< ಅರಣ್ಯಕಾಂಡ 33 >
1 ೧ ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ:
이스라엘 자손이 모세와 아론의 관할하에 그 항오대로 애굽 땅에서 나오던 때의 노정이 이러하니라
2 ೨ ಮೋಶೆ ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರ ಪ್ರಯಾಣಗಳ ವಿವರಗಳನ್ನು ಬರೆದನು.
모세가 여호와의 명대로 그 노정을 따라 그 진행한 것을 기록하였으니 그 진행한 대로 그 노정은 이러하니라
3 ೩ ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು.
그들이 정월 십오일에 라암셋에서 발행하였으니 곧 유월절 다음날이라 이스라엘 자손이 애굽 모든 사람의 목전에서 큰 권능으로 나왔으니
4 ೪ ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.
애굽인은 여호와께서 그들 중에 치신 그 모든 장자를 장사하는 때라 여호와께서 그들의 신들에게도 벌을 주셨더라
5 ೫ ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು.
이스라엘 자손이 라암셋에서 발행하여 숙곳에 진 쳤고
6 ೬ ಸುಕ್ಕೋತಿನಿಂದ ಹೊರಟು ಅರಣ್ಯದ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.
숙곳에서 발행하여 광야 끝 에담에 진 쳤고
7 ೭ ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು.
에담에서 발행하여 바알스본 앞 비하히롯으로 돌아가서 믹돌 앞에 진 쳤고
8 ೮ ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.
하히롯 앞에서 발행하여 바다 가운데로 지나 광야에 이르고 에담 광야로 삼 일 길쯤 들어가서 마라에 진 쳤고
9 ೯ ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿಯೇ ಇಳಿದುಕೊಂಡರು.
마라에서 발행하여 엘림에 이르니 엘림에는 샘물 열둘과 종려 칠십 주가 있으므로 거기 진 쳤고
10 ೧೦ ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು.
엘림에서 발행하여 홍해 가에 진 쳤고
11 ೧೧ ಕೆಂಪು ಸಮುದ್ರದಿಂದ ಹೊರಟು ಸೀನ್ ಮರುಭೂಮಿಯಲ್ಲಿ ಇಳಿದುಕೊಂಡರು.
홍해 가에서 발행하여 신 광야에 진 쳤고
12 ೧೨ ಸೀನ್ ಮರುಭೂಮಿಯಿಂದ ಹೊರಟು ದೊಪ್ಕದಲ್ಲಿ ಇಳಿದುಕೊಂಡರು.
신 광야에서 발행하여
13 ೧೩ ದೊಪ್ಕದಿಂದ ಹೊರಟು ಆಲೂಷಿನಲ್ಲಿ ಇಳಿದುಕೊಂಡರು.
돕가에 진 쳤고 돕가에서 발행하여 알루스에 진 쳤고
14 ೧೪ ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ.
알루스에서 발행하여 르비딤에 진 쳤는데 거기는 백성의 마실 물이 없었더라
15 ೧೫ ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.
르비딤에서 발행하여 시내 광야에 진 쳤고
16 ೧೬ ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.
시내 광야에서 발행하여 기브롯핫다아와에 진 쳤고
17 ೧೭ ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.
기브롯핫다아와에서 발행하여 하세롯에 진 쳤고
18 ೧೮ ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.
하세롯에서 발행하여 릿마에 진 쳤고
19 ೧೯ ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು.
릿마에서 발행하여 림몬베레스에 진 쳤고
20 ೨೦ ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.
림몬베레스에서 발행하여 립나에 진 쳤고
21 ೨೧ ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.
립나에서 발행하여 릿사에 진 쳤고
22 ೨೨ ರಿಸ್ಸದಿಂದ ಹೊರಟು ಕೆಹೇಲಾತದಲ್ಲಿ ಇಳಿದುಕೊಂಡರು.
릿사에서 발행하여 그헬라다에 진 쳤고
23 ೨೩ ಕೆಹೇಲಾತದಿಂದ ಹೊರಟು ಶೆಫೆರ್ ಬೆಟ್ಟದಲ್ಲಿ ಇಳಿದುಕೊಂಡರು.
그헬라다에서 발행하여 세벨 산에 진 쳤고
24 ೨೪ ಶೆಫೆರ್ ಬೆಟ್ಟದಿಂದ ಹೊರಟು ಹರಾದದಲ್ಲಿ ಇಳಿದುಕೊಂಡರು.
세벨 산에서 발행하여 하라다에 진 쳤고
25 ೨೫ ಹರಾದದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.
하라다에서 발행하여 막헬롯에 진 쳤고
26 ೨೬ ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.
