< ಅರಣ್ಯಕಾಂಡ 35 >

1 ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
In acn mwesis lun Moab sisken Infacl Jordan tulanang acn Jericho, LEUM GOD El fahk nu sel Moses,
2 “ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.
“Fahk nu sin mwet Israel lah elos enenu in sang kutu siti in acn ma elos eis lalos nu sin mwet Levi tuh elos in muta we, wi pac acn tupasrpasr ma raunela ac yohk mah we.
3 ಆ ಪಟ್ಟಣಗಳು ಲೇವಿಯರ ವಾಸ ಸ್ಥಳವಾಗುವುದು. ಸುತ್ತಲಿರುವ ಭೂಮಿಗಳು ಅವರ ದನಕುರಿಗಳಿಗಾಗಿಯೂ ಮತ್ತು ಪಶುಗಳಿಗಾಗಿಯೂ ಇರುವವು.
Siti inge ac fah ma lun mwet Levi, ac elos fah muta we. Acn ma yohk mah we inge ac fah nien tohf cow ac kain kosro nukewa natulos.
4 ನೀವು ಲೇವಿಯರಿಗೆ ಕೊಡುವ ಪಟ್ಟಣಗಳು ಸುತ್ತಲಿನ ಭೂಮಿಯ ಪ್ರತಿಯೊಂದು ಪಟ್ಟಣಗಳ ಗೋಡೆಯಿಂದ ನಾಲ್ಕು ಕಡೆಯಲ್ಲಿಯೂ ಸಾವಿರ ಮೊಳದಷ್ಟು ವಿಸ್ತರಿಸಿಕೊಂಡಿರಬೇಕು.
Acn in tohf kosro uh ac mutawauk sisken pot lun siti uh fahla yact lumfoko ke siska akosr kewa.
5 ನೀವು ಪಟ್ಟಣದ ಹೊರಗಡೆ ಪೂರ್ವ ದಿಕ್ಕಿನಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ, ಅಳೆಯಬೇಕು. ಮಧ್ಯದಲ್ಲಿ ಪಟ್ಟಣಗಳಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
Na ac orala sie acn maspang ma srikasrak kac uh oasr ke sie tausin yact ke siska kewa, ac siti uh ac oan infulwa.
6 ಮನುಷ್ಯನನ್ನು ಹತ್ಯೆಮಾಡಿದವರು ಆಶ್ರಯಕ್ಕಾಗಿ ಓಡಿ ಹೋಗುವುದಕ್ಕೋಸ್ಕರ ನೀವು ನೇಮಿಸುವ ಆರು ಆಶ್ರಯನಗರಗಳನ್ನೂ, ಬೇರೆ ನಲ್ವತ್ತೆರಡು ಪಟ್ಟಣಗಳನ್ನೂ ಅಂತು ನಲ್ವತ್ತೆಂಟು ಪಟ್ಟಣಗಳನ್ನು ಲೇವಿಯರಿಗೆ ಕೊಡಬೇಕು.
Kom fah sang onkosr siti nu sin mwet Levi tuh in siti in molela, tuh sie mwet fin uniya sie pac mwet ke ongla ouiya, elan ku in kaing nu we. In weang siti inge, sang pac angngaul luo siti an nu selos,
7 ನೀವು ಲೇವಿಯರಿಗೆ ಹುಲ್ಲುಗಾವಲುಗಳ ಸಂಗಡ ಕೊಡಬೇಕಾದ ಸಮಸ್ತ ಪಟ್ಟಣಗಳು ನಲ್ವತ್ತೆಂಟಾಗಿರಬೇಕು.
wi acn tupasrpasr ac yohk mah we ma oan raunela. Siti angngaul oalkosr nufon fah ma lun mwet Levi.
8 ಇಸ್ರಾಯೇಲರ ಸ್ವತ್ತಿನಲ್ಲಿ ಆಯಾ ಕುಲದ ಸ್ವತ್ತಿನ ಪ್ರಮಾಣಕ್ಕೆ ತಕ್ಕ ಹಾಗೆ ಹೆಚ್ಚಾದ ಜನರುಳ್ಳವರಿಂದ ಹೆಚ್ಚಾಗಿಯೂ, ಕಡಿಮೆಯಾದ ಜನರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.”
Pisen siti in acn lun kais sie sruf ma ac itukyang nu sin mwet Levi fah lumweyuk fal nu ke lupan acn lun sruf sac.”
9 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
LEUM GOD El fahk nu sel Moses,
10 ೧೦ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ,
elan fahk nu sin mwet Israel: “Pacl se kowos alukela infacl Jordan nu in acn Canaan,
11 ೧೧ ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.
kowos fah srela kutu siti uh in nien molela, ma sie mwet el ac ku in kaing nu we el fin uniya sie mwet ke el tia oru in oaya.
12 ೧೨ ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು.
Ke el muta in acn se inge, el ac tia sangeng sin sou lun mwet misa sac su suk in foloksak. Mwet se fin tukakyak ke akmas, fah tia anwuki meet liki nununkeyuk el ye mutun mwet uh.
13 ೧೩ ಹೀಗೆ ಆರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ನೇಮಿಸಬೇಕು.
