< ಅರಣ್ಯಕಾಂಡ 3 >
1 ೧ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡಿದ ಕಾಲದಲ್ಲಿದ್ದ ಮೋಶೆ ಮತ್ತು ಆರೋನರ ವಂಶದವರು.
১সীনয় পর্বতে যে দিন সদাপ্রভু মোশির সঙ্গে কথা বললেন, এটা সেই দিন হারোণের ও মোশির বংশাবলির ইতিহাস।
2 ೨ ಆರೋನನ ಮಕ್ಕಳ ಹೆಸರುಗಳು: ಚೊಚ್ಚಲ ಮಗನಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರೇ.
২হারোণের ছেলেদের নাম ছিল; প্রথমজাত নাদব, অবীহূ, ইলীয়াসর ও ঈথামর।
3 ೩ ಇವರು ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಅಭಿಷೇಕಹೊಂದಿದವರಾಗಿ ಪ್ರತಿಷ್ಠಿತರಾದ ಆರೋನನ ಮಕ್ಕಳು.
৩এই হল হারোণের ছেলেদের নাম, অভিষিক্ত যাজক, যাজক হিসাবে সেবা করার জন্য যাদেরকে নিযুক্ত করা হয়েছিল।
4 ೪ ಆದರೆ ನಾದಾಬ್ ಮತ್ತು ಅಬೀಹೂ ಎಂಬುವವರು ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು. ಅವರಿಗೆ ಮಕ್ಕಳಿರಲಿಲ್ಲ. ಆದುದರಿಂದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬಿಬ್ಬರು ತಮ್ಮ ತಂದೆಯಾದ ಆರೋನನ ಕೈಕೆಳಗೆ ಯಾಜಕಧರ್ಮವನ್ನು ನಡೆಸಿದರು.
৪কিন্তু নাদব ও অবীহূ সীনয় মরুপ্রান্তে সদাপ্রভুর উদ্দেশ্যে ইতর আগুন নিবেদন করার জন্য সদাপ্রভুর সামনে প্রাণত্যাগ করেছিল; তাদের সন্তান ছিল না; আর ইলীয়াসর ও ঈথামর তাদের বাবা হারোণের সাক্ষাৎে যাজকের কাজ করত।
5 ೫ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
৫সদাপ্রভু মোশিকে বললেন,
6 ೬ “ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.
৬“তুমি লেবি বংশকে এনে হারোণ যাজকের সামনে উপস্থিত কর; তারা তাকে সাহায্য করবে।
7 ೭ “ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು, ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಸೇವಾಕಾರ್ಯವನ್ನು ನಡೆಸಬೇಕು.
৭তারা সমাগম তাঁবুর সামনে হারোণের ও সমস্ত মণ্ডলীর হয়ে কাজ করবে। তারা সমাগম তাঁবুর দেখাশোনা করবে।
8 ೮ ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು.
৮তারা সমাগম তাঁবুর সব জিনিস পত্রের দেখাশোনা করবে এবং সমাগম তাঁবুর সমস্ত দ্রব্য বহনের কাজে ইস্রায়েল সন্তানদের সাহায্য করবে।
9 ೯ “ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ.
৯তুমি লেবীয়দেরকে হারোণের ও তার ছেলেদের হাতে দান করবে; তারা তাকে ইস্রায়েল সন্তানদের পরিচর্য্যা করতে সাহায্য করবে।
10 ೧೦ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು.
১০তুমি হারোণ ও তার ছেলেদেরকে নিযুক্ত করবে এবং তারা তাদের যাজকের পদ রক্ষা করবে, অন্য গোষ্ঠীর যে কেউ কাছাকাছি আসবে, তার প্রাণদণ্ড হবে।”
11 ೧೧ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದೇನೆಂದರೆ,
১১সদাপ্রভু মোশিকে বললেন,
12 ೧೨ “ನಾನು ಇಸ್ರಾಯೇಲರಲ್ಲಿ ಚೊಚ್ಚಲಾದ ಗಂಡಸರಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ ಎಂದು ತಿಳಿದುಕೋ. ಆದುದರಿಂದ ಲೇವಿಯರು ನನ್ನ ಸೊತ್ತು.