막헬롯에서 발행하여 다핫에 진 쳤고
27 ೨೭ ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು.
다핫에서 발행하여 데라에 진 쳤고
28 ೨೮ ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು.
데라에서 발행하여 밋가에 진 쳤고
29 ೨೯ ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು.
밋가에서 발행하여 하스모나에 진 쳤고
30 ೩೦ ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.
하스모나에서 발행하여 모세롯에 진 쳤고
31 ೩೧ ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.
모세롯에서 발행하여 브네야아간에 진 쳤고
32 ೩೨ ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು.
브네야아간에서 발행하여 홀하깃갓에 진 쳤고
33 ೩೩ ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.
홀하깃갓에서 발행하여 욧바다에 진 쳤고
34 ೩೪ ಯೊಟ್ಬಾತದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು.
욧바다에서 발행하여 아브로나에 진 쳤고
35 ೩೫ ಅಬ್ರೋನದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು.
아브로나에서 발행하여 에시온게벨에 진 쳤고
36 ೩೬ ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.
에시온게벨에서 발행하여 신 광야 곧 가데스에 진 쳤고
37 ೩೭ ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.
가데스에서 발행하여 에돔 국경 호르 산에 진 쳤더라
38 ೩೮ ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.
이스라엘 자손이 애굽 땅에서 나온 지 사십년 오월 일일에 제사장 아론이 여호와의 명으로 호르 산에 올라가 거기서 죽었으니
39 ೩೯ ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.
아론이 호르 산에서 죽던 때에 나이 일백이십삼 세이었더라
40 ೪೦ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು.
가나안 땅 남방에 거한 가나안 사람 아랏 왕이 이스라엘의 옴을 들었더라
41 ೪೧ ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.
그들이 호르 산에서 발행하여 살모나에 진 쳤고
42 ೪೨ ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.
살모나에서 발행하여 부논에 진 쳤고
43 ೪೩ ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
부논에서 발행하여 오봇에 진 쳤고
44 ೪೪ ಓಬೋತಿನಿಂದ ಹೊರಟು ಮೋವಾಬ್ಯರ ಗಡಿಯಲ್ಲಿರುವ ಯೊರ್ದನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು.
오봇에서 발행하여 모압 변경 이예아바림에 진 쳤고
45 ೪೫ ಇಯ್ಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.
이임에서 발행하여 디본갓에 진 쳤고
46 ೪೬ ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.
디본갓에서 발행하여 알몬디블라다임에 진 쳤고
47 ೪೭ ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಪೂರ್ವದಲ್ಲಿ ಇಳಿದುಕೊಂಡರು.
알몬디블라다임에서 발행하여 느보 앞 아바림 산에 진 쳤고
48 ೪೮ ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.
아바림 산에서 발행하여 여리고 맞은편 요단 가 모압 평지에 진쳤으니
49 ೪೯ ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು.
요단 가 모압 평지의 진이 벧여시못에서부터 아벨싯딤에 미쳤었더라
50 ೫೦ ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
여리고 맞은편 요단 가 모압 평지에서 여호와께서 모세에게 일러 가라사대
51 ೫೧ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ,
이스라엘 자손에게 말하여 그들에게 이르라 너희가 요단을 건너 가나안 땅에 들어가거든
52 ೫೨ ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.
그 땅 거민을 너희 앞에서 다 몰아내고 그 새긴 석상과 부어 만든 우상을 다 파멸하며 산당을 다 훼파하고
53 ೫೩ ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.
그 땅을 취하여 거기 거하라 내가 그 땅을 너희 산업으로 너희에게 주었음이라
54 ೫೪ ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
너희의 가족을 따라서 그 땅을 제비뽑아 나눌 것이니 수가 많으면 많은 기업을 주고 적으면 적은 기업을 주되 각기 제비뽑힌 대로 그 소유가 될 것인즉 너희 열조의 지파를 따라 기업을 얻을 것이니라
55 ೫೫ ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.
너희가 만일 그 땅 거민을 너희 앞에서 몰아내지 아니하면 너희의 남겨둔 자가 너희의 눈에 가시와 너희의 옆구리에 찌르는 것이 되어 너희 거하는 땅에서 너희를 괴롭게 할 것이요
56 ೫೬ ಅದಲ್ಲದೆ ನಾನು ಅವರಿಗೆ ಏನು ಮಾಡಬೇಕೆಂದು ಯೋಚಿಸಿದೇನೋ ಹಾಗೆ ನಿಮಗೂ ಮಾಡುವೆನು.’”
나는 그들에게 행하기로 생각한 것을 너희에게 행하리라