< ಅರಣ್ಯಕಾಂಡ 36 >
1 ೧ ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,
Y llegaron los príncipes de los padres de la familia de los hijos de Galaad, hijo de Maquir, hijo de Manasés, de las familias de los hijos de José, y hablaron delante de Moisés, y de los príncipes cabezas de padres de los hijos de Israel,
2 ೨ “ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.
Y dijeron: Jehová mandó a mi señor que diese la tierra a los hijos de Israel por suerte en posesión: también Jehová ha mandado a mi señor, que dé la posesión de Salfaad nuestro hermano a sus hijas:
3 ೩ ಹೀಗಿರಲು ಅವರು ಇಸ್ರಾಯೇಲರ ಬೇರೆ ಕುಲದವರಿಗೆ ಮದುವೆಯಾದ ಪಕ್ಷಕ್ಕೆ ಅವರ ಸ್ವತ್ತು ನಮ್ಮ ಕುಲದಿಂದ ತೆಗೆಯಲ್ಪಟ್ಟು ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಆದುದರಿಂದ ನಮ್ಮ ಸ್ವತ್ತಿಗೆ ನಷ್ಟವುಂಟಾಗುವುದು.
Las cuales se casarán con algunos de los hijos de las tribus de los hijos de Israel, y la herencia de ellas así será disminuida de la herencia de nuestros padres, y será añadida a la herencia de la tribu de la cual serán: y será quitada de la suerte de nuestra heredad.
4 ೪ ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.
Y cuando viniere el jubileo de los hijos de Israel, la heredad de ellas será añadida a la heredad de la tribu de sus maridos, y así la heredad de ellas será quitada de la heredad de la tribu de nuestros padres.
5 ೫ ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರಿಗೆ, “ಯೋಸೇಫನ ಕುಲದವರು ಹೇಳುವ ಮಾತು ನ್ಯಾಯವಾಗಿದೆ.
Entonces Moisés mandó a los hijos de Israel por dicho de Jehová, diciendo: La tribu de los hijos de José habla derecho:
6 ೬ ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ.
Esto es lo que ha mandado Jehová acerca de las hijas de Salfaad, diciendo: Cásense como a ellas les pluguiere, empero en la familia de la tribu de su padre se casarán:
7 ೭ ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು.
Porque la heredad de los hijos de Israel no sea traspasada de tribu en tribu; porque cada uno de los hijos de Israel se allegará a la heredad de la tribu de sus padres.
8 ೮ ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.
Y cualquiera hija que poseyere heredad de las tribus de los hijos de Israel, con alguno de la familia de la tribu de su padre se casará, para que los hijos de Israel posean cada uno la heredad de sus padres;
9 ೯ ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು” ಎಂದು ಆಜ್ಞಾಪಿಸಿದನು.
Porque la heredad no ande rodeando de una tribu a otra: mas cada una de las tribus de los hijos de Israel se llegue a su heredad.
10 ೧೦ ಚಲ್ಪಹಾದನ ಹೆಣ್ಣುಮಕ್ಕಳು ಯೆಹೋವನ ಆಜ್ಞಾನುಸಾರವೇ ನಡೆದುಕೊಂಡರು.
Como Jehová mandó a Moisés, así hicieron las hijas de Salfaad.
11 ೧೧ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು.
Y así Maala, y Tersa, y Hegla, y Melca, y Noa hijas de Salfaad se casaron con hijos de sus tios:
12 ೧೨ ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸ್ವತ್ತು ತಂದೆಯ ಕುಲದಲ್ಲಿಯೇ ಉಳಿಯಿತು.
De la familia de los hijos de Manasés hijo de José fueron mujeres, y la heredad de ellas fue de la tribu de la familia de su padre.
13 ೧೩ ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.
Estos son los mandamientos y los derechos que mandó Jehová por mano de Moisés a los hijos de Israel en los campos de Moab junto al Jordán de Jericó.