১২“দেখ, ইস্রায়েল সন্তানদের মধ্যে গর্ভজাত সমস্ত প্রথমজাতের পরিবর্তে আমি ইস্রায়েল সন্তানদের মধ্যে থেকে লেবীয়দেরকে গ্রহণ করলাম; অতএব লেবীয়েরা আমারই হবে।
13 ೧೩ ಇಸ್ರಾಯೇಲರಲ್ಲಿ ಚೊಚ್ಚಲಾದವರು ನನ್ನ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ, ಪಶುಗಳನ್ನೂ ನನ್ನ ಸ್ವಂತವಾಗಿ ಪ್ರತಿಷ್ಠಿಸಿಕೊಂಡೆನು; ಅವರು ನನ್ನವರಾಗಿರಬೇಕು. ನಾನೇ ಯೆಹೋವನು” ಎಂದು ಹೇಳಿದನು.
১৩প্রথমজাত সবাই আমার; যে দিন আমি মিশর দেশে সমস্ত প্রথমজাতকে আঘাত করি, সেই দিন মানুষ থেকে পশু পর্যন্ত ইস্রায়েলের সমস্ত প্রথমজাতকে আমার উদ্দেশ্যে পবিত্র করেছি; তারা আমারই হবে; আমি সদাপ্রভু।”
14 ೧೪ ಯೆಹೋವನು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
১৪আর সীনয় মরুপ্রান্তে সদাপ্রভু মোশিকে বললেন,
15 ೧೫ “ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
১৫“তুমি লেবির সন্তানদের তাদের পিতৃকুল অনুসারে ও গোষ্ঠী অনুসারে গণনা কর; এক মাস ও তার থেকে বেশি বয়সী সমস্ত পুরুষকেই গণনা কর।”
16 ೧೬ ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಲೆಕ್ಕಿಸಿದನು.
১৬তখন মোশি যেমন আদেশ পেলেন, তেমনি সদাপ্রভুর আদেশ অনুসারে তাদেরকে গণনা করলেন।
17 ೧೭ ಲೇವಿಯ ಮಕ್ಕಳು ಯಾರೆಂದರೆ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ ಇವರೇ.
১৭লেবির সন্তানদের নাম গের্শোন, কহাৎ ও মরারি।
18 ೧೮ ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು: ಲಿಬ್ನೀ, ಶಿಮ್ಮೀ ಇವರೇ.
১৮গের্শোনের সন্তানদের তাদের নাম লিব্নি ও শিমিয়ি।
19 ೧೯ ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್, ಎಂಬುವವರು.
১৯কহাতের সন্তানদের নাম অম্রাম, যিষ্হর, হিব্রোণ ও উষীয়েল।
20 ೨೦ ಗೋತ್ರಸ್ಥಾಪಕರಾದ ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ಎಂಬುವವರು. ಗೋತ್ರಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.
২০মরারির সন্তানদের নাম মহলি ও মূশি। এরা সবাই পিতৃকুল অনুসারে লেবীয়দের গোষ্ঠী।
21 ೨೧ ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರೂ ಶಿಮ್ಮೀ ಗೋತ್ರದವರೂ ಇದ್ದರು.
২১গের্শোন থেকে লিব্নি-গোষ্ঠী ও শিমিয়ি-গোষ্ঠী উৎপন্ন হল; এরা গের্শোনীয়দের গোষ্ঠী।
22 ೨೨ ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 7,500 ಮಂದಿ.
২২একমাস ও তার থেকে বেশি বয়সী সমস্ত পুরুষকে গণনা করলে এদের লোক সংখ্যা সাত হাজার পাঁচশো জন হল।
23 ೨೩ ಗೇರ್ಷೋನ್ಯರ ಗೋತ್ರದವರು ದೇವದರ್ಶನದ ಗುಡಾರದ ಹಿಂದೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
২৩গের্শোনীয়দের গোষ্ঠীর সবাই পশ্চিমদিকে সমাগম তাঁবুর পিছনের দিকে শিবির করত।
24 ೨೪ ಗೇರ್ಷೋನ್ಯರ ಗೋತ್ರಗಳ ಪ್ರಧಾನಪುರುಷನು ಲಾಯೇಲನ ಮಗನಾದ ಎಲ್ಯಾಸಾಫ್.
