< ಅರಣ್ಯಕಾಂಡ 31 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ,
परमेश्वर मोशेशी बोलला व म्हणाला,
2 “ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು.
इस्राएल लोकांसाठी मिद्यान्याविरूद्ध सूड घे. हे केल्यानंतर तू मरण पावशील आणि त्यानंतर तू तुझ्या लोकांस जाऊन मिळशील.
3 ಆಗ ಮೋಶೆಯು ಇಸ್ರಾಯೇಲರಿಗೆ, “ನಿಮ್ಮೊಳಗಿಂದ ಕೆಲವರು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು. ಯೆಹೋವನ ಪ್ರತಿದಂಡನೆಯನ್ನು ಅವರಿಗೆ ತೀರಿಸಬೇಕು.
मग मोशे लोकांशी बोलला. तो म्हणाला, तुमच्यातल्या काहींची सैनिक म्हणून निवड करा. परमेश्वर त्यांचा उपयोग मिद्यान्याचा सूड घेण्यासाठी करील.
4 ಇಸ್ರಾಯೇಲರ ಒಂದೊಂದು ಕುಲದಿಂದ ಸಾವಿರ ಜನ ಭಟರನ್ನು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಕಳುಹಿಸಬೇಕು.”
इस्राएलाच्या प्रत्येक वंशातून एक एक हजार लढाईस पाठवा.
5 ಆದಕಾರಣ ಇಸ್ರಾಯೇಲರು ಕುಲವೊಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಎಣಿಕೆಮಾಡಿ ಕಳುಹಿಸಿದರು.
इस्राएलाच्या हजार आणि हजारांमधून प्रत्येक वंशाचे एक हजार, असे सर्व बारा हजार सैनिक लढाईसाठी पुरवले जातील.
6 ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.
मोशेने प्रत्येक वंशातून एक हजार असे बारा हजार लोकांस लढाईवर पाठवले. त्यांना आणि त्यांच्याबरोबर याजक एलाजाराचा मुलगा फिनहासास पवित्र पात्रे व इशारा देण्यासाठी रणशिंगे त्यांच्या हवाली करून पाठवले.
7 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಮಿದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರಮಾಡಿದರು.
मग मोशेने व एलाजार याजकाने मोशेला परमेश्वराने दिलेल्या आज्ञेप्रमाणे मिद्यान्यांबरोबर केले.
8 ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.
त्यांनी जे लोक मारले त्यामध्ये अवी, रेकेम, सूर, हूर व रेबा हे मिद्यानाचे राजे होते. त्यांनी बौराचा मुलगा बलामासही तलवारीने मारले.
9 ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.
इस्राएल लोकांनी मिद्यानाच्या स्त्रियांना व मुलांना कैद करून नेले. त्यांनी त्यांची सर्व गुरे व त्यांचे सर्व कळप व सर्व धन लूट म्हणून त्यांनी घेतले.
10 ೧೦ ಅವರು ಇದ್ದ ಎಲ್ಲಾ ಊರುಗಳನ್ನೂ, ಪಾಳೆಯಗಳನ್ನೂ ಸುಟ್ಟುಬಿಟ್ಟರು.
१०त्यांनी त्यांची सर्व वस्तीची नगरे व त्यांच्या सर्व छावण्याही जाळल्या.
11 ೧೧ ಒಂದನ್ನೂ ಬಿಡದೆ ಮನುಷ್ಯರನ್ನೂ, ಪಶುಗಳನ್ನೂ ಸೆರೆಹಿಡಿದರು.
११त्यांनी त्यांची सर्व लूट व बंदीवान, दोन्ही लोक आणि जनावरे बरोबर घेतली.
12 ೧೨ ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು.
१२यरीहोपाशी यार्देनतीरी मवाबाच्या मैदानातील छावणीत मोशे, याजक एलाजार आणि इस्राएल लोकांच्या मंडळीसमोर त्यांना आणले.
13 ೧೩ ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ, ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಹೋಗಿ ಅವರನ್ನು ಎದುರುಗೊಂಡರು.
