< ಅರಣ್ಯಕಾಂಡ 30 >

1 ಮೋಶೆಯು ಇಸ್ರಾಯೇಲರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ,
फिर मूसा ने इस्राएली गोत्रों के मुख्य-मुख्य पुरुषों से कहा, “यहोवा ने यह आज्ञा दी है:
2 ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.
जब कोई पुरुष यहोवा की मन्नत माने, या अपने आपको वाचा से बाँधने के लिये शपथ खाए, तो वह अपना वचन न टाले; जो कुछ उसके मुँह से निकला हो उसके अनुसार वह करे।
3 “ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ
और जब कोई स्त्री अपनी कुँवारी अवस्था में, अपने पिता के घर में रहते हुए, यहोवा की मन्नत माने, व अपने को वाचा से बाँधे,
4 ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು. ಯಾವುದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇ ಬಾರದು.
तो यदि उसका पिता उसकी मन्नत या उसका वह वचन सुनकर, जिससे उसने अपने आपको बाँधा हो, उससे कुछ न कहे; तब तो उसकी सब मन्नतें स्थिर बनी रहें, और कोई बन्धन क्यों न हो, जिससे उसने अपने आपको बाँधा हो, वह भी स्थिर रहे।
5 ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
परन्तु यदि उसका पिता उसकी सुनकर उसी दिन उसको मना करे, तो उसकी मन्नतें या और प्रकार के बन्धन, जिनसे उसने अपने आपको बाँधा हो, उनमें से एक भी स्थिर न रहे, और यहोवा यह जानकर, कि उस स्त्री के पिता ने उसे मना कर दिया है, उसका यह पाप क्षमा करेगा।
6 “ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ,
फिर यदि वह पति के अधीन हो और मन्नत माने, या बिना सोच विचार किए ऐसा कुछ कहे जिससे वह बन्धन में पड़े,
7 ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು.
और यदि उसका पति सुनकर उस दिन उससे कुछ न कहे; तब तो उसकी मन्नतें स्थिर रहें, और जिन बन्धनों से उसने अपने आपको बाँधा हो वह भी स्थिर रहें।
8 ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
परन्तु यदि उसका पति सुनकर उसी दिन उसे मना कर दे, तो जो मन्नत उसने मानी है, और जो बात बिना सोच-विचार किए कहने से उसने अपने आपको वाचा से बाँधा हो, वह टूट जाएगी; और यहोवा उस स्त्री का पाप क्षमा करेगा।
9 “ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು.
फिर विधवा या त्यागी हुई स्त्री की मन्नत, या किसी प्रकार की वाचा का बन्धन क्यों न हो, जिससे उसने अपने आपको बाँधा हो, तो वह स्थिर ही रहे।
10 ೧೦ “ಮುತ್ತೈದೆಯು ಅಂತಹ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ,
१०फिर यदि कोई स्त्री अपने पति के घर में रहते मन्नत माने, या शपथ खाकर अपने आपको बाँधे,
11 ೧೧ ಅವಳ ಗಂಡನು ತಿಳಿದು ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಿಲ್ಲುವವು.
११और उसका पति सुनकर कुछ न कहे, और न उसे मना करे; तब तो उसकी सब मन्नतें स्थिर बनी रहें, और हर एक बन्धन क्यों न हो, जिससे उसने अपने आपको बाँधा हो, वह स्थिर रहे।
12 ೧೨ ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ.
१२परन्तु यदि उसका पति उसकी मन्नत आदि सुनकर उसी दिन पूरी रीति से तोड़ दे, तो उसकी मन्नतें आदि, जो कुछ उसके मुँह से अपने बन्धन के विषय निकला हो, उसमें से एक बात भी स्थिर न रहे; उसके पति ने सब तोड़ दिया है; इसलिए यहोवा उस स्त्री का वह पाप क्षमा करेगा।
13 ೧೩ ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.
१३कोई भी मन्नत या शपथ क्यों न हो, जिससे उस स्त्री ने अपने जीव को दुःख देने की वाचा बाँधी हो, उसको उसका पति चाहे तो दृढ़ करे, और चाहे तो तोड़े;
14 ೧೪ ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ, ಪ್ರತಿಜ್ಞೆಗಳನ್ನೂ ಅವನು ನಮೂದಿಸಿದಂತೆ ಆಗುವುದು.
१४अर्थात् यदि उसका पति दिन प्रतिदिन उससे कुछ भी न कहे, तो वह उसको सब मन्नतें आदि बन्धनों को जिनसे वह बंधी हो दृढ़ कर देता है; उसने उनको दृढ़ किया है, क्योंकि सुनने के दिन उसने कुछ नहीं कहा।
15 ೧೫ ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”
१५और यदि वह उन्हें सुनकर बहुत दिन पश्चात् तोड़ दे, तो अपनी स्त्री के अधर्म का भार वही उठाएगा।”
16 ೧೬ ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.
१६पति-पत्नी के बीच, और पिता और उसके घर में रहती हुई कुँवारी बेटी के बीच, जिन विधियों की आज्ञा यहोवा ने मूसा को दी वे ये ही हैं।

< ಅರಣ್ಯಕಾಂಡ 30 >