২৪লায়েলের ছেলে ইলীয়াসফ গের্শোনীয়দের পিতৃকুলের শাসনকর্ত্তা ছিলেন।
25 ೨೫ ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಗುಡಾರ ಅದರ ಮೇಲಣ ಡೇರೆಯ ಬಟ್ಟೆ, ಅದರ ಮೇಲ್ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆಗಳು,
২৫গের্শোনের সন্তানরা সমাগম তাঁবুর পর্দার বাইরের আবরণের যত্ন নেবে। তারা অবশ্যই তাঁবু, তাঁবুর আবরণ, সমাগম তাঁবুর প্রবেশপথের পর্দার যত্ন নেবে।
26 ೨೬ ಗುಡಾರದ ಮತ್ತು ಯಜ್ಞವೇದಿಯ ಸುತ್ತಲಿರುವ ಅಂಗಳದ ತೆರೆಗಳೂ, ಅಂಗಳದ ಬಾಗಿಲಿನ ಪರದೆಗಳು, ಇವುಗಳ ಹಗ್ಗಗಳೂ ಇವೇ. ಇಂತಹ ಸಕಲವಿಧವಾದ ಸೇವಕಾರ್ಯವನ್ನು ಗೇರ್ಷೋನ್ಯರು ಮಾಡಬೇಕು.
২৬তারা অবশ্যই উঠানের পর্দা, উঠানের প্রবেশপথের পর্দার যত্ন নেবে-বেদি ও পবিত্রস্থানের চারদিকে যে উঠান। তারা সমাগম তাঁবুর দড়ি এবং তার সমস্ত জিনিসের যত্ন নেবে।
27 ೨೭ ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರೂ, ಹೆಬ್ರೋನ್ ಗೋತ್ರದವರೂ, ಉಜ್ಜೀಯೇಲ್ ಗೋತ್ರದವರೂ ಇದ್ದರು.
২৭কহাৎ থেকে অম্রামীয় গোষ্ঠী, যিষ্হরীয় গোষ্ঠী, হিব্রোণীয় গোষ্ঠী ও উষীয়েলীর গোষ্ঠী উৎপন্ন হল; এরা কহাতীয়দের গোষ্ঠী।
28 ೨೮ ಅವರಲ್ಲಿ ದೇವಸ್ಥಾನವನ್ನು ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 8,600 ಮಂದಿ.
২৮একমাস ও তার থেকে বেশি বয়সী সমস্ত পুরুষের সংখ্যা অনুসারে এরা আট হাজার ছয়শো জন, এরা পবিত্র স্থানের রক্ষাকারী।
29 ೨೯ ಕೆಹಾತ್ಯರ ಗೋತ್ರಗಳವರು ದೇವದರ್ಶನದ ಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
২৯কহাতের সন্তানদের গোষ্ঠীর সবাই সমাগম তাঁবুর দক্ষিণদিকে শিবির করত।
30 ೩೦ ಕೆಹಾತ್ಯರ ಗೋತ್ರಗಳ ಪ್ರಧಾನಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.
৩০উষীয়েলের ছেলে ইলীষাফণ কহাতীয় গোষ্ঠীর সবার পিতৃকুলের শাসনকর্ত্তা ছিলেন।
31 ೩೧ ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.
৩১তারা সিন্দুক, টেবিল, বাতিদানী, দুটি বেদি, পবিত্র স্থানের পরিচর্য্যার সমস্ত পাত্রের যত্ন নিত। তারা অবশ্যই পবিত্রস্থান, পবিত্রস্থানের পর্দা এবং পবিত্রস্থানের সমস্ত কিছুর যত্ন নিত।
32 ೩೨ ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.