१३नंतर मोशे, याजक एलाजार आणि लोकांचे पुढारी सैनिकांना भेटण्यासाठी छावणीबाहेर त्यांना सामोरे गेले.
14 ೧೪ ಆಗ ಮೋಶೆಯು ಯುದ್ಧ ಭೂಮಿಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.
१४जे सैनिकांचे सेनापती युद्धावरुन परतले होते एक हजार सैनिकांच्या प्रमुखावर आणि शंभर सैनिकांच्या प्रमुखावर मोशे खूप रागावला.
15 ೧೫ ಮೋಶೆಯು ಅವರಿಗೆ, “ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೇನು?
१५मोशे त्यांना म्हणाला, तुम्ही स्त्रियांना जिवंत का ठेवले?
16 ೧೬ ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.
१६पाहा ह्यांनीच बलामाच्या मसलतीवरून पौराच्या प्रकरणी इस्राएलाच्या वंशाना परमेश्वराविरूद्ध अपराध करायला लावले. यावरुन परमेश्वराच्या मंडळीत मरी पसरली.
17 ೧೭ ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡು ಮಕ್ಕಳನ್ನೂ, ಪುರುಷ ಸಂಗಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು.
१७आताच मिद्यानाच्या सर्व मुलांना ठार मारा आणि पुरुषाबरोबर राहिलेल्या सर्व स्त्रियांना मारून टाका. कोणत्याही पुरुषाबरोबर लैंगिक संबंध असलेल्या सर्व स्त्रियांना मारून टाका.
18 ೧೮ ಪುರುಷ ಸಂಗಮಾಡದಿರುವ ಕನ್ಯೆಯರನ್ನು ನಿಮಗೋಸ್ಕರ ಉಳಿಸಿಕೊಳ್ಳಬೇಕು.
१८“आणि नंतर तुमच्यापैकी ज्यांनी दुसऱ्यांना मारले असेल त्यांनी सात दिवस तळाच्या बाहेर रहावे.
19 ೧೯ ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.
१९तुम्ही प्रेताला केवळ हात जरी लावला असला तरीही तुम्ही बाहेर रहावे. तिसऱ्या दिवशी तुम्ही स्वत: ला आणि तुमच्या कैद्यांना शुद्ध करा. हीच गोष्ट पुन्हा सातव्या दिवशीही करा.
20 ೨೦ ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ, ತೊಗಲಿನ ಸಾಮಾನನ್ನೂ, ಮೇಕೆ ಕೂದಲಿನ ವಸ್ತ್ರಗಳನ್ನು ಮರದ ವಸ್ತುಗಳನ್ನು ಶುದ್ಧ ಮಾಡಿಕೊಳ್ಳಬೇಕು” ಎಂದು ಹೇಳಿದನು.
२०तुम्ही तुमचे सर्व कपडे धुवा. लाकूड, लोकर आणि चामडे यांपासून बनवलेल्या वस्तू धुवा. तुम्ही शुद्ध झालेच पाहिजे.”
21 ೨೧ ಮಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗೆಂದನು, “ಯೆಹೋವನು ಮೋಶೆಗೆ ಅಪ್ಪಣೆಮಾಡಿದ ನಿಯಮ ಏನೆಂದರೆ,
२१नंतर याजक एलाजार सैनिकांशी बोलला. तो म्हणाला, “परमेश्वराने मोशेला सांगितले ते हे नियम आहेत. युद्धावरुन परत आलेल्या सैनिकांसाठी हे नियम आहेत. तुम्ही सोने, चांदी, तांबे,
22 ೨೨ ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು,
२२पितळ, लोखंड, पत्रा किंवा शिसे वगैरे
23 ೨೩ ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯಿಂದ ಸುಡಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.
२३जे काही अग्नीत टिकेल ते तुम्ही अग्नीत घालून काढा ते शुद्ध होईल: तरी अशुद्धी दूर करण्याच्या पाण्याने ते शुद्ध करावे आणि जे काही अग्नीत टिकणार नाही ते पाण्याने धुवावे.
24 ೨೪ ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು” ಎಂದು ಹೇಳಿದನು.
