three tenth to/for bullock two tenth to/for ram
4 ೪ ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಮೂರು ಸೇರು ಎಣ್ಣೆ ಬೆರಸಿದ ಹಿಟ್ಟನ್ನು,
and tenth one to/for lamb [the] one to/for seven [the] lamb
5 ೫ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.
and he-goat goat one sin: sin offering to/for to atone upon you
6 ೬ ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.
from to/for alone: besides burnt offering [the] month: new moon and offering her and burnt offering [the] continually and offering her and drink offering their like/as justice: judgement their to/for aroma soothing food offering to/for LORD
7 ೭ “‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆಗಾಗಿ ಸಭೆಕೂಡಬೇಕು.
and in/on/with ten to/for month [the] seventh [the] this assembly holiness to be to/for you and to afflict [obj] soul: myself your all work not to make: do
8 ೮ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.
and to present: bring burnt offering to/for LORD aroma soothing bullock son: young animal cattle one ram one lamb son: aged year seven unblemished to be to/for you
9 ೯ ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಆರು ಸೇರು ಎಣ್ಣೆ ಬೆರೆಸಿದ ಹಿಟ್ಟನ್ನು,
and offering their fine flour to mix in/on/with oil three tenth to/for bullock two tenth to/for ram [the] one
10 ೧೦ ಏಳು ಕುರಿಗಳಲ್ಲಿ ಒಂದೊಂದಕ್ಕೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು,
tenth tenth to/for lamb [the] one to/for seven [the] lamb
11 ೧೧ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
he-goat goat one sin: sin offering from to/for alone: besides sin: sin offering [the] atonement and burnt offering [the] continually and offering her and drink offering their
12 ೧೨ “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.
and in/on/with five ten day to/for month [the] seventh assembly holiness to be to/for you all work service: work not to make: do and to celebrate feast to/for LORD seven day
13 ೧೩ ಆ ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಟಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ,
and to present: bring burnt offering food offering aroma soothing to/for LORD bullock son: young animal cattle three ten ram two lamb son: aged year four ten unblemished to be
14 ೧೪ ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಎಣ್ಣೆ ಬೆರಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು,
and offering their fine flour to mix in/on/with oil three tenth to/for bullock [the] one to/for three ten bullock two tenth to/for ram [the] one to/for two [the] ram
15 ೧೫ ಹದಿನಾಲ್ಕು ಕುರಿಮರಿಗಳಿಗೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನೂ ಸಮರ್ಪಿಸಬೇಕು.
and tenth tenth to/for lamb [the] one to/for four ten lamb
16 ೧೬ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು.
and he-goat goat one sin: sin offering from to/for alone: besides burnt offering [the] continually offering her and drink offering her
17 ೧೭ “‘ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು.
and in/on/with day [the] second bullock son: young animal cattle two ten ram two lamb son: aged year four ten unblemished
18 ೧೮ ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ,
and offering their and drink offering their to/for bullock to/for ram and to/for lamb in/on/with number their like/as justice: rule
19 ೧೯ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ನಿತ್ಯ ಸರ್ವಾಂಗಹೋಮಕ್ಕಾಗಿ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
and he-goat goat one sin: sin offering from to/for alone: besides burnt offering [the] continually and offering her and drink offering their
20 ೨೦ “‘ಮೂರನೆಯ ದಿನದಲ್ಲಿ ದೋಷವಿಲ್ಲದ ಹನ್ನೊಂದು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ,
and in/on/with day [the] third bullock eleven ten ram two lamb son: aged year four ten unblemished
21 ೨೧ ನೈವೇದ್ಯಕ್ಕಾಗಿ ಹೋರಿ, ಟಗರು, ಮತ್ತು ಕುರಿಮರಿಗಳನ್ನು ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
and offering their and drink offering their to/for bullock to/for ram and to/for lamb in/on/with number their like/as justice: rule
22 ೨೨ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
and he-goat sin: sin offering one from to/for alone: besides burnt offering [the] continually and offering her and drink offering her
23 ೨೩ “‘ನಾಲ್ಕನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಹತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
and in/on/with day [the] fourth bullock ten ram two lamb son: aged year four ten unblemished
24 ೨೪ ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
offering their and drink offering their to/for bullock to/for ram and to/for lamb in/on/with number their like/as justice: rule
25 ೨೫ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
and he-goat goat one sin: sin offering from to/for alone: besides burnt offering [the] continually offering her and drink offering her
26 ೨೬ “‘ಐದನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
and in/on/with day [the] fifth bullock nine ram two lamb son: aged year four ten unblemished
27 ೨೭ ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
and offering their and drink offering their to/for bullock to/for ram and to/for lamb in/on/with number their like/as justice: rule
28 ೨೮ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
and he-goat sin: sin offering one from to/for alone: besides burnt offering [the] continually and offering her and drink offering her
29 ೨೯ “‘ಆರನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
and in/on/with day [the] sixth bullock eight ram two lamb son: aged year four ten unblemished
30 ೩೦ ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
and offering their and drink offering their to/for bullock to/for ram and to/for lamb in/on/with number their like/as justice: rule
31 ೩೧ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
and he-goat sin: sin offering one from to/for alone: besides burnt offering [the] continually offering her and drink offering her
32 ೩೨ “‘ಏಳನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ದೋಷವಿಲ್ಲದ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
and in/on/with day [the] seventh bullock seven ram two lamb son: aged year four ten unblemished
33 ೩೩ ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
and offering their and drink offering their to/for bullock to/for ram and to/for lamb in/on/with number their like/as justice: rule their
34 ೩೪ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
and he-goat sin: sin offering one from to/for alone: besides burnt offering [the] continually offering her and drink offering her
35 ೩೫ “‘ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು.
in/on/with day [the] eighth assembly to be to/for you all work service: work not to make: do
36 ೩೬ ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
and to present: bring burnt offering food offering aroma soothing to/for LORD bullock one ram one lamb son: aged year seven unblemished
37 ೩೭ “‘ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು
offering their and drink offering their to/for bullock to/for ram and to/for lamb in/on/with number their like/as justice: rule
38 ೩೮ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
and he-goat sin: sin offering one from to/for alone: besides burnt offering [the] continually and offering her and drink offering her
39 ೩೯ “‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’”
these to make: offer to/for LORD in/on/with meeting: festival your to/for alone: besides from vow your and voluntariness your to/for burnt offering your and to/for offering your and to/for drink offering your and to/for peace offering your
40 ೪೦ ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲರಿಗೆ ತಿಳಿಸಿದನು.
and to say Moses to(wards) son: descendant/people Israel like/as all which to command LORD [obj] Moses