৩২হারোণ যাজকের ছেলে ইলীয়াসর লেবীয়দের শাসনকর্ত্তাদের অধ্যক্ষ ছিলেন। তিনি পবিত্রস্থানের রক্ষাকারীদের উপরে তদারকি করতেন।
33 ೩೩ ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರೂ, ಮೂಷೀ ಗೋತ್ರದವರೂ ಇದ್ದರು.
৩৩মরারি থেকে মহলীয় গোষ্ঠী ও মূশীয় গোষ্ঠী উৎপন্ন হল; এরা মরারীয়দের গোষ্ঠী।
34 ೩೪ ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 6,200 ಮಂದಿ.
৩৪একমাস ও তার থেকে বেশি বয়সী সমস্ত পুরুষ গণনা করলে এদের লোক সংখ্যা ছয় হাজার দুশো জন হল।
35 ೩೫ ಮೆರಾರೀಯರ ಗೋತ್ರಗಳ ಪ್ರಧಾನಪುರುಷನು ಅಬೀಹೈಲನ ಮಗನಾದ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
৩৫অবীহয়িলের ছেলে সূরীয়েল মরারি গোষ্ঠীর সবার পিতৃকুলের শাসনকর্ত্তা ছিলেন; তারা সমাগম তাঁবুর উত্তরদিকে শিবির করত।
36 ೩೬ ಮೆರಾರೀ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುವೆಂದರೆ: ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಇವುಗಳ ಉಪಕರಣಗಳು,
৩৬মরারির সন্তানরা সমাগম তাঁবুর তক্তা, অর্গল, স্তম্ভ, ভিত্তি ও তার সমস্ত দ্রব্য এবং তার সঙ্গে যুক্ত সমস্ত কাজে
37 ೩೭ ಅಂಗಳದ ಸುತ್ತಲಿರುವ ಕಂಬಗಳು, ಇವುಗಳ ಗದ್ದಿಗೆಕಲ್ಲುಗಳು, ಗೂಟಗಳು, ಹಗ್ಗಗಳು ಇವುಗಳೇ. ಇವುಗಳ ಸಕಲ ವಿಧವಾದ ಸೇವಕಾರ್ಯವನ್ನು ಇವರೇ ಮಾಡಬೇಕು.
৩৭উঠানের চারিদিকের স্তম্ভ ও তাদের ভিত্তি, গোঁজ ও দড়ির দেখাশোনা করত।
38 ೩೮ ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.
৩৮সমাগম তাঁবুর সামনে, পূর্ব দিকে, সূর্য্যোদয়ের দিকে, মোশি, হারোণ ও তার ছেলেরা অবশ্যই শিবির স্থাপন করবে, ইস্রায়েল সন্তানদের পক্ষ থেকে মহাপবিত্র স্থানের বিষয়ে তারা দায়ী থাকবে। কোনো বিদেশী তার কাছাকাছি এলে, তার মৃত্যুদণ্ড হবে।
39 ೩೯ ಮೋಶೆ ಮತ್ತು ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಗೋತ್ರಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000 ಮಂದಿ.
৩৯মোশি ও হারোণ সদাপ্রভুর আদেশ অনুসারে লেবীয়দিগকে নিজেদের গোষ্ঠী অনুসারে গণনা করলে তাদের সংখ্যা একমাস ও তার থেকে বেশি বয়সী পুরুষ মোট বাইশ হাজার জন হল।
40 ೪೦ ಇದಲ್ಲದೆ ಯೆಹೋವನು ಮೋಶೆಗೆ, “ನೀನು ಇಸ್ರಾಯೇಲರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಚೊಚ್ಚಲು ಗಂಡಸರನ್ನು ಹೆಸರು ಹಿಡಿದು ಎಣಿಕೆಮಾಡು.