२४सातव्या दिवशी तुम्ही तुमचे सर्व कपडे धुवा. नंतर तुम्ही शुद्ध व्हाल त्यानंतर तुम्ही तळावर येऊ शकता.”
25 ೨೫ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
२५नंतर परमेश्वर मोशेशी बोलला व म्हणाला,
26 ೨೬ “ನೀನೂ, ಮಹಾಯಾಜಕನಾದ ಎಲ್ಲಾಜಾರನೂ, ಕುಲಾಧಿಪತಿಗಳೂ ಸಮೂಹದವರ ಕೈಗೆ ಸಿಕ್ಕಿದ ಮನುಷ್ಯರನ್ನೂ, ಪಶುಗಳನ್ನೂ ಲೆಕ್ಕಿಸಿ,
२६सैनिकांनी जे कैदी, प्राणी आणि इतर गोष्टी युद्धावरुन आणल्या आहेत त्यांची मोजदाद एलाजार याजक, तू आणि नेत्यांनी करावी.
27 ೨೭ ಒಟ್ಟು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ, ಮಿಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು.
२७नंतर युद्धावर गेलेल्या सैनिकांत आणि इस्राएलाच्या इतर लोकात त्यांची वाटणी करा.
28 ೨೮ ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು.
२८युद्धावर गेलेल्या सैनिकांच्या हिश्श्यातून काही भागातून माणसे, गाईबैल, गाढवे व शेरडेमेंढरे ह्यांच्यापैकी प्रत्येक पाचशेमागे एक परमेश्वराप्रीत्यर्थ कर म्हणून घ्यावा.
29 ೨೯ ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.
२९त्यांच्या हिश्श्यातून घेऊन तो परमेश्वराप्रीत्यर्थ समर्पित अंश म्हणून याजक एलाजाराला द्यावा.
30 ೩೦ ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
३०“नंतर इस्राएल लोकांस मिळालेल्या हिश्श्यातून माणसे, गाईबैल, गाढवे, शेरडेमेंढरे वगैरे सर्व पशू ह्यांच्यापैकी प्रत्येक पन्नासांमागे एक घेऊन परमेश्वराच्या निवासमंडपाची रक्षण करणाऱ्या लेव्यांना द्यावे.”
31 ೩೧ ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ ಮಾಡಿದರು.
३१परमेश्वराने मोशेला आज्ञा केल्याप्रमाणे मोशे आणि एलाजार याजकाने केले.
32 ೩೨ ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 6,75,000,
३२सैनिकांनी लुटून घेतलेल्या वस्तूंशिवाय सहा लक्ष पंचाहत्तर हजार शेरडेमेंढरे,
33 ೩೩ ದನಗಳು - 72,000,
३३बहात्तर हजार गाईबैल,
34 ೩೪ ಕತ್ತೆಗಳು - 61,000,
३४एकसष्ट हजार गाढवे
35 ೩೫ ಕನ್ಯೆಯರು - 32,000.
३५आणि बत्तीस हजार स्त्रिया आणल्या. (यांत कोणत्याही पुरुषाबरोबर लैंगिक संबंध न आलेल्या स्त्रियांचाच फक्त समावेश आहे).
36 ೩೬ ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500.
३६युद्धावर गेलेल्या सैनिकांना तीन लक्ष सदतीस हजार पाचशे मेंढ्या मिळाल्या.
37 ೩೭ ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675.
३७त्यांनी सहाशे पंच्याहत्तर मेंढ्या परमेश्वरास दिल्या.
38 ೩೮ ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72.
३८गाईबैल छत्तीस हजार असून त्यातील बहात्तर परमेश्वराचा कर होते.
39 ೩೯ ಕತ್ತೆಗಳಲ್ಲಿ - 30,500 ಯೆಹೋವನಿಗೆ ಬಂದ ಕಪ್ಪ - 61
३९सैनिकांना तीस हजार पाचशे गाढवे मिळाली. त्यातील एकसष्ट गाढवे त्यांनी परमेश्वरास दिले.
40 ೪೦ 16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು.
४०सैनिकांना सोळा हजार स्त्रिया मिळाल्या. त्यांपैकी बत्तीस स्त्रिया त्यांनी परमेश्वरास दिल्या.