Sulela siti in molela onkosr:
14 ೧೪ ನೀವು ಯೊರ್ದನ್ ನದಿಯ ಆಚೆಯಲ್ಲಿ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ನೇಮಿಸಬೇಕು. ಅವು ಆಶ್ರಯದ ಪಟ್ಟಣಗಳಾಗಿ ಇರಬೇಕು.
tolu siti uh in oan kutulap in Infacl Jordan, ac tolu siti fin acn Canaan.
15 ೧೫ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲನಾಗಲಿ, ಪರದೇಶದವನಾಗಲಿ ಮತ್ತು ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು.
Siti onkosr inge ac fah acn in wikla lun mwet Israel, oayapa mwetsac su mutangan aktuktuk yuruwos uh, ku mwetsac su ac muta inmasrlowos nwe tok. Kutena mwet su uniya mwet ke ongla ouiya, ac ku in kaing nu in sie sin siti inge.
16 ೧೬ “‘ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.
“Tusruktu sie mwet fin sringil sie mwet ke soko polo osra ac mwet sac misa, el mwet akmas. Sie mwet akmas enenu in anwuki.
17 ೧೭ ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.
Ku kutena mwet su tukya sie mwet ke sie eot inpaol ac mwet sac misa, el mwet akmas. Sie mwet akmas enenu in anwuki.
18 ೧೮ ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.
Ku sie mwet su sringilya siena mwet ke soko mwe anwuk orekla ke sak, ac mwet sac misa, na el sie mwet akmas. Sie mwet akmas enenu in anwuki.
19 ೧೯ ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.
Ma kunen sou se ma fototo emeet nu sin mwet misa sac, in uniya mwet akmas sac. El fin konalak, elan unilya.
20 ೨೦ ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,
“Mwet se fin srunga sie mwet ac unilya ke sinukunulla nu ten, ku tungalilya,
21 ೨೧ ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು.
ku fiskilya, oasr mwatal ke akmas, ac el ac fah anwuki. Ma kunen sou se ma fototo emeet nu sin mwet misa sac, in uniya mwet akmas sac. El fin konalak, elan unilya.
22 ೨೨ “‘ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,
“Tusruktu fin pa mwet se el sinukunla sie mwet nu ten, ku tungalilya na el misa, a mwet se ma oru ah el tia srungal ku oru in oaya.
23 ೨೩ ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ,
Ku fin pa mwet se el sis eot se tuh uniya mwet se su el tia liye, ac el tia pac mwet lokoalok lal uh, na fuka?
24 ೨೪ ಸಭೆಯವರು ಹತ್ಯೆಮಾಡಿದವನಿಗೂ, ಹತವಾದವನ ಸಮೀಪಬಂಧುವಿಗೂ ಈ ಸಂಗತಿಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.
Ke ac nununkeyuk lumah ouinge uh, na mwet uh in wi layen lun mwet se ma orala misa sac, ac tia wi sou lun mwet misa sac su suk in foloksak.
25 ೨೫ ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.
Mwet uh in molela mwet se ma akmas liki sou lun mwet misa sac, ac elos fah folokunulla nu in siti in molela se ma el tuh kaingla nu we. El fah muta we nwe ke Mwet Tol Fulat se in pacl sac el misa.
26 ೨೬ “‘ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದು ಆಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ,
Mwet se ma akmas ah fin illa liki siti in molela se ma el kaing nu we,
27 ೨೭ ಹತವಾದವನ ಸಮೀಪಬಂಧುವು ಅವನನ್ನು ಆಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ.
ac sou lun mwet misa sac fin konalak ac unilya, na foloksak se inge ac tia oaoa in akmas.
28 ೨೮ ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯ ಪಟ್ಟಣದೊಳಗೆ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.
Mwet se ma akmas el enenu in mutana in siti in molela nwe ke na Mwet Tol Fulat sac misa, na toko el fah ku in folokla nu in acn sel sifacna.
29 ೨೯ “‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.
Ma sap inge ma nu suwos ac fwilin tulik nutuwos yen nukewa kowos muta we.
30 ೩೦ ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
“Sie mwet fin tukakyak ke akmas, na enenu in oasr mwet loh luo ku pus liki, tuh in ku in koneyukyak lah oasr mwatal, ac fal elan misa. Mwet loh sefanna tiana fal in akpwayeye tukak lun akmas.
31 ೩೧ “‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
Sie mwet akmas enenu in anwuki. El tia ku in kaingkunla mwe kai se inge el finne sang mani in moli.
32 ೩೨ ನೀವು ಆಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
Mwet se fin kaingla nu in sie siti in molela, nikmet lela nu sel elan sang mani molel in folok nu acn sel meet liki Mwet Tol Fulat el misa.
33 ೩೩ “‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
Kowos fin oru lumah se inge, kowos ac akfohkfokyela facl ma kowos muta we uh, mweyen akmas uh el akfohkfokyela acn. Mwet akmas sac fin tia misa, na wangin pac sie inkanek in aknasnasyela acn se ma sie mwet el anwuki we.
34 ೩೪ ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’”
Nikmet akfohkfokyela facl se ma kowos muta we uh, tuh nga LEUM GOD, ac nga muta inmasrlon mwet Israel.”

< ಅರಣ್ಯಕಾಂಡ 35 >