৪০সদাপ্রভু মোশিকে বললেন, “তুমি ইস্রায়েল সন্তানদের মধ্যে একমাস ও তার থেকে বেশি বয়সী প্রথমজাত সমস্ত পুরুষকে গণনা কর ও তাদের নামের সংখ্যা গ্রহণ কর।
41 ೪೧ ಇಸ್ರಾಯೇಲರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಚೊಚ್ಚಲು ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ನಾನೇ ಯೆಹೋವನು” ಎಂದನು.
৪১আমি সদাপ্রভু, আমারই অধিকারে তুমি ইস্রায়েল সন্তানদের সমস্ত প্রথমজাতের পরিবর্তে লেবীয়দেরকে এবং ইস্রায়েল সন্তানদের সমস্ত প্রথমজাত পশুর পরিবর্তে লেবীয়দের পশুধন গ্রহণ কর।”
42 ೪೨ ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು, ಇಸ್ರಾಯೇಲರಲ್ಲಿದ್ದ ಚೊಚ್ಚಲಾದವರನ್ನು ಲೆಕ್ಕಿಸಿದನು.
৪২তাতে মোশি সদাপ্রভুর আদেশ অনুসারে ইস্রায়েল সন্তানদের সমস্ত প্রথমজাতকে গণনা করলেন;
43 ೪೩ ಹೆಸರು ಹಿಡಿದು ಎಣಿಕೆ ಮಾಡಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 22,273 ಮಂದಿ.
৪৩তাদের একমাস ও তার থেকে বেশি বয়সী সমস্ত প্রথমজাত পুরুষ নাম সংখ্যা অনুসারে বাইশ হাজার দুশো তিয়াত্তর জন হল।
44 ೪೪ ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
৪৪সদাপ্রভু মোশিকে বললেন,
45 ೪೫ “ನೀನು ಇಸ್ರಾಯೇಲರ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನು, ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನೇ ಯೆಹೋವನು.
৪৫“তুমি ইস্রায়েল সন্তানদের সমস্ত প্রথমজাতের পরিবর্তে লেবীয়দেরকে ও তাদের পশুধনের পরিবর্তে লেবীয়দের পশুধন গ্রহণ কর; লেবীয়েরা আমারই হবে; আমি সদাপ্রভু।
46 ೪೬ “ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶೆಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು.
৪৬ইস্রায়েল সন্তানদের মধ্যে লেবীয়দের সংখ্যার যে অতিরিক্ত দুইশো তিয়াত্তর জন প্রথমজাত লোক,
47 ೪೭ ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು.
৪৭তাদের এক এক জনের জন্য পবিত্রস্থানের শেকল অনুসারে পাঁচ শেকল করে নেবে; কুড়ি গেরাতে এক শেকল হয়।
48 ೪೮ ಅವರೊಳಗೆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಡಬೇಕು” ಎಂದನು.
৪৮তাদের সংখ্যা অতিরিক্ত সেই প্রথমজাত লোকদের রূপার মূল্য তুমি হারোণ ও তার ছেলেদেরকে দেবে।”
49 ೪೯ ಅದಕ್ಕೆ ಅನುಸಾರವಾಗಿ ಮೋಶೆ ಲೇವಿಯರಿಗಿಂತ ಹೆಚ್ಚಾದ ಚೊಚ್ಚಲರನ್ನು ಬಿಡಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು.
৪৯তাতে লেবীয়দের মাধ্যমে মুক্ত লোক ছাড়া যারা অবশিষ্ট থাকল, তাদের মুক্তির মূল্য মোশি নিলেন।
50 ೫೦ ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು.
৫০তিনি ইস্রায়েল সন্তানদের প্রথমজাত লোক থেকে পবিত্রস্থানের শেকলের পরিমাণে এক হাজার তিনশো পঁয়ষট্টি শেকল রূপা নিলেন।
51 ೫೧ ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಟ್ಟನು.
৫১সদাপ্রভুর বাক্য অনুসারে মোশি সেই মুক্ত লোকেদের রূপা নিয়ে হারোণ ও তাঁর ছেলেদেরকে দিলেন; যেমন সদাপ্রভু মোশিকে আদেশ দিয়েছিলেন।