41 ೪೧ ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.
४१परमेश्वराने मोशेला आज्ञा केल्याप्रमाणे परमेश्वराप्रीत्यर्थ हा कर समर्पित म्हणून त्याने याजक एलाजाराला दिल्या.
42 ೪೨ ಇಸ್ರಾಯೇಲರ ಭಟರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿ ಹಂಚಿದ ಅರ್ಧ ಭಾಗ
४२नंतर युद्धावर गेलेल्या इस्राएली सैनिकांकडून मोशेने घेतलेला अर्धा भाग होता.
43 ೪೩ ಎಷ್ಟೆಂದರೆ - 3,37,500 ಆಡುಕುರಿಗಳು.
४३लोकांस तीन लक्ष सदतीस हजार पाचशे मेंढ्या.
44 ೪೪ ಎತ್ತುಗಳು - 36,000,
४४छत्तीस हजार गाईबैल,
45 ೪೫ ಕತ್ತೆಗಳು - 30,500,
४५गाढवे तीस हजार पाचशे
46 ೪೬ ಕನ್ಯೆಯರು - 16,000, ಇಷ್ಟು ಇಸ್ರಾಯೇಲ ಸಮೂಹದವರ ಪಾಲಿಗೆ ಬಂದವು.
४६आणि सोळा हजार स्त्रिया मिळाल्या.
47 ೪೭ ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.
४७आणि इस्राएलाच्या वंशाच्या अर्ध्या भागातून, मनुष्यातून व जनावरांतून प्रत्येक पन्नास वस्तूमागे मोशेने एक वस्तू परमेश्वरासाठी घेतली. त्यामध्ये पशू आणि माणसे याचा समावेश होता. नंतर त्याने या वस्तू लेवींना दिल्या. कारण त्यांनी परमेश्वराच्या पवित्र निवासमंडपाची काळजी घेतली.
48 ೪೮ ಆಗ ದಂಡಿನ ಸಹಸ್ರಾಧಿಪತಿಗಳೂ ಮೋಶೆಯ ಬಳಿಗೆ ಬಂದು ಅವನಿಗೆ,
४८नंतर सैनिकांचे पुढारी सहस्त्राधिपती सैनिकांचे व शताधिपती सैनिकांचे पुढारी मोशेकडे आले.
49 ೪೯ “ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.
४९त्यांनी मोशेला सांगितले, आम्ही तुझ्या सेवकांनी आमचे सैनिक मोजले. आम्ही एकही सैनिक सोडला नाही.
50 ೫೦ ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.
५०म्हणून आम्ही प्रत्येक सैनिकाकडून परमेश्वराची भेट आणत आहोत. आम्ही सोन्याच्या वस्तू आणत आहोत; बाजूबंद, बांगडया, आंगठ्या, कुड्या आणि हार. ही आम्ही परमेश्वरास अर्पण म्हणून आमच्या जिवासाठी परमेश्वरारासमोर प्रायश्चित करण्याकरता आणली आहेत.
51 ೫೧ ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು. ಅವುಗಳೆಲ್ಲಾ ವಿಚಿತ್ರವಾದ ಆಭರಣಗಳು.
५१मोशे आणि एलाजार याजकाने ते सर्व सोने व घडीव वस्तू त्यांच्याकडून स्विकारल्या.
52 ೫೨ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ.
५२सहस्त्रपती आणि शतपती ह्यांनी परमेश्वरास समर्पण केलेले सोने सोळा हजार सातशे शेकेल भरले.
53 ೫೩ ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ತೆಗೆದುಕೊಂಡರು.
५३सैनिकांनी त्यांना युद्धात मिळालेल्या इतर वस्तू स्वतःजवळ ठेवल्या.
54 ೫೪ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.
५४मोशे आणि एलाजार याजक यांनी हजार आणि शंभर सैनिकांवरच्या प्रमुखांकडून सोने घेऊन इस्राएल लोकांसाठी परमेश्वरासमोर स्मारक म्हणून दर्शनमंडपामध्ये नेऊन ठेवले.

< ಅರಣ್ಯಕಾಂಡ 31 >